ಸಂಗ್ರಹ ಚಿತ್ರ 
ಕ್ರೀಡೆ

ಟೋಕಿಯೊ ಪ್ಯಾರಾಲಿಂಪಿಕ್ ಕ್ರೀಡಾಕೂಟದ ಅಂಪೈರ್ ಆಗಿ ಭಾರತದ ಜೀವನ್ ಬಲ್ಲವ್ ಸಮಲ್ ನೇಮಕ

ಟೋಕಿಯೊದಲ್ಲಿ ನಡೆಯಲಿರುವ 32 ನೇ ಪ್ಯಾರಾಲಿಂಪಿಕ್ ಕ್ರೀಡಾಕೂಟದ ಅಂಪೈರ್ ಆಗಿ ಟೇಬಲ್ ಟೆನಿಸ್ ಫೆಡರೇಶನ್ ಆಫ್ ಇಂಡಿಯಾ ಬ್ಲೂ ಬ್ಯಾಡ್ಜ್ ಇಂಟರ್ನ್ಯಾಷನಲ್ ಅಂಪೈರ್ ಜೀವನ್ ಬಲ್ಲವ್ ಸಮಲ್ ಅವರನ್ನು ನೇಮಿಸಿದೆ.

ನವದೆಹಲಿ: ಟೋಕಿಯೊದಲ್ಲಿ ನಡೆಯಲಿರುವ 32 ನೇ ಪ್ಯಾರಾಲಿಂಪಿಕ್ ಕ್ರೀಡಾಕೂಟದ ಅಂಪೈರ್ ಆಗಿ ಟೇಬಲ್ ಟೆನಿಸ್ ಫೆಡರೇಶನ್ ಆಫ್ ಇಂಡಿಯಾ ಬ್ಲೂ ಬ್ಯಾಡ್ಜ್ ಇಂಟರ್ನ್ಯಾಷನಲ್ ಅಂಪೈರ್ ಜೀವನ್ ಬಲ್ಲವ್ ಸಮಲ್ ಅವರನ್ನು ನೇಮಿಸಿದೆ.

ಜೀವನ್ ಬಲ್ಲವ್ ಸಮಲ್ ಅವರು ಅಂಚೆ ಇಲಾಖೆಯಲ್ಲಿ ಬಿಸಿನೆಸ್ ಎಕ್ಸಿಕ್ಯುಟಿವ್ ಆಗಿ ಕೆಲಸ ಮಾಡುತ್ತಿದ್ದಾರೆ ಮತ್ತು ಪ್ರಸ್ತುತ ಕಟಕ್‌ನಲ್ಲಿ ನೇಮಕಗೊಂಡಿದ್ದಾರೆ ಎಂಬುದು ಗಮನಾರ್ಹ. ಪ್ಯಾರಾಲಿಂಪಿಕ್ಸ್ 2020ರಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತದ ಏಕೈಕ ಟೇಬಲ್ ಟೆನಿಸ್ ಅಧಿಕಾರಿ ಸಮಲ್. ಈ ಹಿಂದೆ ಜೀವನ್ ಬಲ್ಲವ್ ಹಲವು ಅಂತಾರಾಷ್ಟ್ರೀಯ ಟೇಬಲ್ ಟೆನಿಸ್ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.

ಪ್ಯಾರಾಲಿಂಪಿಕ್ಸ್ 2020 ಕ್ಕೆ ಜೀವನ್ ಬಲ್ಲವ್ ಅವರಿಗೆ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರ ಪರವಾಗಿ ಒಡಿಶಾ ರಾಜ್ಯ ಟೇಬಲ್ ಟೆನಿಸ್ ಅಸೋಸಿಯೇಶನ್ ನ ಕಾರ್ಯದರ್ಶಿ ಆರ್.ಕೆ.ಪರಿದಾ ಅಭಿನಂದನೆ ಸಲ್ಲಿಸಿದ್ದಾರೆ.

32 ನೇ ಪ್ಯಾರಾಲಿಂಪಿಕ್ ಕ್ರೀಡಾಕೂಟವು ಆಗಸ್ಟ್ 24 ರಿಂದ ಸೆಪ್ಟೆಂಬರ್ 5 ರವರೆಗೆ ಟೋಕಿಯೊ ಮೆಟ್ರೋಪಾಲಿಟನ್ ಜಿಮ್ನಾಷಿಯಂನಲ್ಲಿ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!

ಜುಲೈ ಕಂಟಕ: ಕಳೆದ ವರ್ಷ ಹಠಾತ್ ಬಿರುಗಾಳಿಯಿಂದ ದೋಣಿ ಮಗುಚಿ 39 ಮಂದಿ ಸಾವು; ಈ ವರ್ಷ 15 ಮಂದಿ ದುರ್ಮರಣ!