ಗೆಲುವಿನ ಸಂಭ್ರಮದಲ್ಲಿ ಜಪಾನ್ ಆಟಗಾರರು 
ಕ್ರೀಡೆ

ಫಿಫಾ ವಿಶ್ವಕಪ್ 2022: ನಾಲ್ಕು ಬಾರಿ ಚಾಂಪಿಯನ್ ಜರ್ಮನಿಗೆ ಶಾಕ್ ನೀಡಿದ ಜಪಾನ್; 2-1 ಗೋಲುಗಳೊಂದಿಗೆ ಗೆಲುವು

ಖಲೀಫಾ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ಬುಧವಾರ ನಡೆದ ಫಿಫಾ ವಿಶ್ವಕಪ್‌ನ ಇ ಗುಂಪಿನ ಪಂದ್ಯದಲ್ಲಿ ನಾಲ್ಕು ಬಾರಿಯ ಚಾಂಪಿಯನ್‌ ನ್ನು ಜರ್ಮನಿಯನ್ನು 2-1 ಗೋಲುಗಳಿಂದ ಸೋಲಿಸಿದ ಜಪಾನ್, ಅದ್ಭುತವಾಗಿ ಕಾಂಬ್ಯಾಕ್ ಮಾಡಿತು.

ದೋಹಾ: ಖಲೀಫಾ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ಬುಧವಾರ ನಡೆದ ಫಿಫಾ ವಿಶ್ವಕಪ್‌ನ ಇ ಗುಂಪಿನ ಪಂದ್ಯದಲ್ಲಿ ನಾಲ್ಕು ಬಾರಿಯ ಚಾಂಪಿಯನ್‌ ನ್ನು ಜರ್ಮನಿಯನ್ನು 2-1 ಗೋಲುಗಳಿಂದ ಸೋಲಿಸಿದ ಜಪಾನ್, ಅದ್ಭುತವಾಗಿ ಕಾಂಬ್ಯಾಕ್ ಮಾಡಿತು.

ಪಂದ್ಯದ  ಮೊದಲಾರ್ಧದ ಕೊನೆಯಲ್ಲಿ ಜರ್ಮನಿ ಮುನ್ನಡೆಯಲ್ಲಿತ್ತು. ಆದರೆ, ಜಪಾನ್‌ ತಂಡ 75ನೇ ನಿಮಿಷ ಹಾಗೂ 83ನೇ ನಿಮಿಷದಲ್ಲಿ ಗೋಲು ಸಿಡಿಸುವ ಮೂಲಕ ತನ್ನ ಈವರೆಗಿನ ಅತ್ಯಂತ ಸ್ಮರಣೀಯ ಗೆಲುವು ದಾಖಲಿಸಿತು. ಈ ಎರಡೂ ಗೋಲುಗಳನ್ನು ಸೂಪರ್‌ ಸಬ್‌ಗಳಾದ ರಿಟ್ಸು ಡೋನ್‌ ಹಾಗೂ ಟಕುಮಾ ಅಸಾನೋ ಬಾರಿಸಿದರು.

57 ನೇ ನಿಮಿಷದಲ್ಲಿ ಬದಲಿ ಆಟಗಾರನಾಗಿ ಬಂದ ಟಕುಮಾ ಅಸಾನೊ ಪಂದ್ಯದಲ್ಲಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದರು. ಪಂದ್ಯದ 33ನೇ ನಿಮಿಷದಲ್ಲಿ ಜಪಾನ್‌ನ ವಿಂಗ್‌ ಬ್ಯಾಕ್‌ ಡೇವಿಡ್‌ ರೌಮ್‌ ಅವರ ಮೇಲೆ ಜಪಾನ್‌ನ ಗೋಲ್ ಕೀಪರ್‌ ಶೈಚು ಗೊಂಡಾ ಫೌಲ್‌ ಮಾಡಿದ್ದ ಕಾರಣಕ್ಕೆ ಸಿಕ್ಕ ಪೆನಾಲ್ಟಿ ಅವಕಾಶದಲ್ಲಿ ಗುಂಡೋಗನ್‌ ಗೋಲು ಬಾರಿಸಿದ್ದರು.

ಈ ಗೆಲುವಿನೊಂದಿಗೆ, ಜರ್ಮನಿ, ಕೋಸ್ಟರಿಕಾ ಮತ್ತು ಸ್ಪೇನ್ ಒಳಗೊಂಡಿರುವ ಇ ಗುಂಪಿನಲ್ಲಿ ಜಪಾನ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!