ಟೊಕಿಯೊ ಒಲಂಪಿಕ್ಸ್ ಕುಸ್ತಿ: ಸೆಮಿಫೈನಲ್ ಪ್ರವೇಶಿಸಿದ ಬಜರಂಗ್ ಪೂನಿಯಾ
ಭಾರತದ ಕುಸ್ತಿಪಟು ಬಜರಂಗ್ ಪುನಿಯಾ ಟೊಕಿಯೊ ಒಲಂಪಿಕ್ಸ್ನಲ್ಲಿ ಸೆಮಿಫೈನಲ್ ಪ್ರವೇಶಿಸಿದ್ದು, ಈ ಮೂಲಕ ಪದಕದ ಭರವಸೆ ಮೂಡಿಸಿದ್ದಾರೆ.
ಟೊಕಿಯೊ: ಭಾರತದ ಕುಸ್ತಿಪಟು ಬಜರಂಗ್ ಪುನಿಯಾ ಟೊಕಿಯೊ ಒಲಂಪಿಕ್ಸ್ನಲ್ಲಿ ಸೆಮಿಫೈನಲ್ ಪ್ರವೇಶಿಸಿದ್ದು, ಈ ಮೂಲಕ ಪದಕದ ಭರವಸೆ ಮೂಡಿಸಿದ್ದಾರೆ.
ಪುರುಷರ 65 ಕೆ.ಜಿ. ಫ್ರೀಸ್ಟೈಲ್ ವಿಭಾಗದ ಕ್ವಾರ್ಟರ್‌ಫೈನಲ್‌ನಲ್ಲಿ ಬಜರಂಗ್ ಪೂನಿಯಾ ಇರಾನ್‌ನ ಮೊರ್ತೆಜಾ ಗಿಯಾಸಿ ವಿರುದ್ದ ಗೆಲುವು ದಾಖಲಿಸಿದ್ದಾರೆ.
ಇಂದು ನಡೆದ ಪಂದ್ಯದಲ್ಲಿ ಮೊದಲ ಸುತ್ತಿನಿಂದಲೂ ಎದುರಾಳಿಯ ಮೇಲೆ ಆಕ್ರಮಣಕಾರಿ ಆಟವಾಡಿದ ಬಜರಂಗ್ ಪುನಿಯಾ, ಮೊದಲ ರೌಂಡ್ನಲ್ಲಿ 1-0 ಮುನ್ನಡೆ ಸಾಧಿಸಿದರು. ನಂತರ ಎರಡನೇ ರೌಂಡ್ನಲ್ಲಿ 2-1 ರಿಂದ ಮುನ್ನಡೆ ಸಾಧಿಸಿದ ಬಜರಂಗ್, ಅಂತಿಮವಾಗಿ 2-1 ಅಂತರದಿಂದ ಗೆಲವು ಸಾಧಿಸಿ ಸೆಮಿಫೈನಲ್ ಪ್ರವೇಶಿಸಿದರು. ಸೆಮಿಫೈನಲ್ನಲ್ಲಿ ಅಜೆರ್ಬೈಜಾನ್ನ ಹಾಜಿ ಅಲಿಯೇವ್ ವಿರುದ್ಧ ಸೆಣಸಾಡಲಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.