ಬಜರಂಗ್ ಪುನಿಯಾ 
ಕ್ರೀಡೆ

WFI ಅಧ್ಯಕ್ಷರಾಗಿ ಬ್ರಿಜ್ ಭೂಷಣ್ ಆಪ್ತನ ಆಯ್ಕೆ ವಿರೋಧಿಸಿ ಪದ್ಮಶ್ರೀ ಹಿಂದಿರುಗಿಸಿದ ಬಜರಂಗ್ ಪುನಿಯಾ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಅವರು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ(ಡಬ್ಲ್ಯುಎಫ್‌ಐ)ದ ಅಧ್ಯಕ್ಷರಾಗಿ...

ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಅವರು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ(ಡಬ್ಲ್ಯುಎಫ್‌ಐ)ದ ಅಧ್ಯಕ್ಷರಾಗಿ ಆಯ್ಕೆಯಾಗಿರುವುದನ್ನು ವಿರೋಧಿಸಿ ರಿಯೊ ಒಲಿಂಪಿಕ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್ ಅವರು ಕುಸ್ತಿಗೆ ವಿದಾಯ ಹೇಳಿದ ಬೆನ್ನಲ್ಲೇ, ಮತ್ತೊಬ್ಬ ಕುಸ್ತಿ ಪಟು ಬಜರಂಗ್ ಪೂನಿಯಾ ಅವರು ತಮ್ಮ ಪದ್ಮಶ್ರೀ ಪ್ರಶಸ್ತಿ ಹಿಂದಿರುಗಿಸುವುದಾಗಿ ಶುಕ್ರವಾರ ಪ್ರಕಟಿಸಿದ್ದಾರೆ.

ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಬಜರಂಗ್ ಪೂನಿಯಾ ಅವರು,  ‘ನಾನು ಪ್ರಶಸ್ತಿಗಳನ್ನು ಪಡೆದಾಗ ಮೋಡದಲ್ಲಿ ತೇಲುತ್ತಿದ್ದೆ. ಆದರೆ ಇಂದು ದುಃಖವು ಹೆಚ್ಚು ಭಾರವಾಗಿದೆ. ನಾನು ನನ್ನ ಪದ್ಮಶ್ರೀ ಪ್ರಶಸ್ತಿಯನ್ನು ಹಿಂತಿರುಗಿಸುತ್ತಿದ್ದೇನೆ’ ಎಂದು ತಿಳಿಸಿದ್ದಾರೆ.

ಪ್ರಧಾನಿಗೆ ಬರೆದ ಪತ್ರವನ್ನು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಜರಂಗ್ ಪೂನಿಯಾ, “ಗೌರವಾನ್ವಿತ ಪ್ರಧಾನಮಂತ್ರಿಗಳೇ, ನೀವು ಆರೋಗ್ಯವಾಗಿದ್ದೀರಿ ಎಂದು ಭಾವಿಸುತ್ತೇವೆ. ಸದಾ ದೇಶ ಸೇವೆಯಲ್ಲಿ ನಿರತರಾಗಿದ್ದೀರಿ. ನಿಮ್ಮ ಬಿಡುವಿಲ್ಲದ ವೇಳಾಪಟ್ಟಿಯ ನಡುವೆ, ನಮ್ಮ ಕುಸ್ತಿಯತ್ತ ನಿಮ್ಮ ಗಮನವನ್ನು ಸೆಳೆಯಲು ನಾನು ಬಯಸುತ್ತೇನೆ. ಈ ವರ್ಷದ ಜನವರಿ ತಿಂಗಳಿನಲ್ಲಿ ದೇಶದ ಮಹಿಳಾ ಕುಸ್ತಿಪಟುಗಳು ಕುಸ್ತಿ ಅಸೋಸಿಯೇಷನ್‌ನ ಉಸ್ತುವಾರಿ ವಹಿಸಿದ್ದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಮಾಡಿದ್ದರು ಎಂದು ನಿಮಗೆ ತಿಳಿದಿರಬೇಕು.

ಇದೇ ವರ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದರು. ನಾನು ಕೂಡ ಅವರ ಪ್ರತಿಭಟನೆಗೆ ಸೇರಿಕೊಂಡಿದ್ದೆ. ಸರ್ಕಾರವು ಕಠಿಣ ಕ್ರಮದ ಭರವಸೆ ನೀಡಿದ ನಂತರ ನಾವು ನಮ್ಮ ಹೋರಾಟವನ್ನು ವಾಪಸ್ ಪಡೆದೆವು ಎಂದು ಹೇಳಿದ್ದಾರೆ.

ಪ್ರತಿಭಟನೆ ವಾಪಸ್ ಪಡೆದ ಮೂರು ತಿಂಗಳ ನಂತರವೂ ಬ್ರಿಜ್ ಭೂಷಣ್ ವಿರುದ್ಧ ಯಾವುದೇ ಎಫ್ಐಆರ್ ದಾಖಲಾಗಿರಲಿಲ್ಲ. ನಾವು ಮತ್ತೆ ಏಪ್ರಿಲ್‌ನಲ್ಲಿ ಬೀದಿಗಿಳಿದಿದ್ದರಿಂದ ಪೊಲೀಸರು ಅವರ ವಿರುದ್ಧ ಕೇವಲ ಒಂದೇಒಂದು ಎಫ್ಐಆರ್ ದಾಖಲಿಸಿದ್ದಾರೆ. ಜನವರಿಯಲ್ಲಿ 19 ದೂರುದಾರರಿದ್ದರು, ಆದರೆ, ಏಪ್ರಿಲ್ ವೇಳೆಗೆ ಅವರ ಸಂಖ್ಯೆ 7ಕ್ಕೆ ಇಳಿದಿದೆ. ಇದರರ್ಥ ಬ್ರಿಜ್ ಭೂಷಣ್ ಅವರು 12 ಮಹಿಳಾ ಕುಸ್ತಿಪಟುಗಳ ಮೇಲೆ ತಮ್ಮ ಪ್ರಭಾವವನ್ನು ಬೀರಿದ್ದಾರೆ’ ಎಂದು ಪುನಿಯಾ ಬೇಸರ ವ್ಯಕ್ತಪಡಿಸಿದ್ದಾರೆ.

ಇದೀಗ ನಡೆದ WFI ಮುಖ್ಯಸ್ಥರ ಚುನಾವಣೆಯಲ್ಲಿ ಬ್ರಿಜ್ ಭೂಷಣ್ ಸಿಂಗ್ ಅವರ ಆಪ್ತರಾದ ಸಂಜಯ್ ಸಿಂಗ್ ಅವರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆಯೇ ಬ್ರಿಜ್ ಭೂಷಣ್ ಅವರು ಚುನಾವಣೆಯಲ್ಲಿ ನಾವೇ ಎಂದಿನಂತೆ ಒಕ್ಕೂಟದ ಮೇಲೆ ಮೇಲುಗೈ ಸಾಧಿಸುವುದಾಗಿ ಹೇಳಿದ್ದರು. ಈಗ ಅವರ ಹೇಳಿಕೆಯಂತೆಯೇ ಆಗಿದೆ. ಏನು ಮಾಡಬೇಕೆಂದು ಅಥವಾ ಎಲ್ಲಿಗೆ ಹೋಗಬೇಕೆಂದು ನಮಗೆ ಅರ್ಥವಾಗಲಿಲ್ಲ. ಸರ್ಕಾರ ನಮಗೆ ಸಾಕಷ್ಟು ನೀಡಿದೆ. ನನಗೆ 2019 ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಯಿತು. ನಾನು ಅರ್ಜುನ, ಖೇಲ್ ರತ್ನ ಪ್ರಶಸ್ತಿಯನ್ನು ಸಹ ಪಡೆದಿದ್ದೇನೆ. ಈ ಪ್ರಶಸ್ತಿಗಳನ್ನು ಪಡೆದಾಗ, ನಾನು ಆಗಸದಲ್ಲಿ ತೇಲಿದ್ದೆ. ಆದರೆ ಇಂದು ದುಃಖವು ಹೆಚ್ಚು ಭಾರವಾಗಿದೆ. ಮಹಿಳಾ ಕುಸ್ತಿಪಟು ಅಭದ್ರತೆಯಿಂದಾಗಿ ಈ ಕ್ರೀಡೆಯನ್ನು ತೊರೆಯುತ್ತಿದ್ದಾರೆ ಎಂದು ಬಜರಂಗ್ ಪುನಿಯಾ ಅವರು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT