ಶ್ರೀಹರಿ ನಟರಾಜ್ 
ಕ್ರೀಡೆ

ಉಜ್ಬೇಕಿಸ್ತಾನ್ ಓಪನ್: ರಾಜ್ಯದ ಈಜುಪಟು ಶ್ರೀಹರಿ ನಟರಾಜ್ ರಿಂದ ರಾಷ್ಟ್ರೀಯ ದಾಖಲೆ ಸೃಷ್ಟಿ

ಇಲ್ಲಿ ನಡೆದ ಉಜ್ಬೇಕಿಸ್ತಾನ್ ಓಪನ್ ಚಾಂಪಿಯನ್‌ಶಿಪ್‌ನಲ್ಲಿ ಎರಡನೇ ಚಿನ್ನ ಗೆದ್ದ ಕರ್ನಾಟಕದ ಈಜುಪಟು ಶ್ರೀಹರಿ ನಟರಾಜ್ 50 ಮೀಟರ್ ಬ್ಯಾಕ್‌ಸ್ಟ್ರೋಕ್‌ನಲ್ಲಿ ರಾಷ್ಟ್ರೀಯ ದಾಖಲೆ ಸೃಷ್ಟಿಸಿದ್ದಾರೆ.

ತಾಷ್ಕೆಂಟ್: ಇಲ್ಲಿ ನಡೆದ ಉಜ್ಬೇಕಿಸ್ತಾನ್ ಓಪನ್ ಚಾಂಪಿಯನ್‌ಶಿಪ್‌ನಲ್ಲಿ ಎರಡನೇ ಚಿನ್ನ ಗೆದ್ದ ಕರ್ನಾಟಕದ ಈಜುಪಟು ಶ್ರೀಹರಿ ನಟರಾಜ್ 50 ಮೀಟರ್ ಬ್ಯಾಕ್‌ಸ್ಟ್ರೋಕ್‌ನಲ್ಲಿ ರಾಷ್ಟ್ರೀಯ ದಾಖಲೆ ಸೃಷ್ಟಿಸಿದ್ದಾರೆ.

ಶನಿವಾರ ರಾತ್ರಿ ನಡೆದ ಫಿನಾ ಮಾನ್ಯತೆ ಪಡೆದ ಒಲಿಂಪಿಕ್ ಅರ್ಹತಾ ಸ್ಪರ್ಧೆಯಲ್ಲಿ 20 ವರ್ಷದ ಆಟಗಾರ 25.11 ಸೆಕೆಂಡುಗಳಲ್ಲಿ ಗುರಿ ತಲುಪಿದ್ದರು.

ಈ ಕೂಟದಲ್ಲಿ ಭಾರತೀಯ ಈಜುಪಟುಗಳು ಇದುವರೆಗೆ 29 ಪದಕ - 18 ಚಿನ್ನ, ಏಳು ಬೆಳ್ಳಿ ಮತ್ತು ನಾಲ್ಕು ಕಂಚು ಗಳಿಸಿದರು.

ಈ ವಾರದ ಆರಂಭದಲ್ಲಿ ಬೆಂಗಳೂರಿನ ಶ್ರೀಹರಿ 100 ಮೀಟರ್ ಬ್ಯಾಕ್‌ಸ್ಟ್ರೋಕ್‌ನಲ್ಲಿ ಎರಡು ಬಾರಿ ರಾಷ್ಟ್ರೀಯ ದಾಖಲೆ ಬರೆದಿದ್ದರಿಂದ ಇದು ಎರಡು ದಿನಗಳಲ್ಲಿ ಶ್ರೀಹರಿಯ ಮೂರನೇ ರಾಷ್ಟ್ರೀಯ ದಾಖಲೆಯಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT