ಅಂಶು ಮಲಿಕ್ 
ಕ್ರೀಡೆ

ವಿಶ್ವ ಕುಸ್ತಿ ಚಾಂಪಿಯನ್ ಶಿಪ್: ಬೆಳ್ಳಿ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಅಂಶು ಮಲಿಕ್!

ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಪದಕ ಗೆದ್ದ ಮೊದಲ ಭಾರತೀಯ ಮಹಿಳೆಯಾಗಿ ಕುಸ್ತಿಪಟು ಅಂಶು ಮಲಿಕ್ ಹೊರಹೊಮ್ಮಿದ್ದಾರೆ

ಓಸ್ಲೋ: ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಪದಕ ಗೆದ್ದ ಮೊದಲ ಭಾರತೀಯ ಮಹಿಳೆಯಾಗಿ ಕುಸ್ತಿಪಟು ಅಂಶು ಮಲಿಕ್ ಹೊರಹೊಮ್ಮಿದ್ದಾರೆ. ನಾರ್ವೆಯ ಓಸ್ಲೋದಲ್ಲಿ ಗುರುವಾರ ನಡೆದ 57 ಕೆಜಿ ವಿಭಾಗದ ಫೈನಲ್ ಪಂದ್ಯದಲ್ಲಿ 2016ರ ಒಲಿಂಪಿಕ್ ಚಾಂಪಿಯನ್  ಹೆಲೆನ್ ಲೌಸಿ ಮಾರೌಲಿ ವಿರುದ್ಧ ಸೋಲುವ ಮೂಲಕ ಅಂಶು ಮಲಿಕ್ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದರು.

ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಭಾರತದ ಮೊದಲ ಮಹಿಳಾ ಫೈನಲಿಸ್ಟ್ ಆದ ನಂತರ ಇಂದು ನಡೆದ ಪಂದ್ಯದಲ್ಲಿ 19ರ ಹರೆಯದ ಯುವತಿ ಮೊದಲಿಗೆ ಆಕ್ರಮಣಕಾರಿ ಶೈಲಿಯಲ್ಲಿ ಆಟವಾಡಿದರು. ಆರಂಭದಲ್ಲಿ 1-0 ಅಂತರದಲ್ಲಿ ಮುನ್ನಡೆ ಸಾಧಿಸಿದ್ದರು, ಆದರೆ, ಸೆಕೆಂಡಿನಲ್ಲಿಯೇ ಪಂದ್ಯವು ನಾಟಕೀಯ ಶೈಲಿಯಲ್ಲಿ ಬದಲಾಯಿತು. 

ಮೌರೌಲಿ ತನ್ನ ತೋಳಿತ ಹಿಡಿತದಲ್ಲಿ ಅಂಶು ಮಲ್ಲಿಕ್ ಅವರನ್ನು ಪಡೆದು 2-1 ಅಂತರದಲ್ಲಿ ಮುನ್ನಡೆ ಸಾಧಿಸಿದಳು. ತದನಂತರ ಅಂಶುವಿನ ಬಲಗೈಯನ್ನು ಬಿಗಿಯಾಗಿ ಹಿಡಿದುಕೊಂಡು 4-1 ಅಂಕ ಪಡೆದುಕೊಳ್ಳುವುದರೊಂದಿಗೆ ಗೆಲುವು ಸಾಧಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

SCROLL FOR NEXT