ಬೆಳ್ಳಿ ಗೆದ್ದ ಭಾರತದ ಮೀರಾಬಾಯಿ ಚಾನು, ಚಿನ್ನ ಗೆದ್ದ ಚೀನಾದ ಝಿಹೈ ಹು ಮತ್ತು ಕಂಚು ಗೆದ್ದ ಇಂಡೋನೇಷ್ಯಾದ ವಿಂಡಿ ಕ್ಯಾಂಟಿಕಾ ಐಸಾ(ಅನುಕ್ರಮವಾಗಿ) 
ಕ್ರೀಡೆ

ಒಲಂಪಿಕ್ಸ್ 2020: ವೇಟ್ ಲಿಫ್ಟಿಂಗ್ 49 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಭಾರತದ ಮೀರಾಬಾಯಿ ಚಾನು!

ಟೋಕಿಯೊ ಒಲಂಪಿಕ್ಸ್ -2020ರಲ್ಲಿ ಭಾರತದ ಪದಕ ಬೇಟೆಯ ಅಭಿಯಾನ ಆರಂಭವಾಗಿದೆ. ಜಪಾನ್ ನ ಟೋಕಿಯೊ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ನಡೆದ ಮಹಿಳಾ 49 ಕೆಜಿ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ವೇಟ್ ಲಿಫ್ಟರ್ ಸೈಖೋಮ್ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದಿದ್ದಾರೆ.

ಟೋಕಿಯೋ: ಟೋಕಿಯೊ ಒಲಂಪಿಕ್ಸ್ -2020ರಲ್ಲಿ ಭಾರತದ ಪದಕ ಬೇಟೆಯ ಅಭಿಯಾನ ಆರಂಭವಾಗಿದೆ. ಜಪಾನ್ ನ ಟೋಕಿಯೊ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ನಡೆದ ಮಹಿಳಾ 49 ಕೆಜಿ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ವೇಟ್ ಲಿಫ್ಟರ್ ಸೈಖೋಮ್ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದಿದ್ದಾರೆ.

49 ಕೆ ಜಿ ವಿಭಾಗದ ಭಾರ ಎತ್ತುವ ಸ್ಪರ್ಧೆಯಲ್ಲಿ ನಾಲ್ಕು ಸುತ್ತಿನ ಪ್ರಯತ್ನಗಳಲ್ಲಿ ಚಾನು ಒಟ್ಟು 202 ಕೆಜಿ (ಸ್ನ್ಯಾಚ್‌ನಲ್ಲಿ 87 ಕೆಜಿ ಮತ್ತು ಕ್ಲೀನ್ ಮತ್ತು ಜರ್ಕ್‌ನಲ್ಲಿ 115 ಕೆಜಿ) ಎತ್ತಿದ್ದಾರೆ. ಚೀನಾದ ಝಿಹೈ ಹು ಒಟ್ಟು 210 ಕೆಜಿ ತೂಕ ಎತ್ತಿ ಚಿನ್ನದ ಪದಕ ಗಳಿಸಿ ಹೊಸ ಒಲಿಂಪಿಕ್ ದಾಖಲೆಯನ್ನು ಸೃಷ್ಟಿಸಿದರೆ, ಇಂಡೋನೇಷ್ಯಾದ ವಿಂಡಿ ಕ್ಯಾಂಟಿಕಾ ಐಸಾ ಒಟ್ಟು 194 ಕೆಜಿ ತೂಕದೊಂದಿಗೆ ಕಂಚು ಪದಕ ಗಳಿಸಿದ್ದಾರೆ.

ಇಂದು ಸ್ಮರಣೀಯ ಗಳಿಗೆಯಲ್ಲಿ ಬೆಳ್ಳಿ ಪದಕ ಗಳಿಸುವ ಮೂಲಕ ಚಾನು ಅವರು ಒಲಿಂಪಿಕ್ ಗೇಮ್ ನ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಪದಕ ಗಳಿಸಿದ ಎರಡನೇ ಭಾರತೀಯ ಮಹಿಳೆಯಾಗಿದ್ದಾರೆ. 2000ನೇ ಇಸವಿಯಲ್ಲಿ ಸಿಡ್ನಿಯಲ್ಲಿ ನಡೆದಿದ್ದ ಒಲಂಪಿಕ್ ಗೇಮ್ ನಲ್ಲಿ 69 ಕೆ ಜಿ ವಿಭಾಗದಲ್ಲಿ ಕರ್ಣಂ ಮಲ್ಲೇಶ್ವರಿ ಕಂಚಿನ ಪದಕ ಗಳಿಸಿದ್ದರು.

ಇದಕ್ಕೂ ಮುನ್ನ ಮೀರಾಬಾಯಿಯವರು ಮೊದಲ ಯತ್ನದಲ್ಲಿ 84 ಕೆಜಿ ತೂಕವನ್ನು ಎತ್ತಿ ಸಫಲರಾದರು, ಎರಡನೇ ಯತ್ನದಲ್ಲಿ 87 ಕೆಜಿ ತೂಕವನ್ನು ಎತ್ತುವಲ್ಲಿ ಕೂಡ ಸಫಲರಾದರು, ಆದರೆ ಮೂರನೇ ಹಾಗೂ ಕೊನೆಯ ಸುತ್ತಿನಲ್ಲಿ 89 ಕೆಜಿ ತೂಕವನ್ನು ಎತ್ತುವಲ್ಲಿ ವಿಫಲರಾದರು.

ಚಿನ್ನದ ಪದಕ ಗಳಿಸಿದ ಝುಹೈ ಮೊದಲ ಯತ್ನದಲ್ಲಿ 88 ಕೆಜಿ ತೂಕ ಎತ್ತುವಲ್ಲಿಂದ ಆರಂಭಿಸಿ ಎರಡನೇ ಯತ್ನದಲ್ಲಿ 92 ಕೆಜಿ ತೂಕ ಹಾಗೂ ಕೊನೆಯ ಯತ್ನದಲ್ಲಿ 94 ಕೆಜಿ ತೂಕವನ್ನು ಎತ್ತುವ ಮೂಲಕ ಒಲಂಪಿಕ್ ಗೇಮ್ ನಲ್ಲಿ ದಾಖಲೆ ನಿರ್ಮಿಸಿದರು.

2017ನೇ ವರ್ಷದ ವಿಶ್ವ ಚ್ಯಾಂಪಿಯನ್ ಮೀರಾಬಾಯಿ ಕ್ಲೀನ್ ಅಂಡ್ ಜೆರ್ಕ್ ವಿಭಾಗದಲ್ಲಿ 110 ಕೆಜಿಯನ್ನು ಮೊದಲ ಯತ್ನದಲ್ಲಿ ಮತ್ತು ನಂತರ 115 ಕೆಜಿ ತೂಕ ಎತ್ತಿ ಒಲಿಂಪಿಕ್ ನಲ್ಲಿ ಹೊಸ ದಾಖಲೆ ನಿರ್ಮಿಸಿದರು. ಆದರೆ ಕೂಡಲೇ ಝೈಹ್ವೈ ಅವರು ತಮ್ಮ ಮೂರನೇ ಯತ್ನದಲ್ಲಿ 116 ಕೆಜಿ ತೂಕವನ್ನು ಎತ್ತುವ ಮೂಲಕ ಮೀರಾಬಾಯಿ ದಾಖಲೆಯನ್ನು ಮುರಿದರು. ಮೊದಲೆರಡು ಯತ್ನದಲ್ಲಿ 109 ಕೆಜಿ ಮತ್ತು 114 ಕೆಜಿಗಳನ್ನು ಎತ್ತಿದ್ದರು. 117 ಕೆಜಿ ತೂಕ ಎತ್ತಲು ಮೀರಾಬಾಯಿ ಯತ್ನಿಸಿದರೂ ವಿಫಲರಾದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT