ಭಾರತದ ಅಥ್ಲೀಟ್ ಪ್ರವೀಣ್ ಕುಮಾರ್ 
ಕ್ರೀಡೆ

ಟೋಕಿಯೋ ಪ್ಯಾರಾಲಿಂಪಿಕ್ಸ್: ಹೈ ಜಂಪ್ ನಲ್ಲಿ ಭಾರತಕ್ಕೆ ಬೆಳ್ಳಿ ತಂದು ಕೊಟ್ಟ ಪ್ರವೀಣ್ ಕುಮಾರ್

ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಪದಕ ಲಭಿಸಿದ್ದು, ಹೈ ಜಂಪ್ ನಲ್ಲಿ ಭಾರತದ ಪ್ರವೀಣ್ ಕುಮಾರ್ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ.

ಟೋಕಿಯೋ: ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಪದಕ ಲಭಿಸಿದ್ದು, ಹೈ ಜಂಪ್ ನಲ್ಲಿ ಭಾರತದ ಪ್ರವೀಣ್ ಕುಮಾರ್ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ.

ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ T64 ಈವೆಂಟ್ ನಲ್ಲಿ ಭಾರತದ ಪ್ರವೀಣ್ ಕುಮಾರ್ 2.07 ಮೀಟರ್ ಎತ್ತರಕ್ಕೆ ಜಿಗಿಯುವ ಮೂಲಕ 2ನೇ ಸ್ಥಾನಕ್ಕೇರಿದರು.ಆ ಮೂಲಕ ಭಾರತಕ್ಕೆ ಮತ್ತೊಂದು ಬೆಳ್ಳಿ ಪದಕ ತಂದುಕೊಟ್ಟರು.

ಇದೇ ಪಂದ್ಯದಲ್ಲಿ ಬ್ರಿಟನ್ ನ ಜೋನಾಥನ್ ಬ್ರೂಮ್ ಎಡ್ವರ್ಡ್ಸ್ ಅವರು 2.10 ಮೀಟರ್ ಎತ್ತರಕ್ಕೆ ಜಿಗಿಯುವ ಮೂಲಕ ಚಿನ್ನದ ಪದಕ ಗೆದ್ದರೆ, 2.04 ಮೀಟರ್ ಎತ್ತರಕ್ಕೆ ಜಿಗಿದ ಪೋಲೆಂಡ್ ನ ಮ್ಯಾಕೀಜ್ ಲೆಪಿಯಾಟೊ ಕಂಚಿನ ಪದಕಕ್ಕೆ ತೃಪ್ತಿ ಪಟ್ಟುಕೊಂಡರು.

ಇನ್ನು ಈ ಬೆಳ್ಳಿ ಪದಕದ ಮೂಲಕ ಹಾಲಿ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕ ಗಳಿಕೆ 11ಕ್ಕೆ ಏರಿಕೆಯಾಗಿದ್ದು, ಈ ಪೈಕಿ 2 ಚಿನ್ನ, 6 ಬೆಳ್ಳಿ ಮತ್ತು 3 ಕಂಚಿನ ಪದಕಗಳಿವೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ