ಕ್ರೀಡೆ

ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ನೀರಜ್ ಚೋಪ್ರಾ

Lingaraj Badiger

ಬುಡಾಪೆಸ್ಟ್‌: ಹಂಗೇರಿಯ ಬುಡಾಪೆಸ್ಟ್‌ನಲ್ಲಿ ಶುಕ್ರವಾರ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2023 ರಲ್ಲಿ ಜಾವೆಲಿನ್​ ತಾರೆ ನೀರಜ್ ಚೋಪ್ರಾ ಅವರು 88.77 ಮೀಟರ್ ಎಸೆಯುವ ಮೂಲಕ ಫೈನಲ್‌ಗೆ ಪ್ರವೇಶಿಸಿದ್ದಾರೆ ಮತ್ತು ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿದ್ದಾರೆ.

ಜಾವೆಲಿನ್ ಥ್ರೋ ಸ್ಪರ್ಧೆಯ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಅವರು ಮೊದಲ ಪ್ರತಯತ್ನದಲ್ಲೇ 88.77 ಮೀಟರ್ ಎಸೆಯುವ ಮೂಲಕ ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ತಮ್ಮ ಅಭಿಯಾನ ಆರಂಭಿಸಿದರು. 

ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗುವತ್ತ ನೀರಜ್ ಚೋಪ್ರಾ ಚಿತ್ತಹರಿಸಿದ್ದಾರೆ. ಫೈನಲ್ ಸ್ಪರ್ಧೆಯು ರವಿವಾರ ನಡೆಯಲಿದೆ.

ನೀರಜ್ ಚೋಪ್ರಾ ಅವರು ಕಳೆದ ವರ್ಷ ಅಮೆರಿಕದಲ್ಲಿ ನಡೆದಿದ್ದ ಕೂಟದಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ಈ ಬಾರಿ ಸುಧಾರಿತ ಪ್ರದರ್ಶನದೊಂದಿಗೆ ಚಿನ್ನ ಗೆಲ್ಲುವ ತವಕದಲ್ಲಿದ್ದಾರೆ. ಕಿಶೋರ್‌ ಜೆನಾ ಹಾಗೂ ಕರ್ನಾಟಕದ ಡಿ.ಪಿ. ಮನು ಕೂಡಾ ಜಾವೆಲಿನ್‌ನ ಅರ್ಹತಾ ಸುತ್ತಿನಲ್ಲಿ ಸ್ಪರ್ಧಿಸಲಿದ್ದು, ಫೈನಲ್‌ಗೇರುವ ನಿರೀಕ್ಷೆಯಲ್ಲಿದ್ದಾರೆ.

SCROLL FOR NEXT