ಭಾರತ - ಅರ್ಜೆಂಟೀನಾ ಆಟಗಾರರು 
ಕ್ರೀಡೆ

ಟೋಕಿಯೊ ಒಲಂಪಿಕ್ಸ್: ಸೆಮಿಫೈನಲ್‌ನಲ್ಲಿ ಭಾರತದ ಮಹಿಳಾ ಹಾಕಿ ತಂಡಕ್ಕೆ ನಿರಾಸೆ, ಚಿಗುರಿದ ಕಂಚಿನ ಆಸೆ

ಟೋಕಿಯೊ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ಸೆಮಿಫೈನಲ್‌ ಪ್ರವೇಶಿಸಿ ದಾಖಲೆ ಬರೆದಿದ್ದ ಭಾರತದ ಮಹಿಳಾ ಹಾಕಿ ತಂಡ ಬುಧವಾರ ನಡೆದ ಸೆಮಿಫೈನಲ್‌ನಲ್ಲಿ ಅರ್ಜೆಂಟೀನಾ ವಿರುದ್ಧ 1-2 ಗೋಲುಗಳ ಅಂತರದ ಸೋಲು...

ಟೋಕಿಯೊ: ಟೋಕಿಯೊ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ಸೆಮಿಫೈನಲ್‌ ಪ್ರವೇಶಿಸಿ ದಾಖಲೆ ಬರೆದಿದ್ದ ಭಾರತದ ಮಹಿಳಾ ಹಾಕಿ ತಂಡ ಬುಧವಾರ ನಡೆದ ಸೆಮಿಫೈನಲ್‌ನಲ್ಲಿ ಅರ್ಜೆಂಟೀನಾ ವಿರುದ್ಧ 1-2 ಗೋಲುಗಳ ಅಂತರದ ಸೋಲು ಅನುಭವಿಸಿ ನಿರಾಸೆ ಮೂಡಿಸಿದೆ.

ಇಂದು ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಉತ್ತಮ ಪ್ರದರ್ಶನ ನೀಡಿದರೂ, ಗೆಲುವು ದಾಖಲಿಸುವಲ್ಲಿ ವಿಫಲವಾಯಿತು. ಅಂತಿಮವಾಗ ಭಾರತ 1-2 ಅಂತರದಿಂದ ಅರ್ಜೆಂಟೀನಾ ವಿರುದ್ಧ ಸೋಲು ಅನುಭವಿಸಿತು.

ಆದರೂ ಶುಕ್ರವಾರ ನಡೆಯಲಿರುವ ಮೂರು ನಾಲ್ಕನೇ ಸ್ಥಾನದ ಪ್ಲೇ-ಆಫ್ ಪಂದ್ಯದಲ್ಲಿ ಗ್ರೇಟ್ ಬ್ರಿಟನ್ ವಿರುದ್ಧ ಸೆಣಸಲಿರುವ ಭಾರತದ ಮಹಿಳಾ ಹಾಕಿ ತಂಡಕ್ಕೆ ಕಂಚಿನ ಪದಕ ಗೆಲ್ಲುವ ಅವಕಾಶ ಇದೆ.

ಮೊದಲ ಕ್ವಾರ್ಟರ್‌ನ ಎರಡನೇ ನಿಮಿಷದಲ್ಲೇ ಗುರ್ಜಿತ್ ಕೌರ್ ಗೋಲು ಬಾರಿಸುವ ಮೂಲಕ ಭಾರತಕ್ಕೆ ಆರಂಭದಲ್ಲೇ ಮುನ್ನಡೆ ಒದಗಿಸಿಕೊಟ್ಟರು. ಮೊದಲ ಕ್ವಾರ್ಟರ್‌ನಲ್ಲಿ ಪ್ರಾಬಲ್ಯ ಮೆರೆದ ರಾಣಿ ರಾಂಪಾಲ್ ಪಡೆ ಅರ್ಜೆಂಟೀನಾಗೆ ಯಾವುದೇ ಗೋಲು ಬಾರಿಸಲು ಅವಕಾಶ ಮಾಡಿಕೊಡಲಿಲ್ಲ. 

ಇನ್ನು ಎರಡನೇ ಕ್ವಾರ್ಟರ್‌ನ 17ನೇ ನಿಮಿಷದಲ್ಲಿ ಅರ್ಜೆಂಟೀನಾ ಗೋಲು ಬಾರಿಸುವ 1-1ರ ಸಮಬಲ ಸಾಧಿಸಿತು. ಮೊದಲಾರ್ಧದ ಅಂತ್ಯದ ವೇಳೆಗೆ ಉಭಯ ತಂಡಗಳು 1-1ರ ಸಮಬಲ ಸಾಧಿಸಿತು. ಪಂದ್ಯದ 36ನೇ ನಿಮಿಷದಲ್ಲಿ ಅರ್ಜೆಂಟೀನಾ ಮತ್ತೊಂದು ಗೋಲು ಬಾರಿಸುವ ಮೂಲಕ 2-1ರ ಮುನ್ನಡೆ ಸಾಧಿಸಿದೆ. ಇದಾದ ಬಳಿಕ ಭಾರತಕ್ಕೆ ಸಾಕಷ್ಟು ಗೋಲು ಬಾರಿಸುವ ಅವಕಾಶ ಕೂಡಿ ಬಂದರೂ ಅದನ್ನು ಸದುಪಯೋಗ ಪಡಿಸಿಕೊಳ್ಳಲು ರಾಣಿ ಪಡೆಗೆ ಸಾಧ್ಯವಾಗಲಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT