ಸುಶೀಲ್ ಕುಮಾರ್ 
ಕ್ರೀಡೆ

ರೆಜ್ಲರ್‌ ಹತ್ಯೆ ಪ್ರಕರಣ: ಸುಶೀಲ್ ಕುಮಾರ್ ಜೂಡೋ ಕೊಚ್ ಬಂಧನ

ಜೂನಿಯರ್‌ ರೆಜ್ಲರ್‌ ಸಾಗರ್ ರಾಣಾ ಕೊಲೆ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ವ್ಯಕ್ತಿ ಸಂಬಂಧ ಹೊಂದಿದ್ದಾನೆ ಎಂಬ ಸುಳಿವು ಲಭಿಸಿದ ನಂತರ ಜೂಡೋ ಕೋಚ್ ಸುಭಾಷ್ ಎಂಬವವರನ್ನು ದೆಹಲಿ ಅಪರಾಧ ವಿಭಾಗದ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ನವದೆಹಲಿ: ಜೂನಿಯರ್‌ ರೆಜ್ಲರ್‌ ಸಾಗರ್ ರಾಣಾ ಕೊಲೆ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ವ್ಯಕ್ತಿ ಸಂಬಂಧ ಹೊಂದಿದ್ದಾನೆ ಎಂಬ ಸುಳಿವು ಲಭಿಸಿದ ನಂತರ ಜೂಡೋ ಕೋಚ್ ಸುಭಾಷ್ ಎಂಬವವರನ್ನು ದೆಹಲಿ ಅಪರಾಧ ವಿಭಾಗದ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಒಲಿಂಪಿಯನ್ ಸುಶೀಲ್ ಕುಮಾರ್ ಅವರಿಗೆ ಸುಭಾಷ್‌ ಜೂಡೋ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಸಾಗರ್ ರಾಣಾ ಕೊಲೆ ಪ್ರಕರಣದಲ್ಲಿ ಸುಶೀಲ್ ಕುಮಾರ್, ಆತನ ಹಲವು ಸಹಚರರು ಈಗಾಗಲೇ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.

ಇತ್ತೀಚೆಗೆ ಸುಶೀಲ್‌ ಕುಮಾರ್‌ ಅವರ ಕಸ್ಟಡಿಯನ್ನು ಜೂನ್‌ 25ರವರೆಗೆ ವಿಸ್ತರಿಸಿ ದೆಹಲಿ ಮೆಟ್ರೋಪಾಲಿಟನ್ ಕೋರ್ಟ್ ಮ್ಯಾಜಿಸ್ಟ್ರೇಟ್ ರೀಟಾ ಜೈನ್ ಆದೇಶಿಸಿದ್ದರು. ಒಂಬತ್ತು ದಿನಗಳ ಕಸ್ಟಡಿ ಮುಗಿದ ನಂತರ ಪೊಲೀಸರು ಸುಶೀಲ್ ಕುಮಾರ್‌ ಅವರನ್ನು ಶುಕ್ರವಾರ ಕೋರ್ಟ್‌ ಮುಂದೆ ಹಾಜರುಪಡಿಸಿದಾಗ, ಬಂಧನವನ್ನು ಜೂನ್ 25 ರವರೆಗೆ ವಿಸ್ತರಿಸಿ ಆದೇಶಿಸಿದ್ದರು. ಸಾಗರ್‌ ರಾಣಾ ಹತ್ಯೆಗೆ ಸಂಬಂಧಿಸಿದಂತೆ ಸುಶೀಲ್ ಸೇರಿದಂತೆ ಒಟ್ಟು ಹತ್ತು ಮಂದಿಯನ್ನು ಪೊಲೀಸರು ಈವರೆಗೆ ಬಂಧಿಸಿದ್ದಾರೆ. 

ಕಳೆದ ಮೇ 4 ರಂದು ದೆಹಲಿಯ ಛತ್ರಸಾಲ್ ಕ್ರೀಡಾಂಗಣದಲ್ಲಿ ಕಿರಿಯ ಕುಸ್ತಿಪಟುವನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಸುಶೀಲ್ ಹಾಗೂ ಸಾಗರ್ ನಡುವಣ ನಡೆದ ಘರ್ಷಣೆಯಲ್ಲಿ ಸಾಗರ್ ನನ್ನು ಕೊಲೆ ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!