ಮರಿಯಪ್ಪನ್ (ಎಡಭಾಗ) ಶರದ್ ಕುಮಾರ್ (ಬಲಭಾಗ) 
ಕ್ರೀಡೆ

ಟೋಕಿಯೊ ಪ್ಯಾರಾಲಂಪಿಕ್ಸ್: ಹೈ ಜಂಪ್ ನಲ್ಲಿ ಮರಿಯಪ್ಪನ್ ಗೆ ರಜತ ಪದಕ, ಶರದ್ ಗೆ ಕಂಚು

ಟೋಕಿಯೊ ಪ್ಯಾರಾಲಂಪಿಕ್ಸ್ ನಲ್ಲಿ ಭಾರತೀಯ ಕ್ರೀಡಾಪಟುಗಳು ಅದ್ಭುತ ಸಾಧನೆ ಮಾಡುತ್ತಿದ್ದು, ಮರಿಯಪ್ಪನ್ ತಂಗವೇಲು ಹಾಗೂ ಶರದ್ ಕುಮಾರ್ ಎತ್ತರದ ಜಿಗಿತ (ಹೈ ಜಂಪ್ ನಲ್ಲಿ) ಅನುಕ್ರಮವಾಗಿ ರಜತ ಪದಕ ಹಾಗೂ ಕಂಚಿನ ಪದಕ ಗೆದ್ದಿದ್ದಾರೆ.

ಟೋಕಿಯೋ: ಟೋಕಿಯೊ ಪ್ಯಾರಾಲಂಪಿಕ್ಸ್ ನಲ್ಲಿ ಭಾರತೀಯ ಕ್ರೀಡಾಪಟುಗಳು ಅದ್ಭುತ ಸಾಧನೆ ಮಾಡುತ್ತಿದ್ದು, ಮರಿಯಪ್ಪನ್ ತಂಗವೇಲು ಹಾಗೂ ಶರದ್ ಕುಮಾರ್ ಎತ್ತರದ ಜಿಗಿತ (ಹೈ ಜಂಪ್ ನಲ್ಲಿ) ಅನುಕ್ರಮವಾಗಿ ರಜತ ಪದಕ ಹಾಗೂ ಕಂಚಿನ ಪದಕ ಗೆದ್ದಿದ್ದಾರೆ.

ಇಬ್ಬರೂ ಕ್ರೀಡಾಪಟುಗಳು ಕ್ಲಾಸ್ ಟಿ42 ಯಲ್ಲಿದ್ದು ಮರಿಯಪ್ಪನ್ ತಂಗವೇಲು 1.86 ಮೀಟರ್ ಜಿಗಿಯುವ ಮೂಲಕ ಬೆಳ್ಳಿ ಪದಕ ಗೆದ್ದಿದ್ದಾರೆ. 2016 ರ ರಿಯೋ ಲಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದ ಬಳಿಕ ಇದು ಅವರ 2 ನೇ ಪದಕವಾಗಿದೆ. 

ಇದೇ ವೇಳೆ ಶರದ್ ಕುಮಾರ್ 1.83 ಮೀಟರ್ ಜಿಗಿಯುವ ಮೂಲಕ ಕಂಚಿನ ಪದಕ ಗೆದ್ದಿದ್ದಾರೆ. 2016 ರ ರಿಯೋ ಒಲಂಪಿಕ್ಸ್ ನ ರಜತ ಪದಕ ವಿಜೇತ ಅಮೆರಿಕದ ಸ್ಯಾಮ್ ಗ್ರೀವೆ ಮೂರನೇ ಯತ್ನದಲ್ಲಿ 1.88 ಮೀಟರ್ ಜಿಗಿಯುವ ಮೂಲಕ ಚಿನ್ನದ ಪದಕ ಗೆದ್ದಿದ್ದಾರೆ. ಭಾರತದ ಮತ್ತೋರ್ವ ರಿಯೋ ಪದಕ ವಿಜೇತ ಕ್ರೀಡಾಪಟು ವರುಣ್ ಸಿಂಗ್ ಭಾಟಿ 1.77 ಮೀಟರ್ ಜಿಗಿಯುವ ಮೂಲಕ 7 ನೇ ಸ್ಥಾನದಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT