ಸೆರೆನಾ ವಿಲಿಯಮ್ಸ್ 
ಕ್ರೀಡೆ

ಗಾಯದ ಸಮಸ್ಯೆ: ಫ್ರೆಂಚ್ ಓಪನ್‌ನಿಂದ ಹಿಂದೆ ಸರಿದ ಸೆರೆನಾ ವಿಲಿಯಮ್ಸ್

23 ಬಾರಿಯ ಗ್ರ್ಯಾಂಡ್ ಸ್ಲಾಂ ಚಾಂಪಿಯನ್ ಸೆರೆನಾ ವಿಲಿಯಮ್ಸ್, ಫ್ರೆಂಚ್ ಓಪನ್ ಪಂದ್ಯಾವಳಿಯ ಎರಡನೇ ಸುತ್ತಿನಲ್ಲಿ ಗಾಯದ ಸಮಸ್ಯೆಯಿಂದ ಟೂರ್ನಿಯಿಂದ ಹೊರನಡೆದಿದ್ದಾರೆ.

ಪ್ಯಾರೀಸ್: 23 ಬಾರಿಯ ಗ್ರ್ಯಾಂಡ್ ಸ್ಲಾಂ ಚಾಂಪಿಯನ್ ಸೆರೆನಾ ವಿಲಿಯಮ್ಸ್, ಫ್ರೆಂಚ್ ಓಪನ್ ಪಂದ್ಯಾವಳಿಯ ಎರಡನೇ ಸುತ್ತಿನಲ್ಲಿ ಗಾಯದ ಸಮಸ್ಯೆಯಿಂದ ಟೂರ್ನಿಯಿಂದ ಹೊರನಡೆದಿದ್ದಾರೆ.

ಮೂರು ವಾರಗಳ ಹಿಂದೆ ಯುಎಸ್ ಓಪನ್‌ನಲ್ಲಿಸೆಮಿಫೈನಲ್  ಹಣಾಹಣಿಯಲ್ಲಿ ಸೋತ ಸೆರೆನಾ ತಮಗೆ ತಾವೇ ನೋವು ಮಾಡಿಕೊಂಡಿದ್ದರು. ಇದೀಗ ಮತ್ತೆ ಗಾಯದಿಂದ ಬಳಲುತ್ತಿದ್ದು ಇದು  "ಕೆಟ್ಟ ಸಮಯ" ಮತ್ತು "ದುರದೃಷ್ಟ"  ಎಂದು ಹೇಳೀದ್ದಾರೆ. 

ಇದೀಗ ಸೆರೆನಾ ತಮಗೆ "ಸರಿಯಾಗಿ ಗುಣವಾಗಲು ಸಾಕಷ್ಟು ಸಮಯ ಬೇಕು." "“ನಾಲ್ಕರಿಂದ ಆರು ವಾರಗಳ ವಿಶ್ರಾಂತಿಯ ಅಗತ್ಯವಿದೆ ಹಾಗಾಗಿ ಏನೂ ಮಾಡಲು ಸಾಧ್ಯವಿಲ್ಲ" ಎಂದು ತನ್ನ ಅಳಲು ತೋಡಿಕೊಂಡಿದ್ದಾರೆ.

ಫ್ರೆಂಚ್ ಓಪನ್ ನಲ್ಲಿ ಸೆರೆನಾ ಸ್ವೆತಾನಾ ಪಿರೊಂಕೋವಾ ಅವರನ್ನು ಎದುರಿಸಬೇಕಾಗಿತ್ತು.

ಇದೀಗ ಸೆರೆನಾ ಹೇಳಿದಂತೆ ಅವರು 2020ರಲ್ಲಿ ಇನ್ನೊಂದು ಟೂರ್ನಿಯಲ್ಲಿ ಭಾಗವಹಿಸುವ "ಸಾಧ್ಯತೆ ಬಹಳ ಕಡಿಮೆ ಇದೆ"

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?