ನೀರಜ್ ಚೋಪ್ರಾ-ಲೊವ್ಲಿನಾ ಬೊರ್ಗೊಹೈ-ಶಿಖರ್ ಧವನ್ 
ಕ್ರೀಡೆ

ಮೇಜರ್ ಧ್ಯಾನಚಂದ್ ಖೇಲ್ ರತ್ನ ಪ್ರಶಸ್ತಿ: ನೀರಜ್ ಚೋಪ್ರಾ, ಮಿಥಾಲಿ ರಾಜ್ ಸೇರಿ 11 ಕ್ರೀಡಾಪಟುಗಳ ಹೆಸರು ಶಿಫಾರಸು

ಒಲಿಂಪಿಕ್ಸ್​​ನಲ್ಲಿ ಚಿನ್ನದ ಪದಕ ಗೆದ್ದಿರುವ ನೀರಜ್ ಚೋಪ್ರಾ, ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಮತ್ತು ಫುಟ್ಬಾಲ್ ದಂತಕಥೆ ಸುನಿಲ್ ಛೆಟ್ರಿ ಸೇರಿದಂತೆ 11 ಕ್ರೀಡಾಪಟುಗಳ ಹೆಸರನ್ನು ಈ ವರ್ಷದ ಮೇಜರ್ ಧ್ಯಾನಚಂದ್ ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ.

ನವದೆಹಲಿ: ಒಲಿಂಪಿಕ್ಸ್​​ನಲ್ಲಿ ಚಿನ್ನದ ಪದಕ ಗೆದ್ದಿರುವ ನೀರಜ್ ಚೋಪ್ರಾ, ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಮತ್ತು ಫುಟ್ಬಾಲ್ ದಂತಕಥೆ ಸುನಿಲ್ ಛೆಟ್ರಿ ಸೇರಿದಂತೆ 11 ಕ್ರೀಡಾಪಟುಗಳ ಹೆಸರನ್ನು ಈ ವರ್ಷದ ಮೇಜರ್ ಧ್ಯಾನಚಂದ್ ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ.

ಇನ್ನೂ ಕ್ರಿಕೆಟಿಗ ಶಿಖರ್ ಧವನ್ ಸೇರಿದಂತೆ 35 ಕ್ರೀಡಾಪಟುಗಳ ಹೆಸರನ್ನು ಅರ್ಜುನ ಪ್ರಶಸ್ತಿಗೆ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಸಮಿತಿ ಶಿಫಾರಸು ಮಾಡಿದೆ.

ಕ್ರೀಡಾ ಸಚಿವ ಅನುರಾಗ್​ ಠಾಕೂರ್ ಟೋಕಿಯೊ ಒಲಿಂಪಿಕ್ಸ್ ನಂತರ ಈ ಪ್ರಶಸ್ತಿಗಳನ್ನು ನೀಡಬೇಕೆಂದು ಮುಂದೂಡಿದ್ದರು. 

ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸು ಮಾಡಲಾದ ಹೆಸರುಗಳು: 
ನೀರಜ್ ಚೋಪ್ರಾ (ಅಥ್ಲೆಟಿಕ್ಸ್) 
ರವಿ ದಹಿಯಾ (ಕುಸ್ತಿ) 
ಪಿಆರ್ ಶ್ರೀಜೇಶ್ (ಹಾಕಿ) 
ಲೊವ್ಲಿನಾ ಬೊರ್ಗೊಹೈ (ಬಾಕ್ಸಿಂಗ್) 
ಸುನಿಲ್ ಛೆಟ್ರಿ (ಫುಟ್ ಬಾಲ್) 
ಮಿಥಾಲಿ ರಾಜ್ (ಕ್ರಿಕೆಟ್) 
ಪ್ರಮೋದ್ ಭಗತ್ (ಬ್ಯಾಡ್ಮಿಂಟನ್) 
ಸುಮಿತ್ ಆಂಟಿಲ್ (ಅಥ್ಲೆಟಿಕ್ಸ್) 
ಅವನಿ ಲೇಖರ (ಶೂಟಿಂಗ್) 
ಕೃಷ್ಣ ನಗರ (ಬ್ಯಾಡ್ಮಿಂಟನ್) 
ಮನೀಶ್ ನರ್ವಾಲ್ (ಶೂಟಿಂಗ್)                                                                                                                     

ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಲಾದ ಹೆಸರುಗಳು: 
ಯೋಗೇಶ್ ಕಥುನಿಯಾ (ಡಿಸ್ಕಸ್ ಥ್ರೋ) 
ನಿಶಾದ್ ಕುಮಾರ್ (ಹೈಜಂಪ್) 
ಪ್ರವೀಣ್ ಕುಮಾರ್ (ಹೈಜಂಪ್) 
ಶರದ್ ಕುಮಾರ್ (ಹೈ ಜಂಪ್) 
ಸುಹಾಸ್ LY (ಬ್ಯಾಡ್ಮಿಂಟನ್) 
ಸಿಂಗ್ರಾಜ್ ಅಧಾನ (ಶೂಟಿಂಗ್) 
ಭಾವಿನಾ ಪಟೇಲ್ (ಟೇಬಲ್ ಟೆನಿಸ್) 
ಹರ್ವಿಂದರ್ ಸಿಂಗ್ (ಶೂಟಿಂಗ್​​) 
ಶಿಖರ್ ಧವನ್ (ಕ್ರಿಕೆಟ್)

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ ಶಿವಕುಮಾರ್, ಪರಸ್ಪರ ಆಲಿಂಗನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT