ಉದ್ಘಾಟನಾ ಸಮಾರಂಭದಲ್ಲಿ ಭಾರತೀಯ ಆಟಗಾರರು 
ಕ್ರೀಡೆ

ಟೋಕಿಯೋ ಪ್ಯಾರಾಲಂಪಿಕ್ಸ್ ಗೆ ಚಾಲನೆ, ತ್ರಿವರ್ಣ ಧ್ವಜ ಹಿಡಿದು ಭಾರತ ಮುನ್ನಡೆಸಿದ ಟೆಕ್ ಚಾಂದ್

ಕೊರೋನಾ ಸಾಂಕ್ರಾಮಿಕದ ನಡುವೆ ಒಲಂಪಿಕ್ಸ್ ಕ್ರೀಡಾಕೂಟವನ್ನು ಯಶಸ್ವಿಯಾಗಿ ನಡೆಸಿದ ಜಪಾನ್‌ನಲ್ಲಿ ಮಂಗಳವಾರ ಪ್ಯಾರಾಲಂಪಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಗಿದ್ದು,...

ಟೋಕಿಯೋ: ಕೊರೋನಾ ಸಾಂಕ್ರಾಮಿಕದ ನಡುವೆ ಒಲಂಪಿಕ್ಸ್ ಕ್ರೀಡಾಕೂಟವನ್ನು ಯಶಸ್ವಿಯಾಗಿ ನಡೆಸಿದ ಜಪಾನ್‌ನಲ್ಲಿ ಮಂಗಳವಾರ ಪ್ಯಾರಾಲಂಪಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಗಿದ್ದು, ಜಾವೆಲಿನ್ ಎಸೆತಗಾರ ಟೆಕ್ ಚಾಂದ್ ಅವರು ತ್ರಿವರ್ಣ ಧ್ವಜ ಹಿಡಿದು ಭಾರತವನ್ನು ಮುನ್ನಡೆಸಿದರು.

ಇಂದು ಜಪಾನ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದೆ ಉದ್ಘಾಟನಾ ಸಮಾರಂಭದಲ್ಲಿ ಟೆಕ್ ಚಾಂದ್ ಭಾರತದ ಧ್ವಜಧಾರಿಯಾಗಿ ತಂಡವನ್ನು ಮುನ್ನಡೆಸಿದರು.
 
ಭಾರತದ ಧ್ವಜಧಾರಿ ೨೦೧೬ರ ರಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದ ಹೈಜಂಪ್ ಪಟು ಮರಿಯಪ್ಪನ್ ತಂಗವೇಲು ಅವರು ಭಾರತದ ಧ್ವಜವನ್ನು ಹಿಡಿದು ತಂಡವನ್ನು ಮುನ್ನಡೆಸಬೇಕಾಗಿತ್ತು. ಆದರೆ ತಂಗವೇಲು ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದರಿಂದ ಅವರ ಬದಲಿಗೆ ಟೆಕ್ ಚಾಂದ್ ಅವರು ಭಾರತ ತಂಡವನ್ನು ಮುನ್ನಡೆಸಿದರು.

ಪ್ಯಾರಾಲಿಂಪಿಕ್ಸ್‌ನಲ್ಲಿ ಮರಿಯಪ್ಪ ಭಾಗವಹಿಸಲು ಯಾವುದೇ ತೊಂದರೆಯಿಲ್ಲ ಎಂದು ಭಾರತದ ಪ್ಯಾರಾಲಿಂಪಿಕ್ಸ್ ತರಬೇತುದಾರ ಸತ್ಯನಾರಾಯಣ ತಿಳಿಸಿದ್ದಾರೆ.

೩೨ನೇ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟ ಇಂದಿನಿಂದ ಸೆಪ್ಟೆಂಬರ್ ೫ ರವರೆಗೆ ಟೋಕಿಯೋದಲ್ಲಿ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT