ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಟೋಕಿಯೊ ಒಲಂಪಿಕ್ಸ್: ಭಾರತಕ್ಕೆ ಮತ್ತೊಂದು ಪದಕ; ಕಂಚಿಗೆ ಮುತ್ತಿಟ್ಟ ಪಿವಿ ಸಿಂಧು

ಟೋಕಿಯೊ ಒಲಂಪಿಕ್ಸ್ ನ ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ ವಿಭಾಗದಲ್ಲಿ ಭಾರತದ ಖ್ಯಾತ ಆಟಗಾರ್ತಿ ಪಿವಿ ಸಿಂಧು ಕಂಚಿಗೆ ಮುತ್ತಿಟ್ಟಿದ್ದಾರೆ.

ಪಿವಿ ಸಿಂಧು
Vishwanath S
Updated On : 1 Aug 2021, 6:24 pm

ಟೋಕಿಯೊ: ಟೋಕಿಯೊ ಒಲಂಪಿಕ್ಸ್ ನ ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ ವಿಭಾಗದಲ್ಲಿ ಭಾರತದ ಖ್ಯಾತ ಆಟಗಾರ್ತಿ ಪಿವಿ ಸಿಂಧು ಕಂಚಿಗೆ ಮುತ್ತಿಟ್ಟಿದ್ದಾರೆ. 

ಈ ಮೂಲಕ ಪಿವಿ ಸಿಂಧು ಒಲಂಪಿಕ್ಸ್ ನಲ್ಲಿ ಎರಡು ಪದಕ ಗೆದ್ದ ಸಾಧನೆ ಮಾಡಿದ್ದಾರೆ. 2016ರಲ್ಲಿ ರಿಯೋದಲ್ಲಿ ನಡೆದಿದ್ದ ಒಲಂಪಿಕ್ಸ್ ನಲ್ಲಿ ಸಿಂಧು ಬೆಳ್ಳಿ ಪದಕ ಗೆದ್ದಿದ್ದರು.

ಸೆಮಿಫೈನಲ್ ಪಂದ್ಯದಲ್ಲಿ ಎರಡನೇ ಶ್ರೇಯಾಂಕಿತೆ ತೈಜು ಯಿಂಗ್ ವಿರುದ್ಧ ಪಿವಿ ಸಿಂಧು ಸೋಲು ಕಂಡಿದ್ದರು. ಇಂದು ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಸಿಂಧು ಚೀನಾದ ಹೀ ಬಿಂಗ್ಜಿಯಾವೊ ವಿರುದ್ಧ 21-13, 21-15 ನೇರ ಸೆಟ್ ಗಳಿಂದ ಗೆಲುವು ಸಾಧಿಸಿದರು. 

Advertisement

Advertisement

ಟೋಕಿಯೊ ಒಲಂಪಿಕ್ಸ್ ನಲ್ಲಿ ಭಾರತಕ್ಕೆ ಎರಡನೇ ಪದಕ ಬಂದಿದೆ. ವೇಟ್ ಲಿಫ್ಟಿಂಗ್ ನಲ್ಲಿ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಪದಕ ತಂದುಕೊಟ್ಟಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments