ಕ್ರೀಡೆ

ಟೋಕಿಯೊ ಒಲಂಪಿಕ್ಸ್: ಭಾರತದ ಮತ್ತೊಂದು ಪದಕದ ಆಸೆ ಭಗ್ನ, ಸೆಮಿ ಫೈನಲ್ ಗೇರುವಲ್ಲಿ ಸ್ಪ್ರಿಂಟರ್ ದ್ಯುತಿ ಚಾಂದ್ ವಿಫಲ

Srinivasamurthy VN

ಟೋಕಿಯೋ: ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ 32 ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಮತ್ತೊಂದು ಪದಕದ ಆಸೆ ಭಗ್ನವಾಗಿದ್ದು, ಭಾರತದ ದ್ಯುತಿ ಚಾಂದ್ ಸೆಮಿ ಫೈನಲ್ ಗೇರುವಲ್ಲಿ ವಿಫಲರಾಗಿದ್ದಾರೆ.

ಅಥ್ಲೆಟಿಕ್ ಮಹಿಳೆಯರ 200 ಮೀ ರಿಲೇಯ ಮೊದಲ ಸುತ್ತಿನಲ್ಲೇ ಭಾರತದ ದ್ಯುತಿ ಚಾಂದ್ 7ನೇ ಸ್ಥಾನವನ್ನು ಪಡೆದುಕೊಳ್ಳುವುದರ ಮೂಲಕ ಮುಂದಿನ ಸುತ್ತಿಗೆ ಅರ್ಹತೆ ಪಡೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಅಲ್ಲದೆ ಸ್ಪರ್ಧೆಯಿಂದ ಔಟ್ ಆಗಿದ್ದಾರೆ.

ಇನ್ನು ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಈ ವರೆಗೂ 2 ಪದಕಗಳನ್ನು ಗೆದ್ದಿದ್ದು, ಮಹಿಳಾ ವೇಟ್ ಲಿಫ್ಟಿಂಗ್‌ನಲ್ಲಿ ಮೀರಾಬಾಯಿ ಚಾನು (49 ಕೆಜಿ ವಿಭಾಗ) ಭಾರತಕ್ಕೆ ಬೆಳ್ಳಿ ಪದಕ ತಂದಿದ್ದು, ನಿನ್ನೆ ಬ್ಯಾಡ್ಮಿಂಟನ್ ನಲ್ಲಿ ಪಿವಿ ಸಿಂಧು ಕಂಚಿನ ಪದಕ ಗೆದ್ದಿದ್ದಾರೆ. 

ಅಂತೆಯೇ ಮಹಿಳೆಯರ 69 ಕೆಜಿ ವಿಭಾಗದ ಬಾಕ್ಸಿಂಗ್ ಎರಡನೇ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಭಾರತದ ಲವ್ಲಿನಾ ಬರ್ಗಹೈನ್ ಅವರು ಚೈನೀಸ್ ತೈಪೆಯ ಚೆನ್ ನಿಯೆನ್-ಚಿನ್ ವಿರುದ್ಧ 4-1 ಅಂತರದಲ್ಲಿ ಜಯ ಸಾಧಿಸುವುದರ ಮೂಲಕ ಸೆಮಿಫೈನಲ್ ಪ್ರವೇಶಿಸಿದ್ದು, ಭಾರತಕ್ಕೆ ಮತ್ತೊಂದು ಪದಕ ಖಾತ್ರಿ  ಪಡಿಸಿದ್ದಾರೆ. 
 

SCROLL FOR NEXT