ಭಾರತದ ಬಾಕ್ಸರ್ ಮೇರಿ ಕೋಮ್ 
ಕ್ರೀಡೆ

ಟೋಕಿಯೊ ಒಲಂಪಿಕ್ಸ್ 2020: ಪ್ರಿ-ಕ್ವಾರ್ಟರ್‌ ಪಂದ್ಯದಲ್ಲಿ ಭಾರತದ ಮೇರಿ ಕೋಮ್ ಗೆ ಸೋಲು, ಟೂರ್ನಿಯಿಂದಲೇ ಔಟ್

ಟೋಕಿಯೊ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಭರವಸೆಯಾಗಿದ್ದ ಆರು ಬಾರಿಯ ವಿಶ್ವ ಚಾಂಪಿಯನ್ ಬಾಕ್ಸರ್ ಮೇರಿ ಕೋಮ್ ಪ್ರಿ-ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಸೋಲು ಕಾಣುವ ಮೂಲಕ ಭಾರತದ ಪದಕದ ಕನಸೊಂದು ನುಚ್ಚು ನೂರಾಗಿದೆ.

ಟೋಕಿಯೊ: ಟೋಕಿಯೊ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಭರವಸೆಯಾಗಿದ್ದ ಆರು ಬಾರಿಯ ವಿಶ್ವ ಚಾಂಪಿಯನ್ ಬಾಕ್ಸರ್ ಮೇರಿ ಕೋಮ್ ಪ್ರಿ-ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಸೋಲು ಕಾಣುವ ಮೂಲಕ ಭಾರತದ ಪದಕದ ಕನಸೊಂದು ನುಚ್ಚು ನೂರಾಗಿದೆ.

ಟೋಕಿಯೊ ಕ್ರೀಡಾಕೂಟದ ಮಹಿಳೆಯರ 51 ಕೆ.ಜಿ.ವಿಭಾಗದಲ್ಲಿ 16ನೇ ಸುತ್ತಿನ ಹೋರಾಟದಲ್ಲಿ ಮೇರಿ ಕೋಮ್, ಕೊಲಂಬಿಯಾದ ಇಂಗ್ರಿಟ್‌ ವಲೆನ್ಸಿಯಾ ವಿರುದ್ಧ 2-3 ಅಂಕಗಳ ಅಂತರದಲ್ಲಿ ವಿರೋಚಿತ ಸೋಲು ಕಂಡಿದ್ದಾರೆ. ಮೇರಿ ಕೋಮ್ ಮೊದಲ ರೌಂಡ್‌ನಲ್ಲಿ 1-4ರ ಹಿನ್ನಡೆ ಅನುಭವಿಸಿದರು. ಬಳಿಕ ದಿಟ್ಟ ಹೋರಾಟ ನೀಡಿದರೂ ಯಶಸ್ಸು ದಕ್ಕಲಿಲ್ಲ. ಪಂದ್ಯ ಮುಗಿದ ಬಳಿಕ ಮೇರಿ ಕೋಮ್ ಅತ್ಯಂತ ಭಾವುಕರಾದರು. 

ಬಹುತೇಕ ತಮ್ಮ ಕೊನೆಯ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುತ್ತಿರುವ 38 ವರ್ಷದ ಮೇರಿ ಕೋಮ್ ನಿರಾಸೆ ಅನುಭವಿಸಿದ್ದಾರೆ. ಈ ಹಿಂದೆ ಲಂಡನ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದರು.

ಅತ್ತ 32 ವರ್ಷದ ವಲೆನ್ಸಿಯಾ 2016ರ ರಿಯೋ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದರು. ಅಲ್ಲದೆ ಇದೇ ಮೊದಲ ಬಾರಿಗೆ ಮೇರಿ ವಿರುದ್ಧ ಗೆಲುವು ದಾಖಲಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT