ಕ್ರೀಡೆ

ರಾಷ್ಟ್ರೀಯ ಕುಸ್ತಿ ಫೆಡರೇಷನ್ ಸಂಸ್ಥೆ ಅಮಾನತು ಮಾಡಿದ ಕೇಂದ್ರ ಸರ್ಕಾರ

Manjula VN

ನವದೆಹಲಿ: ಸಂಜಯ್ ಸಿಂಗ್ ನೇತೃತ್ವದ ಕುಸ್ತಿ ಫೆಡರೇಶನ್ ನ ಹೊಸ ಸಮಿತಿಯನ್ನು ಕ್ರೀಡಾ ಸಚಿವಾಲಯವು ಅಮಾನತುಗೊಳಿಸಿದೆ.

ಅಸ್ತಿತ್ವದಲ್ಲಿರುವ ನಿಯಮಗಳು ಮತ್ತು ನಿಬಂಧನೆಗಳಿಗೆ ಡಬ್ಲ್ಯೂಎಫ್ಐ ಸಂಪೂರ್ಣ ನಿರ್ಲಕ್ಷ್ಯವನ್ನು ತೋರಿಸಿದೆ ಎಂದು ಉಲ್ಲೇಖಿಸಿ ಸಚಿವಾಲಯವು ಡಿಸೆಂಬರ್ 24 ರ ರವಿವಾರದಂದು ತನ್ನ ನಿರ್ಧಾರವನ್ನು ಪ್ರಕಟಿಸಿದೆ.

ಹೊಸದಾಗಿ ಆಯ್ಕೆಯಾದ ಸಂಸ್ಥೆಯ ಅಧ್ಯಕ್ಷ ಸಂಜಯ್ ಕುಮಾರ್ ಸಿಂಗ್ ಡಿಸೆಂಬರ್ 21 ರಂದು ಜೂನಿಯರ್ ರಾಷ್ಟ್ರೀಯ ಸ್ಪರ್ಧೆಗಳು ಈ ವರ್ಷಾಂತ್ಯದ ಮೊದಲು ಪ್ರಾರಂಭವಾಗಲಿದೆ ಎಂದು ಘೋಷಿಸಿದರು ಎಂದು ಸಚಿವಾಲಯ ಉಲ್ಲೇಖಿಸಿದೆ.

ಇದು ನಿಯಮಗಳಿಗೆ ವಿರುದ್ಧವಾಗಿದೆ ಮತ್ತು ಕುಸ್ತಿಪಟುಗಳು ತಯಾರಾಗಲು ಕನಿಷ್ಠ 15 ದಿನಗಳ ಸೂಚನೆ ಅಗತ್ಯವಿದೆ ಎಂದು ಸಚಿವಾಲಯ ವಿವರಿಸಿದೆ.

ಅಂತಹ ನಿರ್ಧಾರಗಳನ್ನು ಕಾರ್ಯಕಾರಿ ಸಮಿತಿಯು ತೆಗೆದುಕೊಳ್ಳಬೇಕು, ಅದಕ್ಕೂ ಮೊದಲು ಕಾರ್ಯಸೂಚಿಗಳನ್ನು ಪರಿಗಣನೆಗೆ ಇರಿಸಬೇಕಾಗುತ್ತದೆ. ಹೊಸದಾಗಿ ಚುನಾಯಿತ ಸಮಿತಿಯು ಕ್ರೀಡಾ ಸಂಹಿತೆಯನ್ನು ಸಂಪೂರ್ಣವಾಗಿ ಕಡೆಗಣಿಸಿ. ಮಾಜಿ ಪದಾಧಿಕಾರಿಗಳ ಸಂಪೂರ್ಣ ನಿಯಂತ್ರಣವನ್ನು ತೋರುತ್ತಿದೆ" ಎಂದು ಸಚಿವಾಲಯ ಆರೋಪಿಸಿದೆ.

SCROLL FOR NEXT