ಭಾರತ ವನಿತೆಯರ ತಂಡಕ್ಕೆ ಜಯ 
ಕ್ರೀಡೆ

Commonwealth Games Hockey: ಭಾರತ ವನಿತೆಯರ ತಂಡ ಶುಭಾರಂಭ; ಘಾನಾ ವಿರುದ್ಧ 5-0 ಭರ್ಜರಿ ಜಯ

ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ಹಾಕಿ ವನಿತೆಯರ ತಂಡ ಶುಭಾರಂಭ ಮಾಡಿದ್ದು, ಘಾನಾ ವಿರುದ್ಧದ ಮೊದಲ ಪಂದ್ಯದಲ್ಲಿ 5-0 ಅಂತರದ ಭರ್ಜರಿ ಜಯ ಸಾಧಿಸಿದೆ.

ಬರ್ಮಿಂಗ್‌ಹ್ಯಾಂ: ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ಹಾಕಿ ವನಿತೆಯರ ತಂಡ ಶುಭಾರಂಭ ಮಾಡಿದ್ದು, ಘಾನಾ ವಿರುದ್ಧದ ಮೊದಲ ಪಂದ್ಯದಲ್ಲಿ 5-0 ಅಂತರದ ಭರ್ಜರಿ ಜಯ ಸಾಧಿಸಿದೆ.

ಶುಕ್ರವಾರ ನಡೆದ ಪಂದ್ಯದಲ್ಲಿ ಸವಿತಾ ಪೂನಿಯಾ ನಾಯಕತ್ವದ ಭಾರತ 5–0ಯಿಂದ ತನಗಿಂತ ಕೆಳ ರ‍್ಯಾಂಕಿನ ಘಾನಾ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಗುರ್ಜಿತ್ ಕೌರ್ ಗಳಿಸಿದ ಸೊಗಸಾದ ಎರಡು ಗೋಲುಗಳ ನೆರವಿನಿಂದ ಭಾರತ ಮಹಿಳಾ ಹಾಕಿ ತಂಡವು ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭರ್ಜರಿ ಗೆಲುವಿನ ಆರಂಭ ಮಾಡಿತು. 

ಗುರ್ಜಿತ್ ಕೌರ್‌ ಮೂರು ಮತ್ತು 39ನೇ ನಿಮಿಷಗಳಲ್ಲಿ ಗೋಲು ಗಳಿಸಿದರು. ನೇಹಾ ಗೋಯಲ್‌ (28ನೇ ನಿಮಿಷ), ಸಂಗೀತಾ ಕುಮಾರಿ (36ನೇ ನಿ.) ಮತ್ತು ಸಲೀಮಾ ಟೆಟೆ (56ನೇ ನಿ.) ತಂಡದ ಗೆಲುವಿನಲ್ಲಿ ಮಿಂಚಿದರು.  ವಿಶ್ವ ರ‍್ಯಾಂಕಿಂಗ್‌ನಲ್ಲಿ ಘಾನಾ 30ನೇ ಸ್ಥಾನದಲ್ಲಿದ್ದರೆ ಭಾರತ 9ನೇ ಸ್ಥಾನದಲ್ಲಿದೆ. ಭಾರತ ತಂಡವು ಶನಿವಾರ ನಡೆಯುವ ಗುಂಪು ಹಂತದ ಎರಡನೇ ಪಂದ್ಯದಲ್ಲಿ ವೇಲ್ಸ್ ತಂಡವನ್ನು ಎದುರಿಸಲಿದೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT