ಲಿಯೋನೆಲ್ ಮೆಸ್ಸಿ 
ಕ್ರೀಡೆ

7 ನೇ ಬಾರಿಗೆ ಬ್ಯಾಲನ್ ಡಿ'ಓರ್ ಪ್ರಶಸ್ತಿ ಮುಡಿಗೇರಿಸಿಕೊಂಡು ದಾಖಲೆ ನಿರ್ಮಿಸಿದ ಲಿಯೋನೆಲ್ ಮೆಸ್ಸಿ

ಫುಟ್ ಬಾಲ್ ನ ಸ್ಟಾರ್ ಆಟಗಾರ ಲಿಯೋನೆಲ್ ಮೆಸ್ಸಿ 7 ನೇ ಬಾರಿಗೆ ಬ್ಯಾಲನ್ ಡಿ'ಓರ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡು ದಾಖಲೆ ನಿರ್ಮಿಸಿದ್ದಾರೆ.

ಪ್ಯಾರಿಸ್: ಫುಟ್ ಬಾಲ್ ನ ಸ್ಟಾರ್ ಆಟಗಾರ ಲಿಯೋನೆಲ್ ಮೆಸ್ಸಿ 7 ನೇ ಬಾರಿಗೆ ಬ್ಯಾಲನ್ ಡಿ'ಓರ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡು ದಾಖಲೆ ನಿರ್ಮಿಸಿದ್ದಾರೆ.
 
ವಿಶ್ವದ ಅತ್ಯುತ್ತಮ ಆಟಗಾರ ವಿಭಾಗದಲ್ಲಿ ಮೆಸ್ಸಿಗೆ ಬ್ಯಾಲನ್ ಡಿ'ಓರ್ ಪ್ರಶಸ್ತಿ ಲಭ್ಯವಾಗಿದೆ. ಫ್ರಾನ್ಸ್ ನ ಫುಟ್ಬಾಲ್ ನಿಯತಕಾಲಿಕೆ ಬ್ಯಾಲನ್ ಡಿ'ಓರ್ ಪ್ರಶಸ್ತಿಯನ್ನು ನೀಡುತ್ತಿದ್ದು, ಮೆಸ್ಸಿ 2009 ರಿಂದ 2012 ವರೆಗೆ ಸತತವಾಗಿ ಪ್ರಶಸ್ತಿಯನ್ನು ಗಳಿಸಿದ್ದರು ನಂತರ 2015 ಮತ್ತು 2019 ರಲ್ಲಿ ಹಾಗೂ ಈಗ ಮೆಸ್ಸಿಗೆ ಪುನಃ ಈ ಪ್ರಶಸ್ತಿ ಒಲಿದಿದೆ. 

ಎರಡು ವರ್ಷಗಳ ಹಿಂದೆ ಗೆದ್ದಿದ್ದ ಪ್ರಶಸ್ತಿಯೇ ಕೊನೆಯದಾಗಿರಲಿದೆ ಎಂದುಕೊಂಡಿದ್ದೆ. ಆದರೆ ಈ ಬಾರಿ ಪುನಃ ಪ್ರಶಸ್ತಿ ಗೆದ್ದಿರುವುದನ್ನು ಕೇಳಿ ಸಂತಸವಾಗುತ್ತಿದೆ ಎಂದು ಮೆಸ್ಸಿ ಪ್ರತಿಕ್ರಿಯೆ ನೀಡಿದ್ದಾರೆ. 
 
ಬಾರ್ಸಿಲೋನಾ ಹಾಗೂ ಸ್ಪೇನ್ ವಿರುದ್ಧ ಅತ್ಯುತ್ತಮ ಆಟ ಆಡಿದ ಮಹಿಳಾ ಫುಟ್ಬಾಲ್ ಆಟಗಾರ್ತಿ ಅಲೆಕ್ಸಿಯಾ ಪುಟೆಲ್ಲಾಸ್ ಅವರಿಗೂ ಬ್ಯಾಲನ್ ಡಿ'ಓರ್ ಪ್ರಶಸ್ತಿ ಲಭ್ಯವಾಗಿದ್ದು, ಈ ಪ್ರಶಸ್ತಿ ಪಡೆದ ಮೂರನೇ ಮಹಿಳೆಯಾಗಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT