ಡಿಯಾಗೋ ಮರಡೋನಾ 
ಕ್ರೀಡೆ

ಫುಟ್ಬಾಲ್ ದಿಗ್ಗಜ ಮರಡೋನಾರ ಕಳವಾಗಿದ್ದ ದುಬಾರಿ ಬೆಲೆಯ ವಾಚ್ ಭಾರತದಲ್ಲಿ ಪತ್ತೆ!

ದಿವಂಗತ ಅರ್ಜೆಂಟೀನಾದ ದಿಗ್ಗಜ ಡಿಯಾಗೋ ಮರಡೋನಾ ಅವರ ಗಡಿಯಾರವನ್ನು ಅಸ್ಸಾಂನಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಸಾಮಾಜಿಕ ಜಾಲತಾಣದಲ್ಲಿ ಈ ಮಾಹಿತಿ ನೀಡಿದ್ದಾರೆ. 

ಅಸ್ಸಾಂ: ದಿವಂಗತ ಅರ್ಜೆಂಟೀನಾದ ದಿಗ್ಗಜ ಡಿಯಾಗೋ ಮರಡೋನಾ ಅವರ ಗಡಿಯಾರವನ್ನು ಅಸ್ಸಾಂನಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಸಾಮಾಜಿಕ ಜಾಲತಾಣದಲ್ಲಿ ಈ ಮಾಹಿತಿ ನೀಡಿದ್ದಾರೆ. 

ಫುಟ್ಬಾಲ್ ಮಾಂತ್ರಿಕ ಮರಡೋನಾ ಅವರು, ನವೆಂಬರ್ 2020ರಲ್ಲಿ ನಿಧನರಾಗಿದ್ದರು. ಆದರೆ, ಅವರ ವಾಚ್ ಕಳೆದುಹೋಗಿತ್ತು. ಅಸ್ಸಾಂ ಹಾಗೂ ದುಬೈ ಪೊಲೀಸರೊಂದಿಗೆ ಸಂಪರ್ಕ ಸಾಧಿಸಿ ಅಸ್ಸಾಂನ ಚರೈಡಿಯೊ ಜಿಲ್ಲೆಯಿಂದ ಮರಡೋನಾ ಕದ್ದ ಗಡಿಯಾರವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ವಾಜಿದ್ ಹುಸೇನ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ.

ಹಾಗಾದರೆ ಮರಡೋನಾ ವಾಚ್ ಭಾರತಕ್ಕೆ ಬಂದಿದ್ದು ಹೇಗೆ?
ಅಸ್ಸಾಂ ಪೊಲೀಸರ ಡಿಜಿಪಿ ನೀಡಿರುವ ಹೇಳಿಕೆ ಪ್ರಕಾರ, ಫುಟ್ಬಾಲ್ ಆಟಗಾರ ಡಿಯಾಗೋ ಮರಡೋನಾ ಅವರ ಹ್ಯೂಬ್ಲೋಟ್ ಕಂಪನಿಯ ವಾಚ್ ಅನ್ನು ವಶಪಡಿಸಿಕೊಳ್ಳಲಾಗಿದೆ. ದುಬೈ ಪೊಲೀಸರು ಫೆಡರಲ್ ಕಾನೂನು ಜಾರಿ ಸಂಸ್ಥೆಗಳ ಮೂಲಕ ಸಂಪರ್ಕ ಸಾಧಿಸಿದ್ದರು. ದುಬೈನಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂನ ಶಿವಸಾಗರ ಜಿಲ್ಲೆಯ ವ್ಯಕ್ತಿ, ಆಗಸ್ಟ್ 2021ರಲ್ಲಿ ಭಾರತಕ್ಕೆ ಹಿಂದಿರುಗಿದ್ದ ಎಂಬುದು ತನಿಖೆ ವೇಳೆ ಗೊತ್ತಾಗಿದೆ. ಬಳಿಕ, ಗುಪ್ತಚರ ಮಾಹಿತಿಯ ಮೇರೆಗೆ ಅಸ್ಸಾಂ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದಾರೆ. 

ಈ ಸಂದರ್ಭದಲ್ಲಿ ಪೊಲೀಸರು ಆರೋಪಿ ವಾಜಿದ್ ಹುಸೇನ್ ನ್ನು ಮೊರನ್ಹತ್-ಏರಿಯಾದಲ್ಲಿರುವ ಸಂಬಂಧಿಕರ ಮನೆಯಲ್ಲಿ ಆತನನ್ನು ಬಂಧಿಸಿದ್ದಾರೆ. ಫಿಫಾ ಶತಮಾನದ ಶ್ರೇಷ್ಠ ಆಟಗಾರ ಪ್ರಶಸ್ತಿಗೆ ಭಾಜನರಾಗಿರುವ ಮರೋಡನಾ ಅವರ ವಾಚು ದುಬೈ ಮೂಲಕ ಭಾರತದಲ್ಲಿ ಕೊನೆಗೂ ಪತ್ತೆಯಾಗಿದೆ. ಅಲ್ಲದೆ ಬಂಧಿತ ಆರೋಪಿಯನ್ನು ಪೊಲೀಸರು ತೀವ್ರ ತನಿಖೆಗೆ ಗುರಿಪಡಿಸಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!