ರಾಣಿ ರಾಂಪಾಲ್ 
ಕ್ರೀಡೆ

ಬೆಂಗಳೂರಿನಲ್ಲಿರುವ ಭಾರತ ಮಹಿಳಾ ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್ ಸೇರಿ 7 ಮಂದಿ ಆಟಗಾರ್ತಿಯರಿಗೆ ಕೊರೋನಾ!

ತರಬೇತಿ ನಿಮಿತ್ತ ಬೆಂಗಳೂರಿನಲ್ಲಿರುವ ಭಾರತ ಮಹಿಳಾ ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್ ಸೇರಿದಂತೆ ಏಳು ಮಂದಿ ಆಟಗಾರ್ತಿಯರ ಕೊರೋನಾ ಸೋಂಕು ಒಕ್ಕರಿಸಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ತರಬೇತಿ ನಿಮಿತ್ತ ಬೆಂಗಳೂರಿನಲ್ಲಿರುವ ಭಾರತ ಮಹಿಳಾ ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್ ಸೇರಿದಂತೆ ಏಳು ಮಂದಿ ಆಟಗಾರ್ತಿಯರ ಕೊರೋನಾ ಸೋಂಕು ಒಕ್ಕರಿಸಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿರುವ ಭಾರತ ಕ್ರೀಡಾ ಪ್ರಾಧಿಕಾರ (ಸಾಯ್‌) ಕೇಂದ್ರದಲ್ಲಿ ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಭಾರತ ಮಹಿಳಾ ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್ ಸೇರಿದಂತೆ ಏಳು ಮಂದಿ ಆಟಗಾರ್ತಿಯರಲ್ಲಿ ಸೋಮವಾರ ಕೋವಿಡ್‌-19 ದೃಢಪಟ್ಟಿದೆ. ಸೋಂಕಿತರಲ್ಲಿ ಇಬ್ಬರು ನೆರವು  ಸಿಬ್ಬಂದಿಯೂ ಕೂಡ ಸೇರಿದ್ದಾರೆ ಎಂದು ತಿಳಿದುಬಂದಿದೆ.

ಸೋಂಕಿತರಲ್ಲಿ ರೋಗ ಲಕ್ಷಣಗಳಿಲ್ಲವಾದರೂ, ಅವರನ್ನು ತೀವ್ರ ನಿಗಾದಲ್ಲಿರಿಸಲಾಗಿದೆ. ಸಾಯ್ ಕೇಂದ್ರದಲ್ಲೇ ಅವರನ್ನು ವಿಶೇಷ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗಿದೆ.  ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಸಾಯ್, 'ತಮ್ಮ ತವರು ರಾಜ್ಯಗಳಿಂದ ಇಲ್ಲಿಗೆ ಬಂದ ಆಟಗಾರ್ತಿಯರನ್ನು, ಕ್ವಾರಂಟೈನ್ ಮಾಡಿದ ಬಳಿಕ  ಏಪ್ರಿಲ್ 24ರಂದು ನಿಯಮಗಳ ಅನ್ವಯ ಕೋವಿಡ್‌ ಪರೀಕ್ಷೆಗೆ ಒಳಪಡಿಸಲಾಗಿತ್ತು' ಎಂದು ಸಾಯ್‌ ಹೇಳಿಕೆಯಲ್ಲಿ ತಿಳಿಸಿದೆ.

ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್ ಸೇರಿದಂತೆ ಸಹ ಆಟಗಾರ್ತಿಯರಾದ ಸವಿತಾ ಪುನಿಯಾ, ಶರ್ಮಿಳಾ ದೇವಿ, ರಜನಿ, ನವಜೋತ್ ಕೌರ್‌, ನವನೀತ್ ಕೌರ್‌ ಹಾಗೂ ಸುಶೀಲಾ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಅಲ್ಲದೆ ವಿಡಿಯೊ ಅನಾಲಿಸ್ಟ್‌ ಅಮೃತಾ ಪ್ರಕಾಶ್‌ ಮತ್ತು ವೈಜ್ಞಾನಿಕ ಸಲಹೆಗಾರ್ತಿ  ವೇಯ್ನ್‌ ಲೊಂಬಾರ್ಡ್‌ ಕೂಡ ಕೊರೊನಾ ಸೋಂಕು ಒಕ್ಕರಿಸಿದೆ. 

ಭಾರತ ಮಹಿಳಾ ತಂಡವು ಟೋಕಿಯೊ ಒಲಿಂಪಿಕ್ಸ್ ಸಿದ್ದತೆಗಾಗಿ ಕಳೆದ ಭಾನುವಾರ ಬೆಂಗಳೂರಿಗೆ ಆಗಮಿಸಿತ್ತು. ಜನವರಿಯಲ್ಲಿ ಭಾರತ ಮಹಿಳಾ ಹಾಕಿ ತಂಡವು ಅರ್ಜೆಂಟೀನಾದಲ್ಲಿ ಪ್ರವಾಸ ಮಾಡಿ ಅಲ್ಲಿ ಏಳು ಪಂದ್ಯಗಳನ್ನು ಆಡಿತ್ತು. ಫೆಬ್ರವರಿ-ಮಾರ್ಚ್‌ನಲ್ಲಿ ನಡೆದ ಜರ್ಮನಿ ಪ್ರವಾಸದಲ್ಲಿ, ಭಾರತೀಯ ಮಹಿಳಾ  ತಂಡವು ವಿಶ್ವದ ನಾಲ್ಕನೇ ಕ್ರಮಾಂಕದ ವಿರುದ್ಧದ ಎಲ್ಲಾ ನಾಲ್ಕು ಪಂದ್ಯಗಳನ್ನು ಸೋತಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT