ಕ್ರೀಡೆ

ಹಾಕಿ ಇಂಡಿಯಾ ನೂತನ ಅಧ್ಯಕ್ಷರಾಗಿ ಮಣಿಪುರದ ಜ್ಞಾನೇಂದ್ರೊ ನಿಂಗೊಮ್​​ಬಾಮ್ ಆಯ್ಕೆ

Raghavendra Adiga

ನವದೆಹಲಿ: ಮಣಿಪುರದ ಜ್ಞಾನೇಂದ್ರೊ ನಿಂಗೊಮ್​​ಬಾಮ್ ಹಾಕಿ ಇಂಡಿಯಾ (ಎಚ್‌ಐ) ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಮೊಹಮ್ಮದ್ ಮುಷ್ತಾಕ್ ಅಹ್ಮದ್ ಅವರಿಂದ ಅಧಿಕಾರ ವಹಿಸಿಕೊಂಡರು.

ಹಾಕಿ ಇಂಡಿಯಾದ ಕಾಂಗ್ರೆಸ್ ಮತ್ತು ಚುನಾವಣೆಗಳಲ್ಲಿ ಹಿರಿಯ ಉಪಾಧ್ಯಕ್ಷ ಹುದ್ದೆಗೆ ಅವಿರೋಧವಾಗಿ ಆಯ್ಕೆಯಾದ ನಂತರ ಅಹ್ಮದ್ ಫೆಡರೇಶನ್‌ನಲ್ಲಿ ಉಳಿದಿದ್ದಾರೆ. ಅಹ್ಮದ್ ಹಾಕಿ ಇಂಡಿಯಾ ಅಧ್ಯಕ್ಷ ಸ್ಥಾನಕ್ಕೆ ಜುಲೈನಲ್ಲಿ ರಾಜೀನಾಮೆ ಸಲ್ಲಿಸಿದ್ದರು.

ಕೋವಿಡ್ ಸಾಂಕ್ರಾಮಿಕ ರೋಗವನ್ನು ಎದುರಿಸಲು ಆಯಾ ರಾಜ್ಯ ಸರ್ಕಾರಗಳು ವಿಧಿಸಿರುವ ನಿರ್ಬಂಧಗಳಿಂದಾಗಿ ಪ್ರಯಾಣ ಸಾಧ್ಯವಾಗದ ಹಿನ್ನೆಲೆ ಸದಸ್ಯ ಘಟಕಗಳಿಗೆ ವೀಡಿಯೊ ಕಾನ್ಫರೆನ್ಸಿಂಗ್ ಸೌಲಭ್ಯದ ಮೂಲಕ ಸಭೆಗೆ ಪ್ರವೇಶ ಕಲ್ಪಿಸಲಾಗಿತ್ತು. ಈ ಸಮಯ ಅವಿರೋಧವಾಗಿ ಆಯ್ಕೆಯಾದ ಜ್ಞಾನೇಂದ್ರೊ ಈಶಾನ್ಯ ರಾಜ್ಯದಿಂದ ಈ ಹುದ್ದೆಗೆ ಆಯ್ಕೆಯಾದ ಮೊದಲಿಗರೆನಿಸಿದ್ದಾರೆ.

ಎರಡು ವರ್ಷಗಳ ಅವಧಿಗೆ ಆಯ್ಕೆಯಾದ ಜ್ಞಾನೇಂದ್ರೊ ನಿಂಗೊಮ್​​ಬಾಮ್2009-2014ರ ನಡುವೆ ಮಣಿಪುರ ಹಾಕಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ ಮತ್ತು ಒಂದು ದಶಕಕ್ಕೂ ಹೆಚ್ಚು ಕಾಲ ಹಾಕಿ ಜತೆಗೆ ಸಂಬಂಧ ಹೊಂದಿದ್ದಾರೆ. ಈಶಾನ್ಯ ರಾಜ್ಯಗಳಲ್ಲಿ ತಳಮಟ್ಟದಲ್ಲಿ ಹಾಕಿ ಅಭಿವೃದ್ಧಿಪಡಿಸುವಲ್ಲಿ ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಅಹ್ಮದ್ ಅವರ ಅಧಿಕಾರಾವಧಿಯಲ್ಲಿ ಹಾಕಿ ಇಂಡಿಯಾ ಐ 2018 ರಲ್ಲಿ ವಿಶ್ವಕಪ್ ಸೇರಿದಂತೆ ಹಲವಾರು ಪ್ರಮುಖ ಅಂತಾರಾಷ್ಟ್ರೀಯ ಪಂದ್ಯಾವಳಿಗಳನ್ನು ಆಯೋಜಿಸಿತ್ತು. ಮೇ ತಿಂಗಳಲ್ಲಿ ಹಾಕಿ ಇಂಡಿಯಾ ವಿಶೇಷ ಕಾಂಗ್ರೆಸ್ ಅನ್ನು ನಡೆಸಿತು, ಅಲ್ಲಿ ಸಾಂಕ್ರಾಮಿಕ ರೋಗದ ಕಾರಣ ದೇಶಾದ್ಯಂತ ಕ್ರೀಡಾ ಚಟುವಟಿಕೆಗಳನ್ನು ಹಠಾತ್ತನೆ ನಿಲ್ಲಿಸಿದ ನಂತರ ಕಾರ್ಯನಿರ್ವಾಹಕ ಮಂಡಳಿಯ ಸದಸ್ಯರು ಪುರುಷರು ಮತ್ತು ಮಹಿಳಾ ರಾಷ್ಟ್ರೀಯ ತಂಡಗಳ ಒಲಿಂಪಿಕ್ ಸಿದ್ಧತೆಗಳ ಸ್ಥಿತಿಗತಿ ಸಂಬಂಧ ಚರ್ಚೆಯಾಗಿತ್ತು.

"ಹಾಕಿಇಂಡಿಯಾದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಜ್ಞಾನೇಂದ್ರೊ ನಿಂಗೋಮ್​​ಬಾಮ್ ಅವರನ್ನು ನಾನು ಅಭಿನಂದಿಸುತ್ತೇನೆ ಮತ್ತು ಅಹ್ಮದ್ ಅವರನ್ನು ಹಿರಿಯ ಉಪಾಧ್ಯಕ್ಷರಾಗಿ ಹೊಸ ಸ್ಥಾನದಲ್ಲಿ ಮತ್ತೆ ಹಾಕಿ ಇಂಡಿಯಾ ಕಾರ್ಯನಿರ್ವಾಹಕ ಮಂಡಳಿಗೆ ಸ್ವಾಗತಿಸುತ್ತೇನೆ" ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ರಾಜಿಂದರ್ ಸಿಂಗ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇಂದಿನ ಸಭೆಯಲ್ಲಿ 2021 ರ ರಾಷ್ಟ್ರೀಯ ಚಾಂಪಿಯನ್‌ಶಿಪ್ ಸೇರಿ ಹಲವು ವಿಚಾರದ ಕುರಿತು ಮಹತ್ವದ ಚರ್ಚೆ ನಡೆದಿದೆ.

SCROLL FOR NEXT