ಕ್ರೀಡೆ

ಚಿನ್ನ ಗೆದ್ದ ಛೋಪ್ರಾಗೆ ತರಬೇತಿ ನೀಡಿದ್ದ ಕರ್ನಾಟಕದ ಕಾಶಿನಾಥ್ ನಾಯ್ಕ್ ಗೆ 10 ಲಕ್ಷ ರೂ. ಬಹುಮಾನ ಘೋಷಣೆ

Vishwanath S

ಬೆಂಗಳೂರು: ಟೋಕಿಯೊ ಒಲಂಪಿಕ್ ನ ಜಾವಲಿನ್ ಥ್ರೋನಲ್ಲಿ ಚಿನ್ನಕ್ಕೆ ಕೊರಳೊಡ್ಡಿ, ದೇಶದ ಗೌರವ ಕಾಪಾಡಿದ ನೀರಜ್ ಛೋಪ್ರಾರ ಅನನ್ಯ ಸಾಧನೆಗಾಗಿ ತರಬೇತಿ ನೀಡಿದ ಶಿರಸಿಯ ಕಾಶಿನಾಥ್ ನಾಯ್ಕ್ ಅವರಿಗೆ ಕ್ರೀಡಾ ಸಚಿವ ಡಾ. ನಾರಾಯಣಗೌಡ ಅಭಿನಂದಿಸಿದ್ದಾರೆ. ಅಲ್ಲದೆ 10 ಲಕ್ಷ ರೂ. ನಗದು ಬಹುಮಾನ ಘೋಷಿಸಿದ್ದಾರೆ.

ನೀರಜ್ ಛೋಪ್ರಾ ಚಿನ್ನದ ಪದಕಕ್ಕೆ ಮುತ್ತಿಕ್ಕುವಲ್ಲಿ ಕನ್ನಡಿಗನ ಪಾತ್ರವೂ ಇದೆ. ಛೋಪ್ರಾಗೆ ತರಬೇತಿ ನೀಡಿದ್ದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕಾಶಿನಾಥ್ ನಾಯ್ಕ್. 2010 ರ ಕಾಮನ್ವೆಲ್ತ್ ನಲ್ಲಿ ಕಾಶಿನಾಥ್ ಈಟಿ ಎಸೆತದಲ್ಲಿ ಕಂಚಿನ ಪದಕಗಳಿಸಿದ್ದರು.

ಅತ್ಯುತ್ತಮ ಕ್ರೀಡಾ ಸಾಧಕ ಕಾಶಿನಾಥ್ ಗರಡಿಯಲ್ಲಿ ಪಳಗಿದ ನೀರಜ್ ಸ್ವರ್ಣಪದಕ ಗಳಿಸಿ ದೇಶದ ಗೌರವ ಹೆಚ್ಚಿಸಿದ್ದಾರೆ. ಇಂತಹ ಸಾಧನೆಗೆ ಬೆನ್ನೆಲುಬಾದ ಕನ್ನಡಿಗ ಕಾಶಿನಾಥ್ ನಾಯ್ಕ್ ಗೆ ಸಚಿವರು ನಗದು ಬಹುಮಾನ ಘೋಷಿಸಿದ್ದಾರೆ.

ಟೋಕಿಯೋ ಓಲಂಪಿಕ್ ನಲ್ಲಿ ಅಮೋಘ ಸಾಧನೆಗೈದ ದೇಶದ 7 ಕ್ರೀಡಾಪಟುಗಳನ್ನು ರಾಜ್ಯ ಸರ್ಕಾರದ ವತಿಯಿಂದ ಸನ್ಮಾನಿಸಲಾಗುವುದು ಎಂದರು.

SCROLL FOR NEXT