ರೊನಾಲ್ಡೊ 
ಕ್ರೀಡೆ

ಮ್ಯಾಂಚೆಸ್ಟರ್ ಯುನೈಟೆಡ್ ತೊರೆದ ರೊನಾಲ್ಡೊ! ಅಭಿಮಾನಿಗಳಿಗೆ ದೊಡ್ಡ ಶಾಕ್

ವಿಶ್ವ ಶ್ರೇಷ್ಠ ಫುಟ್ಬಾಲ್‌ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ತಕ್ಷಣದಿಂದಲೇ ಜಾರಿಯಾಗುವಂತೆ ​ತಂಡವನ್ನು ತೊರೆಯಲಿದ್ದಾರೆ ಎಂದು ಮ್ಯಾಂಚೆಸ್ಟರ್‌ ಯುನೈಟೆಡ್‌ ಪ್ರೀಮಿಯರ್ ಲೀಗ್ ಮಂಗಳವಾರ ಹೇಳಿದೆ. ಈ ಮೂಲಕ ರೊನಾಲ್ಡೊ ಅಭಿಮಾನಿಗಳಿಗೆ ದೊಡ್ಡ ಶಾಕ್ ನೀಡಲಾಗಿದೆ. 

ಮ್ಯಾಂಚೆಸ್ಟರ್‌: ವಿಶ್ವ ಶ್ರೇಷ್ಠ ಫುಟ್ಬಾಲ್‌ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ತಕ್ಷಣದಿಂದಲೇ ಜಾರಿಯಾಗುವಂತೆ ತಂಡವನ್ನು ತೊರೆಯಲಿದ್ದಾರೆ ಎಂದು ಮ್ಯಾಂಚೆಸ್ಟರ್‌ ಯುನೈಟೆಡ್‌ ಪ್ರೀಮಿಯರ್ ಲೀಗ್ ಮಂಗಳವಾರ ಹೇಳಿದೆ. ಈ ಮೂಲಕ ರೊನಾಲ್ಡೊ ಅಭಿಮಾನಿಗಳಿಗೆ ದೊಡ್ಡ ಶಾಕ್ ನೀಡಲಾಗಿದೆ. 

ಕ್ರಿಸ್ಟಿಯಾನೊ ರೊನಾಲ್ಡೊ ತಕ್ಷಣವೇ ಜಾರಿಗೆ ಬರುವಂತೆ ಪರಸ್ಪರ ಒಪ್ಪಂದದ ಮೂಲಕ ಮ್ಯಾಂಚೆಸ್ಟರ್ ಯುನೈಟೆಡ್ ತೊರೆಯಲಿದ್ದಾರೆ. ಓಲ್ಡ್ ಟ್ರಾಫರ್ಡ್‌ನಲ್ಲಿ ಎರಡು ಸ್ಪೆಲ್‌ಗಳಲ್ಲಿ 346 ಪಂದ್ಯಗಳಲ್ಲಿ 145 ಗೋಲು ಗಳಿಸಿದ ಅವರ ಅಪಾರ ಕೊಡುಗೆಗಾಗಿ ಕ್ಲಬ್ ಅವರಿಗೆ ಧನ್ಯವಾದ ಅರ್ಪಿಸುತ್ತದೆ ಮತ್ತು ಅವರ ಭವಿಷ್ಯಕ್ಕಾಗಿ ಶುಭ ಹಾರೈಸುತ್ತದೆ ಎಂದು ಯುನೈಟೆಡ್ ಹೇಳಿಕೆಯಲ್ಲಿ ತಿಳಿಸಿದೆ.

ಬ್ರಿಟಿಷ್ ಪತ್ರಕರ್ತ ಪಿಯರ್ಸ್ ಮೋರ್ಗಾನ್ ಜೊತೆಗಿನ ಅವರ ಇತ್ತೀಚಿನ ಸಂದರ್ಶನದ ಬಗ್ಗೆ ರೊನೊಲ್ಡೊ ತೀವ್ರ ಟೀಕೆಗೆ ಒಳಗಾಗಿದ್ದಾರೆ. ಸಂದರ್ಶನದಲ್ಲಿ ರೊನಾಲ್ಡೊ ಹಲವಾರು ವಿಷಯಗಳ ಬಗ್ಗೆ ಕ್ಲಬ್ ನ್ನು ಟೀಕಿಸಿದ್ದರು. ಕೆಲವು ಕ್ಲಬ್ ಗಳ ಮುಖ್ಯಸ್ಥರು ತನ್ನನ್ನು ಹೊರಹಾಕಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿದ್ದರು. ಇದೇ ಅವರಿಗೆ ಮುಳುವಾಗಿರಬಹುದೆಂದು ವರದಿಯಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್