ಶೋಯೆಬ್ ಮಲಿಕ್ ಮತ್ತು ಸಾನಿಯಾ ಮಿರ್ಜಾ 
ಕ್ರೀಡೆ

ಟೆನಿಸ್ ತಾರೆ ಸಾನಿಯಾ ಮಿರ್ಜಾ- ಶೋಯೆಬ್ ಮಲಿಕ್ ಡಿವೋರ್ಸ್ ಕಥೆಗೆ ಹೊಸ ಟ್ವಿಸ್ಟ್!

ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶೋಯೆಬ್ ಮಲಿಕ್ ತಮ್ಮ 12 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ಮುಂದಾಗಿದ್ದಾರೆ ಎನ್ನುವ ವರದಿಗೆ ಇದೀಗ ಟ್ವಿಸ್ಟ್ ಸಿಕ್ಕಿದೆ.

ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶೋಯೆಬ್ ಮಲಿಕ್ ತಮ್ಮ 12 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ಮುಂದಾಗಿದ್ದಾರೆ. ಕೆಲ ಕಾನೂನು ಪ್ರಕ್ರಿಯೆಗಳು ಮುಗಿದ ನಂತರ ಅಧಿಕೃತವಾಗಿ ಘೋಷಿಸಲಿದ್ದಾರೆ ಎಂಬ ವದಂತಿಗಳು ಹರಿದಾಡಿದ್ದವು. ಈ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.

ಆದರೆ, ಸಾನಿಯಾ ಮಿರ್ಜಾ ಮತ್ತು ಶೋಯೆಬ್ ಇದೀಗ ಒಟ್ಟಿಗೆ ಬರಲು ಸಜ್ಜಾಗುತ್ತಿದ್ದಾರೆ. ಅಂದರೆ, ಈ ಸ್ಟಾರ್ ಜೋಡಿ ಹೊಸ ಟಿವಿ ಕಾರ್ಯಕ್ರಮವೊಂದನ್ನು ನಡೆಸಿಕೊಡಲಿದ್ದಾರೆ.

ವಿಚ್ಛೇದನದ ಕುರಿತಾದ ಊಹಾಪೋಹಗಳಿಗೆ ಸಾನಿಯಾ ಮತ್ತು ಶೋಯೆಬ್ ಅಧಿಕೃತವಾಗಿ ಉತ್ತರಿಸಿಲಿಲ್ಲ. ಆದರೆ, ಸ್ಟಾರ್ ದಂಪತಿಯ ವಿಚ್ಛೇದನದ ಕಥೆ ಹೊಸ ಟ್ವಿಸ್ಟ್ ಪಡೆದುಕೊಂಡಿದ್ದು, ಕಾನೂನು ಪ್ರಕ್ರಿಯೆಗಳು ಸಾನಿಯಾ ಮತ್ತು ಶೋಯೆಬ್ ಒಟ್ಟಿಗೆ ಹೋಸ್ಟ್ ಮಾಡಲಿರುವ ಟಿವಿ ಕಾರ್ಯಕ್ರಮಕ್ಕೆ ಸಂಬಂಧಿಸಿದ್ದು ಎನ್ನಲಾಗಿದೆ.

ದಂಪತಿ ಪಾಕಿಸ್ತಾನದ ಚಾನೆಲ್‌ನಲ್ಲಿ ಬರುವ 'ದಿ ಮಿರ್ಜಾ ಮಲಿಕ್ ಶೋ' ಎಂಬ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ ಎಂದು ವರದಿಯಾಗಿದೆ.

ಶೋಯೆಬ್ ಮಲಿಕ್ ಅವರು ಪಾಕಿಸ್ತಾನಿ ಮಾಡೆಲ್ ಆಯೇಶಾ ಒಮರ್ ಜೊತೆ ಸಂಪರ್ಕ ಹೊಂದಿದ್ದಾರೆ ಮತ್ತು ಇತ್ತೀಚಿನ ಫೋಟೋಶೂಟ್ ಸಮಯದಲ್ಲಿ ಶೋಯೆಬ್ ಅವರೊಂದಿಗೆ ಬೋಲ್ಡ್ ಆಗಿ ಫೋಟೊ ತೆಗೆಸಿಕೊಂಡಿದ್ದು, ಚರ್ಚೆಗೆ ಗ್ರಾಸವಾಗಿತ್ತು. ಇದುವೇ ಸಾನಿಯಾ ಮತ್ತು ಶೋಯೆಬ್ ನಡುವಿನ ಬಿರುಕಿಗೆ ಕಾರಣ ಎನ್ನಲಾಗಿತ್ತು.

ಸಾನಿಯಾ ಹಾಗೂ ಮಲಿಕ್ 2010ರ ಎಪ್ರಿಲ್ 12 ರಂದು ಹೈದರಾಬಾದ್‍ನಲ್ಲಿ ಮುಸ್ಲಿಂ ಪದ್ಧತಿಯಂತೆ ತಾಜ್ ಕೃಷ್ಣ ಹೋಟೆಲ್‍ನಲ್ಲಿ ವಿವಾಹವಾಗಿದ್ದರು. ದಂಪತಿಗೆ ಇಜಾನ್ ಎಂಬ ಓರ್ವ ಮಗನಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

SCROLL FOR NEXT