2026ರ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಗೆ ಭಾರತ ಆತಿಥ್ಯ
2026ರಲ್ಲಿ ನಡೆಯಲಿರುವ ಪ್ರತಿಷ್ಠಿತ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ಶಿಪ್ಗೆ ಆತಿಥ್ಯ ವಹಿಸಲು ಭಾರತಕ್ಕೆ ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್(ಬಿಡಬ್ಲ್ಯೂಎಫ್) ಒಪ್ಪಿಸಿದೆ ಎಂದು ಅಧಿಕೃತ ಘೋಷಣೆ ಮಾಡಲಾಗಿದೆ.
ನವದೆಹಲಿ: 2026ರಲ್ಲಿ ನಡೆಯಲಿರುವ ಪ್ರತಿಷ್ಠಿತ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ಶಿಪ್ಗೆ ಆತಿಥ್ಯ ವಹಿಸಲು ಭಾರತಕ್ಕೆ ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್(ಬಿಡಬ್ಲ್ಯೂಎಫ್) ಒಪ್ಪಿಸಿದೆ ಎಂದು ಅಧಿಕೃತ ಘೋಷಣೆ ಮಾಡಲಾಗಿದೆ.
ಒಲಿಂಪಿಕ್ ವರ್ಷವನ್ನು ಹೊರತುಪಡಿಸಿ ಪ್ರತಿವರ್ಷ ನಡೆಯುವ ಈ ಟೂರ್ನಿಯನ್ನು ಭಾರತ ಎರಡನೇ ಬಾರಿಗೆ ಆಯೋಜಿಸುತ್ತದೆ.
ಭಾರತ ಕೊನೆಯ ಬಾರಿಗೆ 2009ರಲ್ಲಿ ಹೈದರಾಬಾದ್ನಲ್ಲಿ ನಡೆದ ಬಿಡಬ್ಲ್ಯೂಎಫ್ ವಿಶ್ವ ಚಾಂಪಿಯನ್ಶಿಪ್ಗೆ ಆತಿಥ್ಯ ವಹಿಸಿತ್ತು.
ಭಾರತವು 2014 ರ ಥಾಮಸ್ ಮತ್ತು ಉಬರ್ ಕಪ್ ಫೈನಲ್ಸ್, ಏಷ್ಯನ್ ಚಾಂಪಿಯನ್ಶಿಪ್ಗಳು ಮತ್ತು ವಾರ್ಷಿಕ ಬಿಡಬ್ಲ್ಯೂಎಫ್ ಸೂಪರ್ 500 ಈವೆಂಟ್, ಯೋನೆಕ್ಸ್-ಸನ್ರೈಸ್ ಇಂಡಿಯಾ ಓಪನ್ ಸೇರಿದಂತೆ ವಿವಿಧ ಪ್ರಮುಖ ಬ್ಯಾಡ್ಮಿಂಟನ್ ಪಂದ್ಯಾವಳಿಗಳನ್ನು ಆಯೋಜಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.