ಸುಮಿತ್ ಅಂತಿಲ್, ಪ್ರಧಾನಿ ಮೋದಿ 
ಕ್ರೀಡೆ

ಟೋಕಿಯೊ ಪ್ಯಾರಾಲಿಂಪಿಕ್ಸ್: ಚಿನ್ನ ಗೆದ್ದ ಸುಮಿತ್ ಜೊತೆಗೆ ಫೋನ್ ನಲ್ಲಿ ಮಾತನಾಡಿದ ಪ್ರಧಾನಿ ಮೋದಿ

ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕ ವಿಜೇತ ಭಾರತದ ಸುಮಿತ್ ಅಂತಿಲ್ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಫೋನ್ ನಲ್ಲಿ ಮಾತನಾಡಿದ್ದಾರೆ. ಸುಮಿತ್ ಅವರ ಉತ್ಸಾಹಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ನವದೆಹಲಿ: ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕ ವಿಜೇತ ಭಾರತದ ಸುಮಿತ್ ಅಂತಿಲ್ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಫೋನ್ನಲ್ಲಿ ಮಾತನಾಡಿದ್ದಾರೆ. ಸುಮಿತ್ ಅವರ ಉತ್ಸಾಹಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಸುಮಿತ್ ಇಡೀ ದೇಶಕ್ಕೆ ಹೆಮ್ಮೆಯನ್ನುಂಟು ಮಾಡಿದ್ದಾರೆ. ಅವರ ಪ್ರದರ್ಶನ ನೋಡಿದ ನಂತರ ಯುವ ಪೀಳಿಗೆ ಸ್ಫೂರ್ತಿಗೊಂಡಿರುವುದಾಗಿ ಪ್ರಧಾನಿ ಸುಮಿತ್ ಅವರಿಗೆ ಹೇಳಿದ್ದಾರೆ.

ಸುಮಿತ್ ಅಂತಿಲ್ 68.55 ಮೀಟರ್ ದೂರಕ್ಕೆ ಜಾವೆಲಿನ್ ಥ್ರೋ ಎಸೆಯುವ ಮೂಲಕ ಚಿನ್ನಕ್ಕೆ ಮುತ್ತಿಟ್ಟಿದ್ದರು.ನಂತರ ಮಾತನಾಡಿದ ಅವರು, ತನ್ನ ಪ್ರದರ್ಶನದಿಂದ ತೃಪ್ತಿಯಾಗಿದೆ ಆದರೆ, 70 ಮೀಟರ್ ದೂರಕ್ಕೆ ಜಾವೆಲಿನ್ ಥ್ರೋ ಎಸೆಯಲು ಬಯಸಿದ್ದಾಗಿ ತಿಳಿಸಿದರು.

ಇದಕ್ಕೂ ಮುನ್ನ ಟ್ವೀಟ್ ಮಾಡಿದ್ದ ಪ್ರಧಾನಿ ಮೋದಿ, ಪ್ರತಿಷ್ಠಿತ ಚಿನ್ನದ ಪದಕ ಗೆದಿದ್ದಕ್ಕೆ ಸುಮಿತ್ ಅವರಿಗೆ ಅಭಿನಂದನೆ ಸಲ್ಲಿಸಿದ್ದರು. ನಿಮ್ಮ ಮುಂದಿನ ಭವಿಷ್ಯಕ್ಕೆ ಒಳಿತಾಗಲಿ ಎಂದು ಹಾರೈಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ