ಕ್ರೀಡೆ

ಕುಸ್ತಿಪಟು ಕೊಲೆ ಪ್ರಕರಣ: ಸುಶೀಲ್ ಸುಳಿವು ನೀಡಿದವರಿಗೆ ದೆಹಲಿ ಪೊಲೀಸರಿಂದ 1 ಲಕ್ಷ ರೂ. ಬಹುಮಾನ ಘೋಷಣೆ

Vishwanath S

ನವದೆಹಲಿ: ಕುಸ್ತಿ ಚಾಂಪಿಯನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಕುಸ್ತಿಪಟು ಸುಶೀಲ್ ಕುಮಾರ್ ಸುಳಿವು ನೀಡಿದವರಿಗೆ 1 ಲಕ್ಷ ರುಪಾಯಿ ಬಹುಮಾನ ನೀಡುವುದಾಗಿ ದೆಹಲಿ ಪೊಲೀಸರು ಘೋಷಿಸಿದ್ದಾರೆ. 

ದೆಹಲಿಯ ಹತ್ರಾಸಲ್ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ರಾಣಾ ಕೊಲೆ ಪ್ರಕರಣ ಸಂಬಂಧ ತಮ್ಮನ್ನು ಬಂಧಿಸುವ ಆತಂಕದಲ್ಲಿ ಸುಶೀಲ್ ಕುಮಾರ್ ಪರಾರಿಯಾಗಿದ್ದಾರೆ. 

ಈ ಹಿನ್ನೆಲೆಯಲ್ಲಿ ಸುಶೀಲ್ ಕುಮಾರ್ ರನ್ನು ಬಂಧಿಸಲು ಪೊಲೀಸರು ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಸುಳಿವು ನೀಡಿದವರಿಗೆ 1 ಲಕ್ಷ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ಅನ್ನು ಮತ್ತೊರ್ವ ಆರೋಪಿ ಅಜಯ್ ನನ್ನು ಬಂಧಿಸಲು ಸಹಾಯ ಮಾಡಿದವರಿಗೆ 50 ಸಾವಿರ ರೂಪಾಯಿ ಬಹುಮಾನ ನೀಡಲಿದ್ದಾರೆ. 

ಇನ್ನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಶೀಲ್ ಕುಮಾರ್ ಮತ್ತು ಇತರ 9 ಜನರ ವಿರುದ್ಧ ದೆಹಲಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿದೆ.

ಹತ್ರಾಸಲ್ ಸ್ಟೇಡಿಯಂ ಪಾರ್ಕಿಂಗ್ ಪ್ರದೇಶದಲ್ಲಿ ಜಗಳವಾಡುವಾಗ ಸಾಗರ್ ರಾಣಾ ಅವರನ್ನು ಥಳಿಸಲಾಯಿತು. ಘಟನೆಯ ನಂತರ ಸುಶೀಲ್ ಕುಮಾರ್ ವಿರುದ್ಧ ಕೊಲೆ, ಅಪಹರಣ ಮತ್ತು ಕ್ರಿಮಿನಲ್ ಪಿತೂರಿಯ ಎಫ್ಐಆರ್ ದಾಖಲಿಸಲಾಗಿದೆ.

ಮೇ 4ರಂದು 97 ಕೆಜಿ ಗ್ರೀಕೋ-ರೋಮನ್ ವಿಭಾಗದಲ್ಲಿ ಸ್ಪರ್ಧಿಸಿದ್ದ ಸಾಗರ್ ರಾಣಾ ಅವರನ್ನು ಎರಡು ಗುಂಪುಗಳು ಒಳಗೊಂಡ ಘರ್ಷಣೆಯಲ್ಲಿ ಹೊಡೆದು ಸಾಯಿಸಲಾಯಿತು. ರಾಣಾ ಮಾಜಿ ಕಿರಿಯ ರಾಷ್ಟ್ರೀಯ ಚಾಂಪಿಯನ್ ಮತ್ತು ಹಿರಿಯ ರಾಷ್ಟ್ರೀಯ ಶಿಬಿರದದಲ್ಲಿ ಭಾಗವಹಿಸಿದ್ದರು.. "ಕ್ರೀಡಾಂಗಣದ ಪಾರ್ಕಿಂಗ್ ಪ್ರದೇಶದಲ್ಲಿ ಸುಶೀಲ್ ಕುಮಾರ್, ಅಜಯ್, ಪ್ರಿನ್ಸ್ ದಲಾಲ್, ಸೋನು, ಸಾಗರ್, ಅಮಿತ್ ಮತ್ತು ಇತರರ ನಡುವೆ ಜಗಳ ನಡೆದಿದೆ ಎಂದು ತನಿಖೆಯ ಸಮಯದಲ್ಲಿ ನಮಗೆ ತಿಳಿದುಬಂದಿದೆ ಎಂದು ಪೋಲೀಸರು ತಿಳಿಸಿದ್ದಾರೆ. 

SCROLL FOR NEXT