ನೀರಜ್ ಚೋಪ್ರಾ 
ಕ್ರೀಡೆ

ನೀರಜ್ ಚೋಪ್ರಾಗೆ ಗಾಯ, ಕಾಮನ್‌ವೆಲ್ತ್ ಕ್ರೀಡಾಕೂಟದಿಂದ ಹೊರಗುಳಿದ ಜಾವೆಲಿನ್ ತಾರೆ

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‌ನಲ್ಲಿ ಉಂಟಾದ ಗಾಯದಿಂದಾಗಿ ಜಾವೆಲಿನ್ ತಾರೆ ನೀರಜ್ ಚೋಪ್ರಾ ಅವರು ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುವ ಮುಂಬರುವ ಕಾಮನ್‌ವೆಲ್ತ್ ಕ್ರೀಡಾಕೂಟದಿಂದ ಹೊರಗುಳಿದಿದ್ದಾರೆ...

ನವದೆಹಲಿ: ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‌ನಲ್ಲಿ ಉಂಟಾದ ಗಾಯದಿಂದಾಗಿ ಜಾವೆಲಿನ್ ತಾರೆ ನೀರಜ್ ಚೋಪ್ರಾ ಅವರು ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುವ ಮುಂಬರುವ ಕಾಮನ್‌ವೆಲ್ತ್ ಕ್ರೀಡಾಕೂಟದಿಂದ ಹೊರಗುಳಿದಿದ್ದಾರೆ ಎಂದು ಭಾರತೀಯ ಒಲಿಂಪಿಕ್ ಅಸೋಸಿಯೇಷನ್(ಐಒಎ) ಮಂಗಳವಾರ ತಿಳಿಸಿದೆ.

ಒರೆಗಾನ್‌ನಲ್ಲಿ ಭಾನುವಾರ ನಡೆದ ಶ್ವ ಅಥ್ಲೆಟಿಕ್ ಚಾಂಪಿಯನ್‌ಷಿಪ್‌ ನಲ್ಲಿ 88.13 ಮೀಟರ್‌ ದೂರ ಎಸೆದು ಬೆಳ್ಳಿ ಪದಕ ಗೆದ್ದಿದ್ದ ನೀರಜ್, ವಿಶ್ವ ಚಾಂಪಿಯನ್ ಶಿಪ್‌ನಲ್ಲಿ ತಮ್ಮ ಪ್ರದರ್ಶನದ ವೇಳೆ ಗಾಯಗೊಂಡಿದ್ದರಿಂದ ಕಾಮನ್‌ವೆಲ್ತ್ ಗೇಮ್ಸ್ ಗೆ ಲಭ್ಯವಾಗುತ್ತಿಲ್ಲ.

ಟೀಂ ಇಂಡಿಯಾ ಜಾವೆಲಿನ್ ತಾರೆ ನೀರಜ್ ಚೋಪ್ರಾ ಅವರು ಫಿಟ್ನೆಸ್ ಕಾಳಜಿಯಿಂದಾಗಿ ಬರ್ಮಿಂಗ್ ಹ್ಯಾಮ್ 2022 ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಲು ಯುಎಸ್ ನಿಂದ ನನಗೆ ಕರೆ ಬಂದಿತ್ತು. 2022 ರ ಯುಜೀನ್ ನಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‌ನಲ್ಲಿ ಭಾಗವಹಿಸಿದ ನಂತರ, ಚೋಪ್ರಾ ಅವರು ಸೋಮವಾರ ಎಂಆರ್ ಐ ಸ್ಕ್ಯಾನ್ ಮಾಡಿಸಿಕೊಂಡಿದ್ದಾರೆ ಮತ್ತು ಅದರ ಆಧಾರದ ಮೇಲೆ ಅವರ ವೈದ್ಯಕೀಯ ತಂಡವು ಅವರಿಗೆ ಒಂದು ತಿಂಗಳ ವಿಶ್ರಾಂತಿಗೆ ಸಲಹೆ ನೀಡಿದೆ ಎಂದು ಐಒಎ ಪ್ರಧಾನ ಕಾರ್ಯದರ್ಶಿ ರಾಜೀವ್ ಮೆಹ್ತಾ ತಿಳಿಸಿದ್ದಾರೆ.

ಕಳೆದ ವರ್ಷದ ಟೋಕಿಯೊ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದಿದ್ದ ನೀರಜ್, ಹಾಲಿ ಒಲಿಂಪಿಕ್ ಚಾಂಪಿಯನ್ ಕೂಡ ಆಗಿದ್ದಾರೆ. ಒರೆಗಾನ್‌ನಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದ ನಂತರ ನೀರಜ್, ಫೈನಲ್‌ನಲ್ಲಿ ನಾಲ್ಕನೇ ಪ್ರಯತ್ನದ ಬಳಿಕ ತಮ್ಮ ತೊಡೆಯಲ್ಲಿ ಕಂಡು ಬಂದ ಸ್ವಲ್ಪ ಅಸ್ವಸ್ಥತೆ ಬಗ್ಗೆ ಮಾಹಿತಿ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ತೀವ್ರ ಧ್ರುವೀಕರಣಗೊಂಡ ಜಗತ್ತು, ಪಶ್ಚಿಮ ಏಷ್ಯಾ ಸಂಘರ್ಷದ ನಡುವೆಯೂ ಬ್ರಿಕ್ಸ್ ಶೃಂಗಸಭೆ ಯಶಸ್ವಿ-ಎಸ್ ಜೈಶಂಕರ್

ಬೆಳಗಾವಿ: ಬೈಕ್- ಸಾರಿಗೆ ಬಸ್ ನಡುವೆ ಅಪಘಾತ: ಮೂವರು ಸ್ಥಳದಲ್ಲೇ ಸಾವು!

KPSC ರದ್ದತಿಗೆ ಈಶ್ವರ್ ಖಂಡ್ರೆ ಪಟ್ಟು; UPSC ಮಾದರಿ ತನ್ನಿ ಎಂದು ಸಿಎಂಗೆ ಗ್ರಾಮೀಣಾಭಿವೃದ್ಧಿ ಸಚಿವ ಮನವಿ

'ಹಾಸ್ಯಾಸ್ಪದ, ನಾಚಿಕೆಗೇಡು': ಬ್ರಿಕ್ಸ್ ಭೋಜನಕೂಟದ ಮೆನು ಕುರಿತ ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ಆಕ್ರೋಶ

ಜೈಲಿನಲ್ಲಿ ಮಾಜಿ ಪ್ರಧಾನಿ: 52ನೇ ವಯಸ್ಸಿನಲ್ಲಿ ಎರಡನೇ ಮದುವೆಯಾದ ಇಮ್ರಾನ್ ಖಾನ್ ಮಾಜಿ ಪತ್ನಿ!