ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್: ಗೆದ್ದ ಪದಕವನ್ನು ಪತ್ನಿಗೆ ಅರ್ಪಿಸಿದ ಕನ್ನಡಿಗ ಗುರುರಾಜ್ ಪೂಜಾರಿ

Lingaraj Badiger

ಬರ್ಮಿಂಗ್ ಹ್ಯಾಮ್: ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದೂವರೆದಿದ್ದು, 61 ಕೆಜಿ ವಿಭಾಗದ ವೇಯ್ಟ್ ಲಿಫ್ಟಿಂಗ್ ನಲ್ಲಿ ಕನ್ನಡಿಗ ಗುರುರಾಜ್ ಪೂಜಾರಿ ಅವರು ಕಂಚಿನ ಪದಕ ಗೆದ್ದಿದ್ದಾರೆ ಮತ್ತು ಆ ಪದಕವನ್ನು ತಮ್ಮ ಪತ್ನಿಗೆ ಅರ್ಪಿಸಿದ್ದಾರೆ.

"ನಾನು ನನ್ನ ಪದಕವನ್ನು ನನ್ನ ಹೆಂಡತಿಗೆ ಅರ್ಪಿಸುತ್ತೇನೆ ಮತ್ತು ನನ್ನ ಎಲ್ಲಾ ಬೆಂಬಲಿಗರಿಗೆ ಧನ್ಯವಾದಗಳು. ಸಂಕೇತ್ ಬೆಳ್ಳಿ ಗೆದ್ದಿದ್ದು, ಕಂಚು ಗೆಲ್ಲುವ ಮೂಲಕ ಭಾರತಕ್ಕೆ ಎರಡನೇ ಪದಕ ತಂದುಕೊಟ್ಟಿದ್ದಕ್ಕೆ ನನಗೆ ಖುಷಿಯಾಗಿದೆ. ನಾನು ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿದ್ದೆ. ಈಗ ಚೇತರಿಸಿಕೊಂಡಿದ್ದೇನೆ ಮತ್ತು ನನ್ನ ಅತ್ಯುತ್ತಮ ಪ್ರಯತ್ನವನ್ನು ನೀಡಿದ್ದೇನೆ" ಎಂದು ಗುರುರಾಜ್ ಪೂಜಾರಿ ಎಎನ್ಐಗೆ ತಿಳಿಸಿದ್ದಾರೆ.

ಗೆಲುವಿನ ನಂತರ ತ್ರಿವರ್ಣ ಧ್ವಜವನ್ನು ಹಾರಿಸಿರುವುದನ್ನು ನೋಡಿ ಹೆಮ್ಮೆಪಟ್ಟಿದ್ದೇನೆ. ನಾನು ಅದನ್ನು ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ಇದು ನನ್ನ ಕನಸು ಗುರುರಾಜ್ ಹೇಳಿದ್ದಾರೆ.

ಗುರುರಾಜ್ ಅವರು ಪುರುಷರ 61 ಕೆಜಿ ವಿಭಾಗದ ವೇಟ್‌ಲಿಫ್ಟಿಂಗ್‌ನಲ್ಲಿ ಒಟ್ಟು 269 ಕೆಜಿ ಭಾರ ಎತ್ತುವ ಮೂಲಕ ಮೂಲಕ ಮತ್ತೊಮ್ಮೆ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಗುರುರಾಜ್ ಈ ಮೊದಲು 2018ರಲ್ಲಿ ನಡೆದ ಗೋಲ್ಡ್‌ಕೋಸ್ಟ್‌ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದರು.

SCROLL FOR NEXT