ಕ್ರೀಡೆ

ದೆಹಲಿ ಕಾಮನ್ ವೆಲ್ತ್ ಗೇಮ್ಸ್  ಚಿನ್ನದ ಪದಕ ವಿಜೇತೆ ಕೃಷ್ಣಾ ಪೂನಿಯಾಗೆ ಕೋವಿಡ್-19 ಪಾಸಿಟಿವ್ 

Nagaraja AB

ನವದೆಹಲಿ: ಕಾಮನ್ ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ, ರಾಜಸ್ಛಾನದ ಶಾಸಕಿ ಕೃಷ್ಣಾ ಪೂನಿಯಾ ಅವರಿಗೆ ಕೋವಿಡ್-19 ಪಾಸಿಟಿವ್ ಇರುವುದು ಭಾನುವಾರ ಖಚಿತಪಟ್ಟಿದೆ. ಸದ್ಯ ಅವರು ಜೈಪುರದ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

43 ವರ್ಷದ ಕೃಷ್ಣಾ, 2010ರಲ್ಲಿ ದೆಹಲಿಯಲ್ಲಿ ನಡೆದ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಡಿಸ್ಕಸ್ ಥ್ರೋ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದರು. ಇದರೊಂದಿಗೆ ಕ್ರೀಡಾಕೂಟದ ವೈಯಕ್ತಿಕ ಸ್ಪರ್ಧೆಯೊಂದರಲ್ಲಿ ಚಿನ್ನ ಗಳಿಸಿದ ಭಾರತದ ಮೊದಲ ಮಹಿಳಾ ಅಥ್ಲೀಟ್ ಎನಿಸಿಕೊಂಡಿದ್ದರು. ಸದ್ಯ ಅವರು, ರಾಜಸ್ಥಾನ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೆಮ್ಮು, ಸಣ್ಣ ಪ್ರಮಾಣದ ಜ್ವರದಿಂದಾಗಿ ಶನಿವಾರ ಪರೀಕ್ಷೆ ಮಾಡಿಸಿದಾಗ ಸೋಂಕು ಪತ್ತೆಯಾಗಿರಲಿಲ್ಲ. ಇಂದು ರಾಜಸ್ಥಾನ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಆಸ್ಪತ್ರೆಗೆ ತೆರಳಿ ಸಿಟಿ ಸ್ಕ್ಯಾನ್ ಮಾಡಿಸಿದಾಗ ಕೋವಿಡ್-19 ಪತ್ತೆಯಾಗಿದೆ ಎಂದು ಅವರ ಪತಿ ವಿರೇಂದರ್ ಪೂನಿಯಾ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ. ಕೃಷ್ಣಾ ಪೂನಿಯಾ ರಾಜಸ್ಥಾನದ ಸಾದಲ್ಪುರ ಕ್ಷೇತ್ರದ ಹಾಲಿ ಶಾಸಕಿಯಾಗಿದ್ದಾರೆ. 

SCROLL FOR NEXT