ಕ್ರೀಡೆ

ಆಸ್ಟ್ರೇಲಿಯಾದ ಬ್ರಿಸ್ಬೇನ್ ನಲ್ಲಿ 2032ರ ಒಲಿಂಪಿಕ್ಸ್ ಕ್ರೀಡಾಕೂಟ: ಐಒಸಿ

Srinivasamurthy VN

ಟೋಕಿಯೊ: 2032ರ ಒಲಿಂಪಿಕ್ಸ್ ಕ್ರೀಡಾಕೂಟವನ್ನು ಆಸ್ಟ್ರೇಲಿಯಾದ ಬ್ರಿಸ್ಬೇನ್ ನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ (ಐಒಸಿ) ಬುಧವಾರ ಮಾಹಿತಿ ನೀಡಿದೆ.

2032ರ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಆತಿಥ್ಯ ವಹಿಸಲು ಬ್ರಿಸ್ಬೇನ್‌ನ್ನು ಬುಧವಾರ ಆಯ್ಕೆ ಮಾಡಲಾಗಿದ್ದು, ಆ ಮೂಲಕ  32 ವರ್ಷಗಳ ಬಳಿಕ ಒಲಿಂಪಿಕ್ಸ್ ಕ್ರೀಡಾಕೂಟ ಆಸ್ಟ್ರೇಲಿಯಾದಲ್ಲಿ ನಡೆಯುವಂತಾಗಿದೆ. ಈ ಹಿಂದೆ 2000ರಲ್ಲಿ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟ ನಡೆದಿತ್ತು. ಅದಕ್ಕೂ ಮೊದಲು ಮೆಲ್ಬರ್ನ್ ನಗರ 1956 ರಲ್ಲಿ ಕ್ರೀಡಾಕೂಟಕ್ಕೆ ಆತಿಥ್ಯ ವಹಿಸಿತ್ತು.

ಈ ಕುರಿತು ಲೈವ್ ಬಂದು ಸಂತಸ ಹಂಚಿಕೊಂಡಿರುವ ಆಸಿಸ್ ಪ್ರಧಾನಿ ಸ್ಕಾಟ್ ಮಾರಿಸನ್ ಅವರು, ಆಸಿಸ್ ನಲ್ಲಿ ಕ್ರೀಡಾಕೂಟ ಅತ್ಯಂತ ಯಶಸ್ವಿಯಾಗಲಿದೆ. ಕ್ರೀಡೆಗೆ ಆಸ್ಟ್ರೇಲಿಯಾದಲ್ಲಿ ಅತ್ಯಂತ ಹೆಚ್ಚು ಮಹತ್ವವಿದೆ ಎಂಬುದು ಇಡೀ ಜಗತ್ತೀಗೆ ತಿಳಿದಿದೆ ಎಂದು ಹೇಳಿದರು.

ಮುಂದಿನ ಒಲಿಂಪಿಕ್ಸ್ ಕ್ರೀಡಾಕೂಟ 2024ರಲ್ಲಿ ಪ್ಯಾರಿಸ್ ನಲ್ಲಿ ನಡೆಯಲಿದ್ದು, ಬಳಿಕ 2028ರ ಒಲಿಂಪಿಕ್ಸ್ ಕ್ರೀಡಾಕೂಟ ಲಾಸ್ ಎಂಜಲೀಸ್ ನಲ್ಲಿ ನಡೆಯಲಿದೆ.

SCROLL FOR NEXT