ಸಾನಿಯಾ ಮತ್ತು ಅಂಕಿತಾ 
ಕ್ರೀಡೆ

ಟೋಕಿಯೊ ಒಲಿಂಪಿಕ್ಸ್: ಆರಂಭದಲ್ಲೇ ಮುಗ್ಗರಿಸಿದ ಸಾನಿಯಾ ಮಿರ್ಜಾ ಮತ್ತು ಅಂಕಿತಾ ರೈನಾ

ಭಾರತದ ಭರವಸೆಯಾಗಿದ್ದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಹಾಗೂ ಅಂಕಿತಾ ರೈನಾ ಜೋಡಿಯು ಟೋಕಿಯೊ ಒಲಂಪಿಕ್ಸ್‌ನಲ್ಲಿ ನಿರಾಸೆ ಮೂಡಿಸಿದ್ದಾರೆ.

ಟೋಕಿಯೊ: ಭಾರತದ ಭರವಸೆಯಾಗಿದ್ದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಹಾಗೂ ಅಂಕಿತಾ ರೈನಾ ಜೋಡಿಯು ಟೋಕಿಯೊ ಒಲಂಪಿಕ್ಸ್‌ನಲ್ಲಿ ನಿರಾಸೆ ಮೂಡಿಸಿದ್ದಾರೆ.

ಸಾನಿಯಾ ಮಿರ್ಜಾ ಮತ್ತು ಅಂಕಿತಾ ರೈನಾ ಮಹಿಳಾ ಟೆನಿಸ್ ಡಬಲ್ಸ್ ವಿಭಾಗದಲ್ಲಿ ಉಕ್ರೇನ್ ದೇಶದ ಕಿಚೆನೊಕ್ ಸಹೋದರಿಯರ ವಿರುದ್ಧ 6-0, 6-7, 8-10 ಅಂತರದಿಂದ ಸೋಲನ್ನು ಅನುಭವಿಸಿದ್ದಾರೆ. 

ಇದೇ ಮೊದಲ ಬಾರಿಗೆ ಜೋಡಿಯಾಗಿ ಕಣಕ್ಕಿಳಿದಿದ್ದ ಸಾನಿಯಾ ಮಿರ್ಜಾ ಮತ್ತು ಅಂಕಿತಾ ರೈನಾ ಮೊದಲ ಸೆಟ್‌ನಲ್ಲಿ ಅದ್ಭುತ ಪ್ರದರ್ಶನವನ್ನು ನೀಡಿದರು. ಮೊದಲ ಸೆಟ್‌ನಲ್ಲಿ ಸಾನಿಯಾ ಮಿರ್ಜಾ ಮತ್ತು ಅಂಕಿತಾ ರೈನಾ ಎದುರಾಳಿ ಉಕ್ರೇನ್ ತಂಡದ ಕಿಚೆನೊಕ್ ಸಹೋದರಿಯರ ವಿರುದ್ಧ 6-0 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದರು.

ಆದರೆ ಎರಡನೇ ಮತ್ತು ಮೂರನೇ ಸೆಟ್‌ನಲ್ಲಿ ಕಿಚೆನೊಕ್ ಸಹೋದರಿಯರ ವಿರುದ್ಧ ಮಂಕಾದ ಸಾನಿಯಾ ಮಿರ್ಜಾ ಮತ್ತು ಅಂಕಿತಾ ರೈನಾ 6-7 ಮತ್ತು 8-10 ಅಂತರದಿಂದ ಸೋಲನ್ನು ಅನುಭವಿಸಿದರು. 

ಈ ಮೂಲಕ ನಾಲ್ಕನೇ ಬಾರಿ ಒಲಿಂಪಿಕ್ಸ್ ಪ್ರವೇಶಿಸಿರುವ ಸಾನಿಯಾ ಮಿರ್ಜಾ ತಮ್ಮ ಮೊದಲನೇ ಪಂದ್ಯದಲ್ಲಿಯೇ ಮುಗ್ಗರಿಸಿದ್ದಾರೆ. ಅತ್ತ ರೋಯಿಂಗ್ ಪುರುಷರ ವಿಭಾಗದಲ್ಲಿ ಭಾರತದ ಕ್ರೀಡಾಪಟುಗಳಾದ ಅರ್ಜುನ್ ಮತ್ತು ಅರವಿಂದ್ ಜಯಸಾಧಿಸಿದ್ದು ಸೆಮಿಫೈನಲ್ ಪ್ರವೇಶಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ