ಮಿಲ್ಕಾ ಸಿಂಗ್ 
ಕ್ರೀಡೆ

ಅಗಲಿದ ಕ್ರೀಡಾ ತಾರೆಗೆ ನಮನ: ಸಕಲ ಸರ್ಕಾರಿ ಗೌರವಗಳೊಂದಿಗೆ ಮಿಲ್ಕಾ ಸಿಂಗ್ ಅಂತ್ಯಕ್ರಿಯೆ

ನಿನ್ನೆ ತಡರಾತ್ರಿ ನಿಧನರಾದ ದಿಗ್ಗಜ ಅಥ್ಲೀಟ್ ಮಿಲ್ಖಾ ಸಿಂಗ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ.

ಚಂಡೀಘರ್: ನಿನ್ನೆ ತಡರಾತ್ರಿ ನಿಧನರಾದ ದಿಗ್ಗಜ ಅಥ್ಲೀಟ್ ಮಿಲ್ಖಾ ಸಿಂಗ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ.

91 ರ ಹರೆಯದ ಮಿಲ್ಖಾ ಅವರ ಕುಟುಂಬ ಸದಸ್ಯರು ಮತ್ತು ಕ್ರೀಡಾ ಸಚಿವ ಕಿರೆನ್ ರಿಜಿಜು ಸೇರಿದಂತೆ ಹಲವಾರು ಗಣ್ಯರ ಸಮ್ಮುಖದಲ್ಲಿ ಚಂಡೀಘರ್ ನಲ್ಲಿ ಅಂತ್ಯಕ್ರಿಯೆ ವಿಧಿ ವಿಧಾನಗಳು ನೆರವೇರಿದೆ. 'ಫ್ಲೈಯಿಂಗ್ ಸಿಖ್' ಎಂದು ಎಲ್ಲರಿಂದ ಕರೆಸಿಕೊಳ್ಳುತ್ತಿದ್ದ ಮಿಲ್ಕಾ ಸಿಂಗ್ ಕೊರೋನಾ ಸಂಬಂಧಿತ ಸೋಂಕಿನಿಂದ ನಿಧನರಾಗಿದ್ದಾರೆ.

ಅವರ ಮಗ ಮತ್ತು ಶ್ರೇಷ್ಠ  ಗಾಲ್ಫ್ ಆಟಗಾರ ಜೀವ್ ಮಿಲ್ಖಾ ಸಿಂಗ್ ತಂದೆಯ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದ್ದಾರೆ.

ಪಂಜಾಬ್ ರಾಜ್ಯಪಾಲರು ಮತ್ತು ಚಂಡೀಘರ್ ಆಡಳಿತಾಧಿಕಾರಿ ವಿ ಪಿ ಸಿಂಗ್ ಬದ್ನೋರ್, ಪಂಜಾಬ್ ಹಣಕಾಸು ಸಚಿವ ಮನ್‌ಪ್ರೀತ್ ಸಿಂಗ್ ಬಾದಲ್, ಹರಿಯಾಣದ ಕ್ರೀಡಾ ಸಚಿವ ಸಂದೀಪ್ ಸಿಂಗ್ ಅವರು ಈ ವೇಳೆ ಹಾಜರಿದ್ದರು.

ಕ್ರೀಡಾಪಟುವನ್ನು ಗೌರವಿಸುವ ಸಂಕೇತವಾಗಿ ಪಂಜಾಬ್ ಸರ್ಕಾರ ಒಂದು ದಿನದ ಶೋಕಾಚರಣೆ ಮತ್ತು ರಜಾದಿನವನ್ನು ಘೋಷಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT