ವಿರಾಟ್ ಕೊಹ್ಲಿ 
ಕ್ರೀಡೆ

ಅಭಿಮಾನದ ಅತಿರೇಕ: ಆರ್ ಸಿಬಿ ಬಗ್ಗೆ ಅಪಹಾಸ್ಯ ಮಾಡಿದ ಸ್ನೇಹಿತನನ್ನೇ ಕೊಂದ ವಿರಾಟ್ ಕೊಹ್ಲಿ ಫ್ಯಾನ್

ಚೆನ್ನೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹಾಗೂ ವಿರಾಟ್‌ ಕೊಹ್ಲಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಎಂಬ ಕಾರಣಕ್ಕೆ ಅಭಿಮಾನಿಯೊಬ್ಬ ತನ್ನ ಸ್ನೇಹಿತನನ್ನೇ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ವರದಿಯಾಗಿದೆ

ಚೆನ್ನೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹಾಗೂ ವಿರಾಟ್‌ ಕೊಹ್ಲಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಎಂಬ ಕಾರಣಕ್ಕೆ ಅಭಿಮಾನಿಯೊಬ್ಬ ತನ್ನ ಸ್ನೇಹಿತನನ್ನೇ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ವರದಿಯಾಗಿದೆ.

ಕೊಲೆ ಮಾಡಿರುವ ಯುವಕ ವಿರಾಟ್ ಕೊಹ್ಲಿ ಅಭಿಮಾನಿಯಾದರೆ, ಸಾವಿಗೀಡಾದವ ರೋಹಿತ್‌ ಶರ್ಮಾ ಅಭಿಮಾನಿ.  ಮೃತ ಯುವಕನನ್ನು ಪಿ. ವಿಘ್ನೇಶ್ (24) ಎಂದು ಗುರುತಿಸಲಾಗಿದೆ. ಕೊಲೆ ಆರೋಪದ ಮೇಲೆ 21 ವರ್ಷದ ಎಸ್.ಧರ್ಮರಾಜ್ ಎಂಬ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅರಿಯಾಲೂರು ಜಿಲ್ಲೆಯ ಪೊಯ್ಯೂರು ಗ್ರಾಮದವರಾದ ಇಬ್ಬರೂ ಅಪ್ಪಟ ಕ್ರಿಕೆಟ್ ಅಭಿಮಾನಿಗಳಾಗಿದ್ದರು. ಐಟಿಐ ಮುಗಿಸಿದ್ದ ವಿಘ್ನೇಶ್ ಸಿಂಗಪುರಕ್ಕೆ ತೆರಳಲು ಉದ್ಯೋಗ ವೀಸಾಗಾಗಿ ಕಾಯುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.

ವಿಘ್ನೇಶ್ ಮತ್ತು ಧರ್ಮರಾಜ್ ಮಂಗಳವಾರ ರಾತ್ರಿ ಮಲ್ಲೂರು ಬಳಿಯ ಸಿಡ್ಕೊ ಇಂಡಸ್ಟ್ರಿಯಲ್ ಎಸ್ಟೇಟ್ ಪ್ರದೇಶದಲ್ಲಿ ಮದ್ಯ ಸೇವಿಸಿ, ರೋಹಿತ್ ಶರ್ಮಾ ಅಥವಾ ವಿರಾಟ್ ಕೊಹ್ಲಿ ಇಬ್ಬರಲ್ಲಿ ಯಾರು ಉತ್ತಮ ಆಟಗಾರ ಎಂಬುದರ ಬಗ್ಗೆ ಚರ್ಚೆ ನಡೆಸಿದ್ದರು. ಈ ವೇಳೆ ಗಲಾಟೆ ಮಾಡಿಕೊಂಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರ್‌ಸಿಬಿ ಮತ್ತು ವಿರಾಟ್ ಕೊಹ್ಲಿ ಬಗ್ಗೆ ವಿಘ್ನೇಶ್ ಅಪಹಾಸ್ಯ ಮಾಡಿದ್ದರು. ಇದರಿಂದ ಕುಪಿತಗೊಂಡ ಧರ್ಮರಾಜ್, ವಿಘ್ನೇಶ್ ಮೇಲೆ ಬಾಟಲಿಯಿಂದ ಹಲ್ಲೆ ನಡೆಸಿದ್ದಾನೆ. ಜತೆಗೆ ಬ್ಯಾಟ್‌ನಿಂದ ತಲೆಗೆ ಹೊಡೆದಿದ್ದಾನೆ. ಘಟನೆ ಬಳಿಕ ಧರ್ಮರಾಜ್ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT