ಸಂಕೇತ್ 
ಕ್ರೀಡೆ

ಕಾಮನ್ವೆಲ್ತ್ ಗೇಮ್ಸ್ 2022: ಭಾರತಕ್ಕೆ ಮೊದಲ ಪದಕ; ಬೆಳ್ಳಿ ಗೆದ್ದ ವೇಯ್ಟ್ ಲಿಫ್ಟರ್ ಸಂಕೇತ್ ಸರ್ಗರ್!

ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಶುರುವಾಗಿದ್ದು ವೇಟ್ ಲಿಫ್ಟರ್ ಸಂಕೇತ್ ಸರ್ಗರ್ ಬೆಳ್ಳಿ ಪದಕ ಗೆದ್ದಿದ್ದಾರೆ.

ಬರ್ಮಿಂಗ್ಹ್ಯಾಮ್: ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಶುರುವಾಗಿದ್ದು ವೇಟ್ ಲಿಫ್ಟರ್ ಸಂಕೇತ್ ಸರ್ಗರ್ ಬೆಳ್ಳಿ ಪದಕ ಗೆದ್ದಿದ್ದಾರೆ.

55 ಕೆಜಿ ವಿಭಾಗದ ಕ್ಲೀನ್ ಆಂಡ್ ಜರ್ಕ್ ವಿಭಾಗದಲ್ಲಿ 248 ಕೆಜಿ ಭಾರ ಎತ್ತುವ ಮೂಲಕ 21 ವರ್ಷದ ಸಂಕೇತ್ ಬೆಳ್ಳಿ ಪದಕಕ್ಕೆ ಮುತ್ತಿಟ್ಟರು. ಇನ್ನು 249 ಕೆಜಿ ಭಾರ ಎತ್ತುವ ಮೂಲಕ ಚಿನ್ನದ ಪದಕ ಗೆದ್ದಿದ್ದಾರೆ.

ಮೊದಲ ಸ್ಥಾನದಲ್ಲಿದ್ದ ಸಂಕೇತ್ ನಂತರ ಗಾಯಗೊಂಡಿದ್ದರಿಂದ ಎರಡನೇ ಸುತ್ತಿನಲ್ಲಿ ಹೆಚ್ಚು ಭಾರ ಎತ್ತಲು ಸಾಧ್ಯವಾಗದೆ ಇದ್ದಿದ್ದೂ ಚಿನ್ನದ ಪದಕ ಕೈತಪ್ಪಲು ಕಾರಣವಾಯಿತು.

ಕಳೆದ ಆವೃತ್ತಿಯಲ್ಲಿ, ಭಾರತೀಯ ಲಿಫ್ಟರ್‌ಗಳು ಐದು ಚಿನ್ನ ಸೇರಿದಂತೆ ಒಂಬತ್ತು ಪದಕಗಳನ್ನು ಗೆದ್ದು ಬೀಗಿದ್ದರು.

ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದಿರುವ ಸಂಕೇತ್ ಸರ್ಗರ್ ಗೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಸಂಕೇತ್ ಸರ್ಗರ್ ಅವರ ಅಸಾಧಾರಣ ಪ್ರಯತ್ನ! ಪ್ರತಿಷ್ಠಿತ ಬೆಳ್ಳಿ ಪದಕ ಗೆದ್ದಿರುವುದು ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತಕ್ಕೆ ಉತ್ತಮ ಆರಂಭವಾಗಿದೆ. ಅವರಿಗೆ ಅಭಿನಂದನೆಗಳು ಮತ್ತು ಭವಿಷ್ಯದ ಎಲ್ಲಾ ಪ್ರಯತ್ನಗಳಿಗೆ ಶುಭಾಶಯಗಳು ಎಂದು ಟ್ವೀಟಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್