ದೀಪಾ ಕರ್ಮಕರ್ 
ಕ್ರೀಡೆ

ನಿಷೇಧಿತ ವಸ್ತು ಬಳಕೆ; ಜಿಮ್ನಾಸ್ಟ್ ದೀಪಾ ಕರ್ಮಾಕರ್ 21 ತಿಂಗಳು ಅಮಾನತು

ಜಿಮ್ನಾಸ್ಟ್ ದೀಪಾ ಕರ್ಮಕರ್ ಅವರು ನಿಷೇಧಿತ ವಸ್ತುವನ್ನು ಬಳಸಿದ್ದಕ್ಕಾಗಿ ಅಂತಾರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ITA) 21 ತಿಂಗಳ ಕಾಲ ನಿಷೇಧ ಹೇರಿದೆ.

ನವದೆಹಲಿ: ಜಿಮ್ನಾಸ್ಟ್ ದೀಪಾ ಕರ್ಮಕರ್ ಅವರು ನಿಷೇಧಿತ ವಸ್ತುವನ್ನು ಬಳಸಿದ್ದಕ್ಕಾಗಿ ಅಂತಾರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ITA) 21 ತಿಂಗಳ ಕಾಲ ನಿಷೇಧ ಹೇರಿದೆ.

ಪರೀಕ್ಷಾ ವರದಿಯಲ್ಲಿ ದೀಪಾ ನಿಷೇಧಿತ ವಸ್ತುವಾದ ಹೈಜೆನಮೈನ್ ಸೇವಿಸಿರುವುದು ಪತ್ತೆಯಾಗಿದೆ. ಐಟಿಎ ದೀಪಾ ಕರ್ಮಾಕರ್ ಅವರನ್ನು 21 ತಿಂಗಳ ಕಾಲ ಅಮಾನತುಗೊಳಿಸಿದೆ. ಅವರ ಅಮಾನತು 10 ಜುಲೈ 2023 ರವರೆಗೆ ಜಾರಿಯಲ್ಲಿರುತ್ತದೆ.

ದೀಪಾ ಅವರ ರಕ್ತದ ಮಾದರಿಯನ್ನು 2021ರ ಅಕ್ಟೋಬರ್ 11ರಂದು ಫೆಡರೇಶನ್ ಇಂಟರ್ನ್ಯಾಷನಲ್ ಡಿ ಜಿಮ್ನಾಸ್ಟಿಕ್ಸ್ (FIG) ಸ್ಪರ್ಧೆಯ ಹೊರಗಿನ ನಿಯಂತ್ರಣದ ಭಾಗವಾಗಿ ಸಂಗ್ರಹಿಸಿತ್ತು. ಇದನ್ನು ಪರೀಕ್ಷಿಸಿದಾಗ, ಇದು ಹೈಜೆನಮೈನ್ ಪಾಸಿಟಿವ್ ಎಂದು ಕಂಡುಬಂದಿದೆ. ಇದನ್ನು ವಿಶ್ವ ಉದ್ದೀಪನ ಮದ್ದು ತಡೆ ಏಜೆನ್ಸಿಯಿಂದ ನಿಷೇಧಿತ ಪಟ್ಟಿಗೆ ಸೇರಿಸಲಾಗಿದೆ.

ದೀಪಾ ಭಾರತದ ಅಗ್ರ ಜಿಮ್ನಾಸ್ಟ್
ತ್ರಿಪುರಾ ಮೂಲದ ದೀಪಾ ಕರ್ಮಕರ್ ಭಾರತದ ಅಗ್ರ ಜಿಮ್ನಾಸ್ಟ್. 2016ರ ರಿಯೊ ಒಲಿಂಪಿಕ್ಸ್‌ನಲ್ಲಿ ನಾಲ್ಕನೇ ಸ್ಥಾನ ಗಳಿಸಿದ್ದರು. 2018 ರಲ್ಲಿ, ಅವರು ಟರ್ಕಿಯ ಮರ್ಸಿನ್‌ನಲ್ಲಿ ನಡೆದ FIG ಆರ್ಟಿಸ್ಟಿಕ್ ಜಿಮ್ನಾಸ್ಟಿಕ್ಸ್ ವರ್ಲ್ಡ್ ಚಾಲೆಂಜ್ ಕಪ್‌ನ ವಾಲ್ಟ್ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ಗೆದ್ದರು. ಈ ಸಾಧನೆ ಮಾಡಿದ ಭಾರತದ ಮೊದಲ ಜಿಮ್ನಾಸ್ಟ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ದೀಪಾ ಕರ್ಮಕರ್ 2021 ರಿಂದ ಅಮಾನತು ಎದುರಿಸುತ್ತಿದ್ದಾರೆ. ಇದೇ ವೇಳೆ ದೀಪಾ ಕೂಡ ವಿವಿಧ ಗಾಯಗಳೊಂದಿಗೆ ಹೋರಾಡುತ್ತಿದ್ದಾರೆ. 2017ರಲ್ಲಿ ಅವರಿಗೆ ಶಸ್ತ್ರಚಿಕಿತ್ಸೆ ಕೂಡ ಆಗಿತ್ತು. ಅವರು ತಮ್ಮ ಕೊನೆಯ ವಿಶ್ವಕಪ್ ನ್ನು 2019 ರಲ್ಲಿ ಆಡಿದರು. ಗಾಯದಿಂದಾಗಿ ದೀಪಾ 2019ರ ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಲು ಸಾಧ್ಯವಾಗಲಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!