ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಕಾಮನ್ ವೆಲ್ತ್ ಗೇಮ್ಸ್ 2022: ಕುಸ್ತಿಯಲ್ಲಿ ಚಿನ್ನ ಗೆದ್ದ ಭಾರತದ ಕುಸ್ತಿಪಟು ರವಿಕುಮಾರ್ ದಹಿಯಾ

ಕಾಮನ್ ವೆಲ್ತ್ ಗೇಮ್ಸ್ 2022ರಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಸಿಕ್ಕಿದೆ. ಕುಸ್ತಿಪಟು ರವಿಕುಮಾರ್ ದಹಿಯಾ ಪುರುಷರ 57 ಕೆಜಿ ವಿಭಾಗದಲ್ಲಿ ಚಿನ್ನದ ಪದಕವನ್ನು ತಮ್ಮ ಮುಡಿಗೇರಿಸಿಕೊಂಡರು.

ರವಿಕುಮಾರ್ ದಹಿಯಾ
Nagaraja AB
Updated On : 6 Aug 2022, 10:34 pm

ಬರ್ಮಿಂಗ್ ಹ್ಯಾಮ್: ಕಾಮನ್ ವೆಲ್ತ್ ಗೇಮ್ಸ್ 2022ರಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಸಿಕ್ಕಿದೆ. ಕುಸ್ತಿಪಟು ರವಿಕುಮಾರ್ ದಹಿಯಾ ಪುರುಷರ 57 ಕೆಜಿ ವಿಭಾಗದಲ್ಲಿ ಚಿನ್ನದ ಪದಕವನ್ನು ತಮ್ಮ ಮುಡಿಗೇರಿಸಿಕೊಂಡರು.

ಶನಿವಾರ ನಡೆದ ಫೈನಲ್ ಪಂದ್ಯದಲ್ಲಿ ಎದುರಾಳಿ ಎಬಿಕೆವೆನಿಮೊ ವೆಲ್ಸನ್ ಅವರನ್ನು 10-0 ಅಂತರದಲ್ಲಿ ಸೋಲಿಸಿ, ಚಿನ್ನದ ಪದಕಕ್ಕೆ ಮುತ್ತಿಟ್ಟರು. ಶ್ರೇಷ್ಠ ಹೋರಾಟದ ಮೂಲಕ ಚಿನ್ನ ಗೆದ್ದ ರವಿಕುಮಾರ್ ದಹಿಯಾ, ಕುಸ್ತಿಯಲ್ಲಿ ಭಾರತಕ್ಕೆ ನಾಲ್ಕನೇ ಚಿನ್ನವನ್ನು ತಂದುಕೊಟ್ಟರು.

ಇದಕ್ಕೂ ಮುನ್ನ ಪಾಕಿಸ್ತಾನದ ಗ್ರಾಪ್ಲರ್ ಅಲಿ ಅಸದ್ ಅವರನ್ನು ಸೋಲಿಸಿ ಫೈನಲ್ ಗೆ ರವಿಕುಮಾರ್ ದಹಿಯಾ ಲಗ್ಗೆ ಇಟ್ಟಿದ್ದರು. 
ಆ ಸ್ಪರ್ಧೆಯಲ್ಲಿ  14-4 ಅಂತರದಲ್ಲಿ ದಹಿಯಾ ಗೆಲುವು ಸಾಧಿಸಿದ್ದರು. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement