ಎಚ್ಎಸ್ ಪ್ರಣಯ್-ಪಿವಿ ಸಿಂಧು 
ಕ್ರೀಡೆ

ಮಲೇಷ್ಯಾ ಓಪನ್ 2022: ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಪಿವಿ ಸಿಂಧು, ಎಚ್ಎಸ್ ಪ್ರಣಯ್!

ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಪಿವಿ ಸಿಂಧು ಮಲೇಷ್ಯಾ ಓಪನ್‌ನಲ್ಲಿ ಥಾಯ್ಲೆಂಡ್‌ನ ಫಿಟ್ಟಾಯಪೋರ್ನ್ ಚೈವಾನ್ ವಿರುದ್ಧ ಜಯಗಳಿಸಿ ಕ್ವಾರ್ಟರ್‌ಫೈನಲ್ ಪ್ರವೇಶಿಸಿದ್ದಾರೆ.

ಕೌಲಾಲಂಪುರ: ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಪಿವಿ ಸಿಂಧು ಮಲೇಷ್ಯಾ ಓಪನ್‌ನಲ್ಲಿ ಥಾಯ್ಲೆಂಡ್‌ನ ಫಿಟ್ಟಾಯಪೋರ್ನ್ ಚೈವಾನ್ ವಿರುದ್ಧ ಜಯಗಳಿಸಿ ಕ್ವಾರ್ಟರ್‌ಫೈನಲ್ ಪ್ರವೇಶಿಸಿದ್ದಾರೆ.

ಆಕ್ಸಿಯಾಟಾ ಅರೆನಾದಲ್ಲಿ ನಡೆದ 57 ನಿಮಿಷಗಳ ಎರಡನೇ ಸುತ್ತಿನ ಹಣಾಹಣಿಯಲ್ಲಿ ವಿಶ್ವ ನಂ.7 ತನ್ನ ಥಾಯ್ ಎದುರಾಳಿಯನ್ನು 19-21 21-9 21-14 ರಿಂದ ಸೋಲಿಸಿದರು. ಏಳನೇ ಶ್ರೇಯಾಂಕದ ಭಾರತೀಯ ಆಟಗಾರ್ತಿ ಕ್ವಾರ್ಟರ್ ಫೈನಲ್ ನಲ್ಲಿ ಚೈನೀಸ್ ತೈಪೆಯ ತೈ ತ್ಸು ಯಿಂಗ್ ಅವರನ್ನು ಎದುರಿಸಲಿದ್ದಾರೆ.

ಪುರುಷರ ಸಿಂಗಲ್ಸ್‌ನಲ್ಲಿ ವಿಶ್ವದ ನಂ.21 ಆಟಗಾರ ಎಚ್‌ಎಸ್ ಪ್ರಣಯ್ ಅವರು ಚೈನೀಸ್ ತೈಪೆಯ ನಾಲ್ಕನೇ ಶ್ರೇಯಾಂಕದ ಚೌ ಟಿಯೆನ್ ಚೆನ್ ವಿರುದ್ಧ 21-15 21-7 ಸುಲಭ ಜಯ ಸಾಧಿಸಿ ಕ್ವಾರ್ಟರ್‌ಫೈನಲ್‌ಗೆ ಪ್ರವೇಶಿಸಿದರು.

ಥಾಮಸ್ ಕಪ್ ಭಾರತದ ಐತಿಹಾಸಿಕ ಪ್ರಶಸ್ತಿ ಗೆಲುವಿನಲ್ಲಿ ಒಬ್ಬರಾದ ಶ್ರೇಯಾಂಕ ರಹಿತ ಪ್ರಣಯ್ ಮುಂದಿನ ಪಂದ್ಯದಲ್ಲಿ ಏಳನೇ ಶ್ರೇಯಾಂಕದ ಇಂಡೋನೇಷ್ಯಾದ ಜೊನಾಟನ್ ಕ್ರಿಸ್ಟಿ ಅವರನ್ನು ಎದುರಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

19 ವರ್ಷಗಳ ಹಳೆಯ ದಾಖಲೆ ಉಡೀಸ್: ಅಭಿಷೇಕ್, ಪಾಂಡ್ಯ ಅಬ್ಬರ; ಜಿಂಬಾಬ್ವೆಗೆ 257 ರನ್‌ ಬೃಹತ್ ಮೊತ್ತದ ಗುರಿ ನೀಡಿದ ಭಾರತ!

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT