ಕ್ರೀಡೆ

ಲೈಂಗಿಕ ದೌರ್ಜನ್ಯ ಆರೋಪ: WFI ಅಧ್ಯಕ್ಷ ಬ್ರಿಜ್ ಭೂಷಣ್ ಗೆ ಕ್ಲೀನ್ ಚಿಟ್ ಸಾಧ್ಯತೆ!

Vishwanath S

ನವದೆಹಲಿ: ಭಾರತೀಯ ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಕ್ಲೀನ್ ಚಿಟ್ ಸಿಗುವ ಸಾಧ್ಯತೆಯಿದೆ ಎಂದು ವರದಿಗಳು ಸೂಚಿಸುತ್ತವೆ. 

ಇದೀಗ ಎಂಸಿ ಮೇರಿ ಕೋಮ್ ನೇತೃತ್ವದ 5 ಸದಸ್ಯರ ಮೇಲ್ವಿಚಾರಣಾ ಸಮಿತಿಯು WFI ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ವಿರುದ್ಧದ ಆರೋಪವನ್ನು ತೆರವುಗೊಳಿಸುವ ಸಾಧ್ಯತೆಯಿದೆ. ಕಾರಣ ಅವರ ವಿರುದ್ಧದ ಲೈಂಗಿಕ ಕಿರುಕುಳದ ಯಾವುದೇ ನಿರ್ದಿಷ್ಟ ಸಾಕ್ಷಿಗಳು ಸಿಕ್ಕಿಲ್ಲ ಎಂಬುದಾಗಿದೆ. 

ರಾಷ್ಟ್ರೀಯ ತರಬೇತುದಾರರು ವರ್ಷಗಳಿಂದ ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡುತ್ತಿದ್ದು ಇನ್ನು ಭಾರತೀಯ ಕುಸ್ತಿ ಫೆಡರೇಶನ್ ಅಧಿಕಾರಿಗಳು ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಜಂತರ್ ಮಂತರ್‌ನಲ್ಲಿ ಒಲಿಂಪಿಕ್ ಪದಕ ವಿಜೇತರಾದ ಭಜರಂಗ್ ಪೂನಿಯಾ, ಸಾಕ್ಷಿ ಮಲಿಕ್, ರವಿ ದಹಿಯಾ ಸೇರಿದಂತೆ ಪ್ರಮುಖ ಕುಸ್ತಿಪಟುಗಳು ಮೂರು ದಿನಗಳ ಕಾಲ ಬೃಹತ್​ ಪ್ರತಿಭಟನೆ ನಡೆಸಿದ್ದರು.

ಕುಸ್ತಿಪಟುಗಳ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಕ್ರೀಡಾ ಸಚಿವಾಲಯವು ಮಹಿಳಾ ಬಾಕ್ಸರ್‌ ಎಂ.ಸಿ.ಮೇರಿ ಕೋಮ್‌ ನೇತೃತ್ವದ ಐವರು ಸದಸ್ಯರ ಸಮಿತಿಯನ್ನು ರಚಿಸಿತ್ತು.

SCROLL FOR NEXT