ಶ್ರೀಹರಿ ನಟರಾಜ್ 
ಕ್ರೀಡೆ

ಟೋಕಿಯೋ ಒಲಿಂಪಿಕ್ಸ್ ಗೆ ಅರ್ಹತೆ ಪಡೆದ ಭಾರತದ ಎರಡನೇ ಈಜುಪಟು ಶ್ರೀಹರಿ ನಟರಾಜ್

ಭಾರತದ ಈಜುಪಟು ಶ್ರೀಹರಿ ನಟರಾಜ್ ಅವರು ಕೊನೆಗೂ ತಮ್ಮ ಆಸೆ ಈಡೇರಿಸಿಕೊಂಡಿದ್ದಾರೆ. ಶ್ರೀಹರಿ ನಟರಾಜ್ ಅವರು ಮುಂಬರುವ 2021ರ ಟೋಕಿಯೋ ಒಲಿಂಪಿಕ್ಸ್‌'ನಲ್ಲಿ ಭಾಗಿಯಾಗುವ ಅವಕಾಶ ಪಡೆದುಕೊಂಡಿದ್ದಾರೆ...

ನವದೆಹಲಿ: ಭಾರತದ ಈಜುಪಟು ಶ್ರೀಹರಿ ನಟರಾಜ್ ಅವರು ಕೊನೆಗೂ ತಮ್ಮ ಆಸೆ ಈಡೇರಿಸಿಕೊಂಡಿದ್ದಾರೆ. ಶ್ರೀಹರಿ ನಟರಾಜ್ ಅವರು ಮುಂಬರುವ 2021ರ ಟೋಕಿಯೋ ಒಲಿಂಪಿಕ್ಸ್‌'ನಲ್ಲಿ ಭಾಗಿಯಾಗುವ ಅವಕಾಶ ಪಡೆದುಕೊಂಡಿದ್ದಾರೆ

ವಿಶ್ವ ಈಜು ಕ್ರೀಡಾ ಆಡಳಿತ ಮಂಡಳಿ ಫಿನಾ ಶ್ರೀಹರಿಗೆ ಎ ಪ್ರಮಾಣಿತ ಪ್ರಮಾಣ ಪತ್ರ ನೀಡಿರುವುದರಿಂದ ಅವರಿನ್ನು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳಲು ಅರ್ಹರಾಗಿದ್ದಾರೆ.

ರೋಮ್‌ನಲ್ಲಿ ನಡೆದ ಸೆಟ್ ಕೊಲ್ಲಿ ಟ್ರೋಫಿ ಪುರುಷರ ಅರ್ಹತಾ ಸ್ಪರ್ಧೆಯಲ್ಲಿ 100 ಮೀ. ಬ್ಯಾಕ್‌ಸ್ಟ್ರೋಕ್ ನಲ್ಲಿ ಶ್ರೀಹರಿ ನಟರಾಜ್ ಉತ್ತಮ ಸಾಧನೆ ತೋರಿದ್ದರು. ಒಲಿಂಪಿಕ್ಸ್‌ಗೆ ಅರ್ಹವೆನಿಸುವ 53.77 ಸೆಕೆಂಡ್ ವೇಗದಲ್ಲಿ 100 ಮೀಟರ್ ದೂರ ಈಜಿದ್ದರು. ಹೀಗಾಗಿ ಶ್ರೀಹರಿ ಈ ಬಾರಿಯ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಲಿದ್ದಾರೆ.

ಇದರೊಂದಿಗೆ ಟೋಕಿಯೋ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದುಕೊಂಡಿರುವ ಸಜನ್ ಪ್ರಕಾಶ್ ಜೊತೆಗೆ ಶ್ರೀಹರಿ ಸೇರಿಕೊಳ್ಳಲಿದ್ದಾರೆ. ನಟರಾಜ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದುಕೊಂಡಿರುವುದನ್ನು ಸ್ವಿಮ್ಮಿಂಗ್ ಫೆಡರೇಶನ್ ಆಫ್ ಇಂಡಿಯಾ ಟ್ವೀಟ್ ಮೂಲಕ ತಿಳಿಸಿದೆ.

ಜಪಾನ್‌ನ ಟೋಕಿಯೋದಲ್ಲಿ ಜುಲೈ 23ರಿಂದ ಆಗಸ್ಟ್ 8ರ ವರೆಗೆ ಒಲಿಂಪಿಕ್ಸ್ ಕ್ರೀಡಾಕೂಟ ನಡೆಯಲಿದೆ. ಅಸಲಿಗೆ 2020ರಲ್ಲಿ ನಡೆಯಬೇಕಿದ್ದ ಈ ಕ್ರೀಡಾಕೂಟ ಕೋವಿಡ್-19 ಕಾರಣದಿಂದ ಒಂದು ವರ್ಷ ತಡವಾಗಿ ನಡೆಯಲಿದೆ.

ಒಲಿಂಪಿಕ್ ಭರವಸೆಯ ಈಜುಪಟುಗಳಾದ ಸಜನ್ ಪ್ರಕಾಶ್ ಕೊನೆಗೂ ತಮ್ಮ ಆಸೆ ಈಡೇರಿಸಿಕೊಂಡಿದ್ದು, ಟೋಕಿಯೋ ಒಲಿಂಪಿಕ್​ನಲ್ಲಿ ಭಾಗಿಯಾಗುವ ಅವಕಾಶ ಪಡೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆಯ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video

ಈ ಬಾರಿ ಮೈಸೂರು ದಸರಾ ಮತ್ತಷ್ಟು ಆಕರ್ಷಕ; 146 ಕಿ.ಮೀ. ದೀಪಾಲಂಕಾರ; 3,500 ಡ್ರೋನ್‌ಗಳ ಪ್ರದರ್ಶನ