ಮೇಜರ್ ಧ್ಯಾನ್ ಚಂದ್ ಪ್ರತಿಮೆಗೆ ಪ್ರಧಾನಿಯಿಂದ ಪುಷ್ಪ ನಮನ(ಟ್ವಿಟ್ಟರ್ ಖಾತೆಯಿಂದ) 
ಕ್ರೀಡೆ

'ಖೇಲ್ ರತ್ನ' ಪ್ರಶಸ್ತಿಗೆ 'ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ' ಎಂದು ಮರುನಾಮಕರಣ: ಪ್ರಧಾನಿ ಮೋದಿ ಘೋಷಣೆ

ಟೋಕಿಯೊ ಒಲಿಂಪಿಕ್ಸ್ 2020ರಲ್ಲಿ ಭಾರತದ ಪುರುಷರ ಮತ್ತು ಮಹಿಳಾ ಹಾಕಿ ತಂಡ ಇತಿಹಾಸ ಸೃಷ್ಟಿಸಿವೆ. ಬರೋಬ್ಬರಿ 41 ವರ್ಷಗಳ ನಂತರ ಭಾರತದ ರಾಷ್ಟ್ರೀಯ ಕ್ರೀಡೆ ಹಾಕಿಯಲ್ಲಿ ನಿನ್ನೆ ಪುರುಷರ ತಂಡ ಕಂಚಿನ ಪದಕಕ್ಕೆ ಮುತ್ತಿಟ್ಟಿತು.

ನವದೆಹಲಿ: ಟೋಕಿಯೊ ಒಲಿಂಪಿಕ್ಸ್ 2020ರಲ್ಲಿ ಭಾರತದ ಪುರುಷರ ಮತ್ತು ಮಹಿಳಾ ಹಾಕಿ ತಂಡ ಇತಿಹಾಸ ಸೃಷ್ಟಿಸಿವೆ. ಬರೋಬ್ಬರಿ 41 ವರ್ಷಗಳ ನಂತರ ಭಾರತದ ರಾಷ್ಟ್ರೀಯ ಕ್ರೀಡೆ ಹಾಕಿಯಲ್ಲಿ ನಿನ್ನೆ ಪುರುಷರ ತಂಡ ಕಂಚಿನ ಪದಕಕ್ಕೆ ಮುತ್ತಿಟ್ಟಿತು.

ಇನ್ನು ಇಂದು ನಡೆದ ಪಂದ್ಯದಲ್ಲಿ ಮಹಿಳಾ ಹಾಕಿ ತಂಡ ಕೂಡ ಶಕ್ತಿ ಮೀರಿ ಪ್ರದರ್ಶನ ತೋರಿ ಗ್ರೇಟ್ ಬ್ರಿಟನ್ ವಿರುದ್ಧ ವಿರೋಚಿತ ಸೋಲು ಕಂಡಿದೆ. ಒಂದು ಗೋಲು ಅಂತರದಲ್ಲಿ ಕಂಚಿನ ಪದಕ ಕೈತಪ್ಪಿ ಹೋಗಿ 4ನೇ ಸ್ಥಾನ ಗಳಿಸಿದೆ.

ಭಾರತದ ಹಾಕಿ ತಂಡ ಕೊನೆಯ ಬಾರಿಗೆ 1980ರಲ್ಲಿ ಚಿನ್ನದ ಪದಕ ಗಳಿಸಿತ್ತು. ಅಲ್ಲಿಯವರೆಗೆ ಬರೋಬ್ಬರಿ 6 ಬಾರಿ ಚಿನ್ನದ ಪದಕವನ್ನು ಒಲಿಂಪಿಕ್ ನಲ್ಲಿ ಗಳಿಸಿದ್ದ ಭಾರತ ಇಷ್ಟು ದಶಕಗಳ ಕಾಲ ಪದಕವಿಲ್ಲದೆ ಬರಡಾಗಿತ್ತು. ಅದರ ನಿರಾಶೆಯನ್ನು ಈ ಬಾರಿ ಪುರುಷರ ಹಾಕಿ ತಂಡ ಅಳಿಸಿದೆ. ಈ ಬಗ್ಗೆ ಪ್ರತಿಯೊಬ್ಬ ಭಾರತೀಯರಿಗೆ ಸಂತಸವಿದೆ.

ಅನೇಕ ಭಾರತೀಯರಲ್ಲಿ ಮತ್ತೆ ಹಾಕಿ ಆಟದ ಬಗ್ಗೆ ಆಸೆಯ ಚಿಗುರೊಡೆದಿದೆ. ಪ್ರಧಾನಿ ಮೋದಿಯಾಗಿಯಾಗಿ ರಾಜಕೀಯ ನಾಯಕರು, ಗಣ್ಯರು, ಸೆಲೆಬ್ರಿಟಿಗಳು ತಮ್ಮದೇ ರೀತಿಯಲ್ಲಿ ಸಂತಸ ಹಂಚಿಕೊಂಡಿದ್ದಾರೆ.

ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ:  ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಬಹಳ ಮುಖ್ಯವಾದ ಪ್ರಕಟಣೆಯನ್ನು ಇಂದು ಹೊರಡಿಸಿದ್ದಾರೆ. ದೇಶದಾದ್ಯಂತ ಹಲವರಿಂದ ನನಗೆ ಇನ್ನು ಮುಂದೆ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಅವರ ಹೆಸರಿನಲ್ಲಿ ನೀಡಿ ಎಂಬ ಮನವಿಗಳು ಬಂದವು. ಅವರ ಅಭಿಪ್ರಾಯವನ್ನು ಪರಿಗಣಿಸಿ ಮನ್ನಿಸಿ ಖೇಲ್ ರತ್ನ ಪ್ರಶಸ್ತಿಯನ್ನು ಇನ್ನು ಮುಂದೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಮರು ನಾಮಕರಣ ಮಾಡಲಾಗಿದೆ ಎಂದು ಘೋಷಿಸಿದ್ದಾರೆ.

ಭಾರತದ ಕ್ರೀಡಾ ಕ್ಷೇತ್ರದ ದಂತಕಥೆ ಮೇಜರ್ ಧ್ಯಾನ್ ಚಂದ್, ಭಾರತದ ಹೆಮ್ಮೆ. ನಮ್ಮ ದೇಶದ ಅತ್ಯುನ್ನತ ಕ್ರೀಡಾ ಪ್ರಶಸ್ತಿಯನ್ನು ಅವರ ಹೆಸರಿನಲ್ಲಿ ನೀಡುವುದು ನಿಜಕ್ಕೂ ಗೌರವ, ಹೆಮ್ಮೆಯ ವಿಷಯ ಎಂದು ಪ್ರಧಾನಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT