ಚಿನ್ನ ಗೆದ್ದ ಮನೀಶ್ ನರ್ವಾಲ್, ಬೆಳ್ಳಿಗೆ ತೃಪ್ತಿ ಪಟ್ಟುಕೊಂಡ ಸಿಂಗರಾಜ್ 
ಕ್ರೀಡೆ

ಟೋಕಿಯೊ ಪ್ಯಾರಾಲಿಂಪಿಕ್ಸ್: ಇತಿಹಾಸ ಬರೆದ ಭಾರತದ ಶೂಟರ್ ಗಳು, ಮನೀಶ್ ನರ್ವಾಲ್ ಗೆ ಚಿನ್ನ, ಸಿಂಗರಾಜ್ ಗೆ ಬೆಳ್ಳಿ ಪದಕ

ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಐತಿಹಾಸಿಕ ಸಾಧನೆ ಮಾಡಿದ್ದು, ಶೂಟಿಂಗ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ಗೆದ್ದಿದೆ.

ಟೋಕಿಯೊ: ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಐತಿಹಾಸಿಕ ಸಾಧನೆ ಮಾಡಿದ್ದು, ಶೂಟಿಂಗ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ಗೆದ್ದಿದೆ.

ಹೌದು.. ಶೂಟಿಂಗ್ ಪಿ4 50 ಮೀಟರ್ ಪಿಸ್ತೂಲ್ ಎಸ್ ಹೆಚ್ 1 ವಿಭಾಗದಲ್ಲಿ ಭಾರತದ ಮನೀಶ್ ನರ್ವಾಲ್ ಚಿನ್ನದ ಪದಕಕ್ಕೆ ಮುತ್ತಿಟ್ಟರೆ, ಸಿಂಗರಾಜ್ 2ನೇ ಸ್ಥಾನ ಪಡೆದು ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ.

ಭಾರತದ ಮನೀಶ್ ನರ್ವಾಲ್ 218.2 ಅಂಕಗಳನ್ನು ಗಳಿಸಿ ಮೊದಲ ಸ್ಥಾನ ಪಡೆದಿದ್ದು, ಇದು ಭಾರತದ ಪರ ಗರಿಷ್ಠ ದಾಖಲೆ ಕೂಡ ಆಗಿದೆ. ಅದೇ ಪಂದ್ಯದಲ್ಲಿ ಭಾರತದ ಮತ್ತೋರ್ವ ಶೂಟರ್ ಅಧನ ಸಿಂಗರಾಜ್ ಅವರು 216.7 ಅಂಕಗಳೊಂದಿಗೆ 2ನೇ ಸ್ಥಾನಕ್ಕೇರಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ. ಆ ಮೂಲಕ ಒಂದೇ ಪೈನಲ್ ಪಂದ್ಯದಲ್ಲಿ ಉಭಯ ಆಟಗಾರರು ಚಿನ್ನ ಮತ್ತು ಬೆಳ್ಳಿ ಪದಕ ಗೆದ್ದ ಸಾಧನೆ ಮಾಡಿದ್ದಾರೆ.

ಈ ಪದಕಗಳ ಮೂಲಕ ಹಾಲಿ ಕ್ರೀಡಾಕೂಟದಲ್ಲಿ ಭಾರತದ ಪದಕಗಳ ಸಂಖ್ಯೆ 15ಕ್ಕೆ ಏರಿಕೆಯಾಗಿದ್ದು, ಈ ಪೈಕಿ ಚಿನ್ನ 3, ಬೆಳ್ಳಿ 7 ಮತ್ತು 5 ಕಂಚಿನ ಪದಕಗಳು ಸೇರಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT