ಚಿರಾಗ್ ಶೆಟ್ಟಿ-ಸ್ವಾತಿಕ್ ಸಾಯಿರಾಜ್ 
ಕ್ರೀಡೆ

ಇಂಡೋನೇಷ್ಯಾ ಓಪನ್ ಗೆದ್ದು ಇತಿಹಾಸ ಬರೆದ ಭಾರತದ ಸಾತ್ವಿಕ್-ಚಿರಾಗ್ ಜೋಡಿ!

ಇಂಡೋನೇಷ್ಯಾ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿಯ ಚಾಂಪಿಯನ್​ ಪಟ್ಟ ಅಲಂಕರಿಸುವ ಮೂಲಕ ಭಾರತದ ಸಾತ್ವಿಕ್‌ ಸಾಯಿರಾಜ್‌ ರಾಂಕಿ ರೆಡ್ಡಿ-ಚಿರಾಗ್‌ ಶೆಟ್ಟಿ ಇತಿಹಾಸ ನಿರ್ಮಿಸಿದೆ.

ಜಕಾರ್ತಾ: ಇಂಡೋನೇಷ್ಯಾ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿಯ ಚಾಂಪಿಯನ್​ ಪಟ್ಟ ಅಲಂಕರಿಸುವ ಮೂಲಕ ಭಾರತದ ಸಾತ್ವಿಕ್‌ ಸಾಯಿರಾಜ್‌ ರಾಂಕಿ ರೆಡ್ಡಿ-ಚಿರಾಗ್‌ ಶೆಟ್ಟಿ ಇತಿಹಾಸ ನಿರ್ಮಿಸಿದೆ. 

ಶನಿವಾರ ಫೈನಲ್​ಗೆ ಲಗ್ಗೆ ಇಡುವ ಮೂಲಕ ವರ್ಲ್ಡ್ ಟೂರ್‌ ಸೂಪರ್‌-1000ನಲ್ಲಿ ಈ ಸಾಧನೆ ಮಾಡಿದ ಮೊದಲ ಜೋಡಿ ಎಂಬ ಹಿರಿಮೆ ಪಾತ್ರರಾಗಿದ್ದರು. ಇದೀಗ ಚೊಚ್ಚಲ ಪ್ರಶಸ್ತಿ ಗೆದ್ದು ಅಭೂತಪೂರ್ವ ಸಾಧನೆ ಮಾಡಿದ್ದಾರೆ.

ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಸಾತ್ವಿಕ್-ಚಿರಾಗ್ 21-17, 21-18 ಸೆಟ್ ಗಳ ಮೂಲಕ ಮಲೇಷ್ಯಾದ ಆರೋನ್ ಚಿಯಾ ಮತ್ತು ವೂಯಿ ಯಿಕ್ ಸೊಹ್ ಜೋಡಿಯನ್ನು ಸೋಲಿಸಿದರು. ಇದರೊಂದಿಗೆ ಸೂಪರ್-1000 ಟೂರ್ನಿ ಗೆದ್ದ ಮೊದಲ ಭಾರತೀಯ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು.

ಅಂತಿಮ ಪಂದ್ಯದ ವೇಳೆ, ಸಾತ್ವಿಕ್-ಚಿರಾಗ್ ಮೊದಲ ಗೇಮ್‌ನ ಆರಂಭದಲ್ಲಿ ತತ್ತರಿಸಿದ ನಂತರ ತಮ್ಮ ವೇಗವನ್ನು ಹೆಚ್ಚಿಸಿದರು. ಆಟದ ಮಧ್ಯಂತರ ವಿರಾಮದವರೆಗೆ 11-9 ಮುನ್ನಡೆ ಸಾಧಿಸಿದರು. ಇದಾದ ಬಳಿಕ ತಮ್ಮ ಪ್ರಾಬಲ್ಯವನ್ನು ಕಾಯ್ದುಕೊಂಡ ಭಾರತದ ಜೋಡಿ ಮೊದಲ ಗೇಮ್ ಅನ್ನು ನಿರಾಯಾಸವಾಗಿ ಗೆದ್ದುಕೊಂಡಿತು. ಎರಡನೆ ಗೇಮ್‌ನಲ್ಲಿ ಸಾತ್ವಿಕ್-ಚಿರಾಗ್ ಅದ್ಬುತವಾಗಿ ಆರಂಭಿಸಿದರು. ಆದಾಗ್ಯೂ, ಮಲೇಷ್ಯಾ ಜೋಡಿ ನಂತರ ಮರಳಿತು. ಆದರೆ ಅಷ್ಟು ಹೊತ್ತಿಗೆ ಕಾಲ ಮಿಂಚಿ ಹೋಗಿತ್ತು. ಈ ಫೈನಲ್ ಪಂದ್ಯ 43 ನಿಮಿಷಗಳ ಕಾಲ ನಡೆಯಿತು.

ವಿಶ್ವ ರ‍್ಯಾಂಕಿಂಗ್‌ನಲ್ಲಿ ಆರನೇ ಸ್ಥಾನದಲ್ಲಿರುವ ಭಾರತದ ಜೋಡಿ ಮೊದಲ ಬಾರಿಗೆ ಸೂಪರ್-1000 ಟೂರ್ನಿಯ ಫೈನಲ್ ತಲುಪಿತ್ತು. ಸಾತ್ವಿಕ್-ಚಿರಾಗ್ ಸೂಪರ್-1000 ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಜೋಡಿ ಎನಿಸಿಕೊಂಡಿದ್ದಾರೆ. ಸಾತ್ವಿಕ್-ಚಿರಾಗ್ ಸೆಮಿಫೈನಲ್‌ನಲ್ಲಿ ಕೊರಿಯಾದ ಮಿನ್ ಹ್ಯುಕ್ ಕಾಂಗ್ ಮತ್ತು ಸೆಯುಂಗ್ ಜೇ ಸಿಯೊ ಅವರನ್ನು 17-21 21-19 21-18 ಸೆಟ್‌ಗಳಿಂದ ಸೋಲಿಸಿ ಪ್ರಶಸ್ತಿ ಸುತ್ತಿಗೆ ಪ್ರವೇಶಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!