ಪದಕ ವಿಜೇತರು 
ಕ್ರೀಡೆ

CWG 2022: ಟೇಬಲ್ ಟೆನಿಸ್ ತಂಡಕ್ಕೆ ಚಿನ್ನ, ವೇಯ್ಟ್ ಲಿಫ್ಟಿಂಗ್‌ ನಲ್ಲಿ ಬೆಳ್ಳಿ ಗೆದ್ದ ವಿಕಾಸ್; ಒಟ್ಟಾರೆ 12 ಪದಕ!

ಕಾಮನ್‌ವೆಲ್ತ್ ಗೇಮ್ಸ್‌ 2022ರಲ್ಲಿ ಭಾರತದ ಪದಕ ಬೇಟೆ ಮುಂದೂವರೆದಿದ್ದು ಟೇಬಲ್ ಟೆನಿಸ್ ನಲ್ಲಿ ಭಾರತ ಪುರುಷರ ತಂಡ ಚಿನ್ನದ ಪದಕ ಗೆದ್ದಿದ್ದರೆ ವೇಯ್ಟ್ ಲಿಫ್ಟಿಂಗ್ ನಲ್ಲಿ ವಿಕಾಸ್ ಠಾಕೂರ್ ಬೆಳ್ಳಿ ಪದಕ ಗೆದ್ದಿದ್ದಾರೆ. ಇದರೊಂದಿಗೆ ಭಾರತ ಒಟ್ಟಾರೆ 12 ಪದಕ ಗೆದ್ದಿದೆ.

ಬರ್ಮಿಂಗ್‌ ಹ್ಯಾಂ: ಕಾಮನ್‌ವೆಲ್ತ್ ಗೇಮ್ಸ್‌ 2022ರಲ್ಲಿ ಭಾರತದ ಪದಕ ಬೇಟೆ ಮುಂದೂವರೆದಿದ್ದು ಟೇಬಲ್ ಟೆನಿಸ್ ನಲ್ಲಿ ಭಾರತ ಪುರುಷರ ತಂಡ ಚಿನ್ನದ ಪದಕ ಗೆದ್ದಿದ್ದರೆ ವೇಯ್ಟ್ ಲಿಫ್ಟಿಂಗ್ ನಲ್ಲಿ ವಿಕಾಸ್ ಠಾಕೂರ್ ಬೆಳ್ಳಿ ಪದಕ ಗೆದ್ದಿದ್ದಾರೆ. ಇದರೊಂದಿಗೆ ಭಾರತ ಒಟ್ಟಾರೆ 12 ಪದಕ ಗೆದ್ದಿದೆ.

ಪುರುಷರ ಟೇಬಲ್ ಟೆನಿಸ್ ನ ಅಂತಿಮ ಪಂದ್ಯದಲ್ಲಿ ಭಾರತ 3-1 ರಿಂದ  ಸಿಂಗಾಪುರವನ್ನು ಸೋಲಿಸಿತು. ಭಾರತದ ಪರ ಹರ್ಮೀತ್ ದೇಸಾಯಿ ಮತ್ತು ಜಿ ಸತ್ಯನ್ ಡಬಲ್ಸ್ ಪಂದ್ಯದಲ್ಲಿ ಗೆಲುವನ್ನು ದಾಖಲಿಸುವ ಮೂಲಕ ಭಾರತಕ್ಕೆ ಉತ್ತಮ ಆರಂಭ ನೀಡಿದರು. ಇದೇ ವೇಳೆ ಚೆವ್ ಝೆ ಯು ಕ್ಲಾರೆನ್ಸ್ ಮುಂದಿನ ಪಂದ್ಯ ಗೆದ್ದು ಸಿಂಗಾಪುರವನ್ನು 1-1 ರಲ್ಲಿ ಸಮಬಲಗೊಳಿಸಿದರು. ನಂತರದ ಪಂದ್ಯಗಳಲ್ಲಿ ಜಿ.ಸತ್ಯನ್ ಮತ್ತು ಹರ್ಮೀತ್ ದೇಸಾಯಿ ತಮ್ಮ ಪಂದ್ಯಗಳನ್ನು ಗೆಲ್ಲುವ ಮೂಲಕ ಭಾರತಕ್ಕೆ ಚಿನ್ನವನ್ನು ಖಚಿತಪಡಿಸಿದರು.

ವೇಟ್‌ಲಿಫ್ಟಿಂಗ್‌ ನ ಪುರುಷರ 96 ಕೆಜಿ ವಿಭಾಗದಲ್ಲಿ ವಿಕಾಸ್ ಠಾಕೂರ್ ಬೆಳ್ಳಿ ಪದಕವನ್ನು ಗೆದ್ದರು. ವಿಕಾಸ್‌ ಠಾಕೂರ್‌ ಒಟ್ಟಾರೆ 346 ಕೆಜಿ ಭಾರ ಎತ್ತುವ ಮೂಲಕ ಬೆಳ್ಳಿ ಪದಕ ಜಯಿಸಿದರು. ಸ್ನ್ಯಾಚ್‌ ವಿಭಾಗದಲ್ಲಿ ಗರಿಷ್ಠ 155 ಕೆಜಿ ಭಾರ ಎತ್ತಿದರೆ, ಕ್ಲೀನ್‌ ಆಂಡ್‌ ಜರ್ಕ್‌ನಲ್ಲಿ ಗರಿಷ್ಠ 191 ಕೆಜಿ ಭಾರ ಎತ್ತುವ ಮೂಲಕ ಪದಕ ಗೆದ್ದರು.

ಕಾಮನ್ವೆಲ್ತ್ ಗೇಮ್ಸ್ ನ ಐದನೇ ದಿನವಾದ ಇಂದು ಅಪರೂಪದ ಕ್ರೀಡೆಯಾದ ಲಾನ್ ಬೌಲ್ಸ್  ನಲ್ಲಿ ಭಾರತದ ಮಹಿಳೆಯರ ತಂಡ ಮೊದಲ ಬಾರಿ ಚಿನ್ನ ಗೆಲ್ಲುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ. ಇಂದು ನಡೆದ ಲಾನ್‌ ಬೌಲ್ಸ್ ಪಂದ್ಯದ ಫೈನಲ್‌ನಲ್ಲಿ ಭಾರತದ ವನಿತಾ ತಂಡ ದಕ್ಷಿಣ ಆಫ್ರಿಕಾವನ್ನು 17-10 ಅಂತರದಿಂದ ಮಣಿಸಿ ಐತಿಹಾಸಿಕ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದೆ.

ಕ್ರೀಡಾಕೂಟದಲ್ಲಿ ಭಾರತಕ್ಕೆ ಒಟ್ಟಾರೆ 12 ಪದಕಗಳು ಬಂದಿದ್ದು 5 ಚಿನ್ನ, 4 ಬೆಳ್ಳಿ ಹಾಗೂ ಮೂರು ಕಂಚಿನ ಪದಕ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT