ನ್ಯೂಜಿಲೆಂಡ್ ಆಟಗಾರನ ಜೊತೆ ಮನ್ ದೀಪ್ ಸಿಂಗ್ 
ಕ್ರೀಡೆ

ಟೋಕಿಯೋ ಒಲಂಪಿಕ್ಸ್: 3-2 ಗೋಲುಗಳಿಂದ ನ್ಯೂಜಿಲೆಂಡ್ ಸೋಲಿಸಿ ಭಾರತ ಹಾಕಿ ಪುರುಷರ ತಂಡ ಶುಭಾರಂಭ

ಹರ್ಮನ್‌ಪ್ರೀತ್ ಸಿಂಗ್ ಬಾರಿಸಿದ ಎರಡು ಗೋಲು ಹಾಗೂ ಗೋಲ್‌ ಕೀಪರ್ ಪಿ.ಆರ್. ಶ್ರೀಜೇಶ್ ಮನೋಜ್ಞ ಪ್ರದರ್ಶನದ ನೆರವಿನಿಂದ ಭಾರತ ಹಾಕಿ ತಂಡವು ತನ್ನ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು 3-2 ಗೋಲುಗಳ ಅಂತರದಲ್ಲಿ ಜಯ ಸಾಧಿಸಿದೆ.

ಟೋಕಿಯೋ: ಹರ್ಮನ್‌ಪ್ರೀತ್ ಸಿಂಗ್ ಬಾರಿಸಿದ ಎರಡು ಗೋಲು ಹಾಗೂ ಗೋಲ್‌ ಕೀಪರ್ ಪಿ.ಆರ್. ಶ್ರೀಜೇಶ್ ಮನೋಜ್ಞ ಪ್ರದರ್ಶನದ ನೆರವಿನಿಂದ ಭಾರತ ಹಾಕಿ ತಂಡವು ತನ್ನ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು 3-2 ಗೋಲುಗಳ ಅಂತರದಲ್ಲಿ ಜಯ ಸಾಧಿಸಿದೆ. ಇದರೊಂದಿಗೆ ಮನ್‌ಪ್ರೀತ್ ಸಿಂಗ್‌ ನೇತೃತ್ವದ ಭಾರತ ಹಾಕಿ ತಂಡವು ಟೋಕಿಯೋ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಶುಭಾರಂಭ ಮಾಡಿದೆ.

ನಾಲ್ಕನೇ ಶ್ರೇಯಾಂಕಿತ ಮನ್‌ಪ್ರೀತ್‌ ಸಿಂಗ್ ನೇತೃತ್ವದ ಭಾರತ ಪುರುಷರ ಹಾಕಿ ತಂಡವು ಗೆಲುವಿನ ಶುಭಾರಂಭ ಮಾಡುವ ಲೆಕ್ಕಾಚಾರದೊಂದಿಗೆ ಕಣಕ್ಕಿಳಿದಿತ್ತು. ಪಂದ್ಯದ ಆರನೇ ನಿಮಿಷದಲ್ಲಿ ಕೇನ್‌ ರಸೆಲ್ ತಮಗೆ ಸಿಕ್ಕ ಪೆನಾಲ್ಟಿ  ಕಾರ್ನರ್ ಅವಕಾಶವನ್ನು ಗೋಲಾಗಿ ಪರಿವರ್ತಿಸುವಲ್ಲಿ ಯಶಸ್ವಿಯಾದರು. 

ಇದರೊಂದಿಗೆ ನ್ಯೂಜಿಲೆಂಡ್ ಹಾಕಿ ತಂಡವು ಮೊದಲ ಕ್ವಾರ್ಟರ್‌ನ ಆರಂಭದಲ್ಲೇ 1-0 ಮುನ್ನಡೆ ಸಾಧಿಸಿತು. ಇದಾಗಿ ಕೆಲ ಹೊತ್ತಿನಲ್ಲೇ, ಅಂದರೆ ಪಂದ್ಯದ 10ನೇ ನಿಮಿಷದಲ್ಲಿ ರೂಪಿಂದರ್ ಪಾಲ್‌ ಗೋಲು ಬಾರಿಸುವ ಭಾರತದ ಗೋಲುಗಳ ಖಾತೆ ತೆರೆದರು. ಭಾನುವಾರ ಆಸ್ಟ್ರೇಲಿಯಾ ಜೊತೆ ಭಾರತ ತಂಡ ಪಂದ್ಯವಾಡುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT