ಕ್ರೀಡೆ

ಪೊಲೀಸರ ಮನವಿ ತಿರಸ್ಕರಿಸಿ ಸುಶೀಲ್ ಕುಮಾರ್ ಗೆ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶ

Vishwanath S

ನವದೆಹಲಿ: ಛತ್ರಾಸಲ್ ಕ್ರೀಡಾಂಗಣದಲ್ಲಿ ಯುವ ಕುಸ್ತಿಪಟು ಹತ್ಯೆ ಆರೋಪದ ಸಂಬಂಧ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ರನ್ನು ಇನ್ನೂ ಮೂರು ದಿನಗಳ ಕಸ್ಟಡಿ ವಿಚಾರಣೆಗಾಗಿ ದೆಹಲಿ ಪೊಲೀಸರು ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿದ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. 

ನಾಲ್ಕು ದಿನಗಳ ಪೊಲೀಸ್ ಕಸ್ಟಡಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರಶ್ಮಿ ಗುಪ್ತಾ ಅವರ ಮುಂದೆ ಹಾಜರುಪಡಿಸಲಾಗಿದ್ದು ಸುಶೀಲ್ ಕುಮಾರ್ ರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು.

ಅಂತಾರಾಷ್ಟ್ರೀಯ ಕುಸ್ತಿಪಟುವನ್ನು ಸುಶೀಲ್ ಕುಮಾರ್ ನನ್ನು ಮೇ 23ರಂದು ಪೊಲೀಸರು ಬಂಧಿಸಿದ್ದರು. ಬಂಧನದ ನಂತರ ನ್ಯಾಯಾಲಯ ಆತನನ್ನು ಆರು ದಿನಗಳ ಪೊಲೀಸ್ ಕಸ್ಟಡಿಗೆ ಆದೇಶಿಸಿತ್ತು. ನಂತರ ಅದನ್ನು ಇನ್ನೂ ನಾಲ್ಕು ದಿನಗಳವರೆಗೆ ವಿಸ್ತರಿಸಿತ್ತು.

ದೆಹಲಿಯ ಛತ್ರಾಸಲ್ ಕ್ರೀಡಾಂಗಣದಲ್ಲಿ ಮೇ 4 ರಂದು ಯುವ ಕುಸ್ತಿಪಟು ಸಾಗರ್ ರಾಣಾ ಕೊಲೆಯಾಗಿದ್ದರು. ಸುಶೀಲ್ ಹಾಗೂ ಸಾಗರ್ ನಡುವಣ ಘರ್ಷಣೆಯಲ್ಲಿ ಸಾಗರ್ ಹತ್ಯೆಗೀಡಾಗಿದ್ದ ಎಂದು ಹೇಳಲಾಗಿತ್ತು.

SCROLL FOR NEXT