ಶಾಜಿ ಪ್ರಭಾಕರನ್ 
ಕ್ರೀಡೆ

ಅಖಿಲ ಭಾರತ ಫುಟ್ ಬಾಲ್ ಫೆಡರೇಶನ್ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಶಾಜಿ ಪ್ರಭಾಕರನ್ ನೇಮಕ

ದೆಹಲಿ ಫುಟ್ ಬಾಲ್ ಅಧ್ಯಕ್ಷ ಮತ್ತು ಧೀರ್ಘ ಕಾಲದಿಂದ ಆಡಳಿತಾಧಿಕಾರಿಯಾಗಿರುವ ಶಾಜಿ ಪ್ರಭಾಕರನ್ ಅವರನ್ನು ಅಖಿಲ ಭಾರತ ಫುಟ್ ಬಾಲ್ ಫೆಡರೇಶನ್ ನ ನೂತನ  ಪ್ರಧಾನ ಕಾರ್ಯದರ್ಶಿಯಾಗಿ ಶನಿವಾರ ನೇಮಕಗೊಂಡಿದ್ದಾರೆ.

ನವದೆಹಲಿ: ದೆಹಲಿ ಫುಟ್ ಬಾಲ್ ಅಧ್ಯಕ್ಷ ಮತ್ತು ಧೀರ್ಘ ಕಾಲದಿಂದ ಆಡಳಿತಾಧಿಕಾರಿಯಾಗಿರುವ ಶಾಜಿ ಪ್ರಭಾಕರನ್ ಅವರನ್ನು ಅಖಿಲ ಭಾರತ ಫುಟ್ ಬಾಲ್ ಫೆಡರೇಶನ್ ನ ನೂತನ  ಪ್ರಧಾನ ಕಾರ್ಯದರ್ಶಿಯಾಗಿ ಶನಿವಾರ ನೇಮಕಗೊಂಡಿದ್ದಾರೆ.

ಪುಟ್ ಬಾಲ್ ಹೌಸ್ ನಲ್ಲಿ ಎಐಎಫ್ ಎಫ್ ಅಧ್ಯಕ್ಷ ಕಲ್ಯಾಣ್ ಚೌಬೆ ನೇತೃತ್ವದಲ್ಲಿ ನಡೆದ ಅಖಿಲ ಭಾರತ ಪುಟ್ ಬಾಲ್ ಫೆಡರೇಶನ್ ನ ನೂತನ ಕಾರ್ಯಕಾರಿ ಸಮಿತಿಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 

ಅಖಿಲ ಭಾರತ ಪುಟ್ ಬಾಲ್ ಫೆಡರೇಶನ್ ನ ನೂತನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಪ್ರಭಾಕರನ್ ಅವರ ಹೆಸರನ್ನು ಚೌಬೆ ಸೂಚಿಸಿದರು. ಇತರ ಎಲ್ಲಾ ಸದಸ್ಯರನ್ನು ಇದನ್ನು ಸರ್ವಾನುಮತದಿಂದ ಅನುಮೋದಿಸಿದರು ಎಂದು ಎಐಎಫ್ ಎಫ್  ಹೇಳಿಕೆಯಲ್ಲಿ ತಿಳಿಸಿದೆ.

ಸುಪ್ರೀಂಕೋರ್ಟ್ ನಿರ್ದೇಶನದಿಂದ ಇದೇ ಮೊದಲ ಬಾರಿಗೆ ಆರು ಮಂದಿ ಮಾಜಿ ಆಟಗಾರರು ಸಮಿತಿಯ ಭಾಗವಾಗಿದ್ದಾರೆ. ನಾವು ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ. ಭಾರತೀಯ ಫುಟ್ ಬಾಲ್ ನ್ನು ಎಲ್ಲರೂ ಒಟ್ಟಾಗಿ ತೆಗೆದುಕೊಂಡು ಹೋಗಲು ಯಾವುದೇ ವೈಯಕ್ತಿಕ ಪ್ರತಿಷ್ಠೆ ಅಡ್ಡಿಯಾಗಬರಾದು, ಯಶಸ್ಸು ಸಾಧಿಸುವಲ್ಲಿ ಶಿಸ್ತು ಪ್ರಮುಖವಾದ ಅಂಶವಾಗಿದೆ ಎಂದು ಎಐಎಫ್ ಎಫ್ ಅಧ್ಯಕ್ಷರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT